ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿ ಆಚರಣೆಯನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
https://chat.whatsapp.com/EbVKVnWB6rlHT1mWtsgbch
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಪುರೋಹಿತರಾದ ಮನೋಜ್ ಶಾಂತಿ ಗುರುಪೂಜೆ ನಡೆಸಿ, ಪ್ರಸಾದ ವಿತರಣೆ ಮಾಡಿದರು. ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ರಮಾನಾಥ್ ಸನಿಲ್, ದಿವಾಕರ್ ಬಿ.ಪಿ, ಗೋಪಾಲ್ ಎಮ್, ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಾಮನ್ ಕೆ ಹಾಗೂ ಸಂಘದ ಸದಸ್ಯರು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


