Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ಗೆ ಸಹಕಾರಿಗಳಿಂದ ಅಭಿನಂದನೆ
    News

    ನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ಗೆ ಸಹಕಾರಿಗಳಿಂದ ಅಭಿನಂದನೆ

    adminBy adminSeptember 10, 2025

    ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರನ್ನು ಭಾರತದಾದ್ಯಂತ ಸಹಕಾರಿ ಧುರೀಣರು ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಮಟ್ಟದ ಸಹಕಾರಿ ಸಂಸ್ಥೆಗಳಿಂದ ಹಿಡಿದು ತಳಮಟ್ಟದ ನಾಯಕರವರೆಗೆ, ಎನ್‌ಡಿಎ ಅಭ್ಯರ್ಥಿಯ ಗೆಲುವನ್ನು ಅಭಿನಂದಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಮಂಗಳವಾರ ಉಪರಾಷ್ಟ್ರಪತಿ ಚುನಾವಣೆ ನಡೆದಿದ್ದು, ಸಿ.ಪಿ ರಾಧಾಕೃಷ್ಣನ್‌ ಅವರು, ಇಂಡಿಯಾ ಕೂಟದ ಅಭ್ಯರ್ಥಿ ಆರ್‌.ಸುದರ್ಶನ ರೆಡ್ಡಿ ಅವರನ್ನು ಸೋಲಿಸಿ ಉಪರಾಷ್ಟ್ರಪತಿ ಹುದ್ದೆಗೆ ಏರಿದ್ದರು. ಫಲಿತಾಂಶ ಘೋಷಣೇಯಾದ ಸ್ವಲ್ಪ ಹೊತ್ತಿನಲ್ಲೇ ಭಾರತದ ರಾಷ್ಟ್ರೀಯ ಸಹಕಾರಿ ಒಕ್ಕೂಟ (ಎನ್‌ಸಿಯುಐ) ಅಧ್ಯಕ್ಷ ದಿಲೀಪ್‌ ಸಂಘಾನಿ, ಸಿ.ಪಿ. ರಾಧಾಕೃಷ್ಣನ್ ಅವರನ್ನು ಅಭಿನಂದಿಸಿದ್ದಾರೆ. ಸಹಕಾರ ಭಾರತಿ ಅಧ್ಯಕ್ಷ ಉದಯ್ ಜೋಶಿ ಶುಭಾಶಯ ತಿಳಿಸಿದ್ದಾರೆ. ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಅಧ್ಯಕ್ಷ ವಿಶಾಲ್ ಸಿಂಗ್ ಕೂಡ ಸಿ.ಪಿ ರಾಧಾಕೃಷ್ಣನ್‌ ಅವರನ್ನು ಅಭಿನಂದಿಸಿದ್ದಾರೆ. ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC) ಮಂಡಳಿ ಸದಸ್ಯ ಧನಂಜಯ್ ಸಿಂಗ್ ರಾಧಾಕೃಷ್ಣನ್ ಅವರನ್ನು ಅಭಿನಂದಿಸಿದ್ದು ಅವರ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಧಾಕೃಷ್ಣನ್‌ ಅವರ ನಾಯಕತ್ವ ಮತ್ತು ಸ್ಫೂರ್ತಿದಾಯಕ ಮಾರ್ಗದರ್ಶನದಲ್ಲಿ ದೇಶವು ಹೊಸ ಆವೇಗ ಮತ್ತು ಶಕ್ತಿ ಪಡೆಯುತ್ತದೆ ಮತ್ತು ಪ್ರಜಾಪ್ರಭುತ್ವದ ಆದರ್ಶಗಳು ಆಳವಾಗಿ ಬಲಗೊಳ್ಳುತ್ತವೆ ಎಂದು ನಾವು ನಂಬುತ್ತೇವೆ ಎಂದು ಅವರು ತಮ್ಮ ಶುಭಾಶಯದಲ್ಲಿ ತಿಳಿಸಿದ್ದಾರೆ.


    ತಮಿಳುನಾಡಿನ ಹಿರಿಯ ರಾಜಕೀಯ ನಾಯಕ ಮತ್ತು ಎರಡು ಬಾರಿ ಸಂಸತ್ ಸದಸ್ಯರಾಗಿರುವ ರಾಧಾಕೃಷ್ಣನ್, ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳನ್ನು ಪಡೆದಿದ್ದು ಅವರ ಎದುರಾಳಿ ಸುದರ್ಶನ ರೆಡ್ಡಿ 300 ಮತ ಗಳಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    15th Vice President Dileepbhai Sanghani National Cooperative Consumers’ Federation (NCCF) National Cooperative Development Corporation (NCDC) National Cooperative Union of India (NCUI) Sahakar Bharati President Uday Joshi Vice-President Shri C.P. Radhakrishnan
    Previous Articleಸಮಾಜ ಸೇವಾ ಸಹಕಾರಿ ಸಂಘದಿಂದ ಶೇ.17 ಡಿವಿಡೆಂಡ್ ಘೋಷಣೆ
    Next Article ಸೆ.14ರಂದು ಶಿವಬಸವ ನೌಕರರ ಸೌಹಾರ್ದ ಸಹಕಾರಿ ಸಂಘ ಗುಬ್ಬಿ ಇದರ ಮಹಾಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.