Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2.58 ಕೋಟಿ ರೂ. ನಿವ್ವಳ ಲಾಭ, ಶೇ.25 ಡಿವಿಡೆಂಡ್ ಘೋಷಣೆ
    News

    ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2.58 ಕೋಟಿ ರೂ. ನಿವ್ವಳ ಲಾಭ, ಶೇ.25 ಡಿವಿಡೆಂಡ್ ಘೋಷಣೆ

    adminBy adminSeptember 11, 2025

    ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ವಿನಯಕುಮಾರ್ ಸೂರಿಂಜೆ ಅವರಿಗೆ ಗೌರವಾರ್ಪಣೆ

    ಸುರತ್ಕಲ್‌: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘವು 2.58 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸಂಘವು ಸತತವಾಗಿ ‘ಎ’ ಆಡಿಟ್ ವರ್ಗೀಕರಣ ಹೊಂದಿದ್ದು, ಸದಸ್ಯರಿಗೆ ಶೇ.25 ಡಿವಿಡೆಂಡ್ ನೀಡಲಾಗುವುದು ಎಂದು ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್‌ ಹೇಳಿದರು.

    https://chat.whatsapp.com/EbVKVnWB6rlHT1mWtsgbch
    ಸುರತ್ಕಲ್ ಬಂಟರ ಭವನದಲ್ಲಿ ಇತ್ತೀಚೆಗೆ ಜರಗಿದ ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ 49ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘವು 5 ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪಡೆದಿದ್ದು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ 6 ಬಾರಿ ‘ಸಾಧನಾ’ ಪ್ರಶಸ್ತಿ ಪಡೆದಿದೆ. ಪ್ರಸಕ್ತ ಸಾಲಿನಲ್ಲಿ ಸಂಘವು 101 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದ್ದು 77 ಕೋಟಿ ರೂ. ಠೇವಣಿ ಹೊಂದಿದೆ. 0.80 ಕೋಟಿ ರೂ. ಪಾಲು ಬಂಡವಾಳ, 46 ಕೋಟಿ ರೂ. ಹೊರಬಾಕಿ ಸಾಲ ಹೊಂದಿರುವ ಸಂಘವು 328 ಕೋಟಿ ರೂ. ವ್ಯವಹಾರ ನಡೆಸಿದೆ ಎಂದು ತಿಳಿಸಿದರು.
    ಸಂಘದ ಸದಸ್ಯರ ಮಕ್ಕಳಿಗೆ 3,59,750 ರೂ. ವಿದ್ಯಾರ್ಥಿವೇತನ ನೀಡಲಾಗಿದ್ದು ಸಂಘದ ಸಾಮೂಹಿಕ ಕಲ್ಯಾಣ ನಿಧಿಯನ್ನು ಬಳಸಿಕೊಂಡು ಸಾಮಾಜಿಕ, ಧಾರ್ಮಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳಿಗಾಗಿ 2,32,222 ರೂ. ನೀಡಲಾಗಿದೆ. ಈ ವರ್ಷದ ಗಾಂಧಿ ಜಯಂತಿಯಂದು ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.


    ಕಾರ್ಯಕ್ರಮದಲ್ಲಿ ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಹಿರಿಯ ನಿರ್ದೇಶಕರೂ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರೂ ಆದ ಕರ್ನಾಟಕ ಸರಕಾರದ ಸಹಕಾರ ಇಲಾಖೆಯಿಂದ ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತರಾದ ವಿನಯಕುಮಾರ್ ಸೂರಿಂಜೆ ಅವರನ್ನು ಅಭಿನಂದಿಸಲಾಯಿತು. ಸಂಘದ ಉಪಾಧ್ಯಕ್ಷರಾದ ವಿಟ್ಠಲ ಸಾಲ್ಯಾನ್ ಕುಳಾಯಿ, ನಿರ್ದೇಶಕರಾದ ಎಂ.ಅಚ್ಯುತ, ಶಶಿಧರ ಶೆಟ್ಟಿ, ಪ್ರಸಾದ್ ಎನ್. ಅಂಚನ್, ಗೀತಾ ಗೋಪಾಲ್, ಅನಿತಾ ರಾಜೇಶ್, ಕವಿತಾ, ಐ.ಬಾಬುಚಂದ್ರ, ಓಂಪ್ರಕಾಶ್ ಶೆಟ್ಟಿಗಾರ್, ಜಯಂತ ಆ‌ರ್.ಸಾಲ್ಯಾನ್ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲತಾ ಗುಜರನ್ ಸ್ವಾಗತಿಸಿ, ಉಪ ಕಾರ್ಯದರ್ಶಿ ರವಿ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಸುಜೀರ್ ಶೆಟ್ಟಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Ashok Shetty Tadambail Cooperative Cooperative Department Sadhana award Suratkal Vyavasaya Seva Sahakari Sangha Vinaya Kumar Soorinje
    Previous Articleಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ರೂ 5.99 ಕೋಟಿ ನಿವ್ವಳ ಲಾಭ 
    Next Article ಸೆ.14ರಂದು ಸೈಂಟ್‌ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಎರಡನೇ ವಾರ್ಷಿಕ ಮಹಾಸಭೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.