ಗುಬ್ಬಿ: ಶಿವಬಸವ ನೌಕರರ ಸೌಹಾರ್ದ ಸಹಕಾರಿ ಸಂಘ ಹೆಂಜೇರು ನಿಲಯ ಕುವೆಂಪು ನಗರ ರಸ್ತೆ ಗುಬ್ಬಿ ಇದರ 2024-2025ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 14ರಂದು ಗುಬ್ಬಿ ಎಂ.ಜಿ ರಸ್ತೆಯ ಶುಭೋದಯ ಆಂಗ್ಲ ಶಾಲಾ ಆವರಣದಲ್ಲಿ ನಿಗದಿಯಾಗಿದೆ.
https://chat.whatsapp.com/EbVKVnWB6rlHT1mWtsgbch
ಬೆಳಗ್ಗೆ 11ಕ್ಕೆ ಸಭೆ ನಿಗದಿಯಾಗಿದ್ದು ಶಿವಬಸವ ನೌಕರರ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷರಾದ ಎಸ್.ಯೋಗಾನಂದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತುಮಕೂರು ಜಿಲ್ಲಾಧ್ಯಕ್ಷರಾದ ಉಮೇಶ್, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗುಬ್ಬಿ ತಾಲೂಕು ಅಧ್ಯಕ್ಷರಾದ ಸೋಮಶೇಖರಯ್ಯ ಎಚ್.ಸಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತುರುವೇಕೆರೆ ತಾಲೂಕು ಘಟಕದ ಅಧ್ಯಕ್ಷರಾದ ಪರಶಿವಮೂರ್ತಿ ಎಸ್.ಎನ್, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತುಮಕೂರು ತಾಲೂಕು ಘಟಕದ ಅಧ್ಯಕ್ಷರಾದ ನಿಜಲಿಂಗಪ್ಪ ಭಾಗವಹಿಸಲಿದ್ದಾರೆ.

ಶಿವಬಸವ ನೌಕರರ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶಿವಣ್ಣ ಟಿ.ಎಸ್., ಕಾರ್ಯಕಾರಿ ಮಂಡಳಿಯ ಸದಸ್ಯರಾದ ಉಮೇಶ್, ಅಡವೀಶ, ಎನ್.ಎಸ್. ರಾಜಣ್ಣ, ಶಿವಕುಮಾರ್ ಸಿ.ಎಸ್., ನಿಜಾನಂದಮೂರ್ತಿ, ಹೆಚ್.ಸಿ. ಸೋಮಶೇಖರಯ್ಯ, ಕೆ.ಪಿ. ರೇಣುಕಪ್ರಸಾದ್, ದಾಕ್ಷಾಯಣಮ್ಮ, ಲಕ್ಷ್ಮೀದೇವಮ್ಮ, ರವೀಶ್, ಷಣ್ಮುಖಪ್ಪ, ಪರಶಿವಮೂರ್ತಿ ಎಸ್.ಎನ್. ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ್ ಎಲ್.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com









