Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಂ.ಸಿ.ಸಿ. ಬ್ಯಾಂಕಿನ 12ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ
    News

    ಎಂ.ಸಿ.ಸಿ. ಬ್ಯಾಂಕಿನ 12ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ

    adminBy adminSeptember 14, 2025

    ಮಂಗಳೂರು: ಎಂಸಿಸಿ ಬ್ಯಾಂಕ್ ಮಂಗಳೂರು ತನ್ನ 12ನೇ ಎಟಿಎಂ ಅನ್ನು ಶನಿವಾರ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟಿಸಿತು.

    https://chat.whatsapp.com/EbVKVnWB6rlHT1mWtsgbch

    ಈ ಎಟಿಎಂ ಅನ್ನು ಎಂಆರ್‌ಪಿಎಲ್‌ನ ಕಾರ್ಪೊರೇಟ್ ಬ್ರ‍್ಯಾಂಡಿoಗ್ ಮತ್ತು ಕಾರ್ಪೊರೇಟ್ ಕಮ್ಯುನಿಕೇಷನ್ ಚೀಫ್ ಜನರಲ್ ಮ್ಯಾನೇಜರ್ ಡಾ| ರುಡಾಲ್ಫ್ ಜೋಯರ್ ನೊರೊನ್ಹಾ ಉದ್ಘಾಟಿಸಿದರು. ಕಿನ್ನಿಗೋಳಿಯ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ ಧರ್ಮಗುರು ರೆವರೆಂಡ್ ಫಾದರ್ ಜೋಕಿಮ್ ಫೆರ್ನಾಂಡಿಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿoದ ಮೊದಲ ನಗದು ಹಿಂಪಡೆಯುವಿಕೆಯನ್ನು ಬಳ್ಕುಂಜೆಯ ಸೇಂಟ್ ಪೌಲ್ಸ್ ಚರ್ಚ್ ಧರ್ಮಗುರು ರೆವರೆಂಡ್ ಫಾದರ್ ಪೌಲ್ ಸಿಕ್ವೇರ ಮಾಡಿದರು. ಮುಖ್ಯ ಅತಿಥಿಗಳಾಗಿ ಮಾಜಿ ಎನ್‌ಆರ್‌ಐ, ಕಥೋಲಿಕ್ ಸಭಾ ಕಿನ್ನಿಗೋಳಿಯ ಕಾರ್ಯದರ್ಶಿ ಹಾಗೂ ವಿನ್ಸೆಂಟ್ ಡಿ ಪಾಲ್ ಲೆಕ್ಕಪರಿಶೋಧಕ ಜೆರೋಮ್ ಡಿ’ಅಲ್ಮೇಡಾ ಮತ್ತು ಕಿನ್ನಿಗೋಳಿಯ ಮೆಸ್ಸರ್ಸ್ ಚೈತನ್ಯ ಮೆಡಿಕಲ್ಸ್ ಮತ್ತು ಸಾಗರಿಕಾ ಅರೇಂಜರ್ಸ್ ಮಾಲೀಕ ಧನಂಜಯ ಪಿ. ಶೆಟ್ಟಿಗಾರ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಜನರಲ್ ಮ್ಯಾನೇಜರ್ ಸುನಿಲ್ ಮಿನೇಜಸ್ ಮತ್ತು ಶಾಖಾ ವ್ಯವಸ್ಥಾಪಕ ಅನಿಲ್ ಆರ್.ಡಿಸೋಜ ಹಾಜರಿದ್ದರು. ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಕಳೆದ 28 ವರ್ಷಗಳಲ್ಲಿ ಶಾಖೆಯ ಬೆಳವಣಿಗೆಗೆ ನಿರಂತರ ಬೆಂಬಲ ನೀಡಿದ ಕಿನ್ನಿಗೋಳಿ ಶಾಖೆಯ ಗ್ರಾಹಕರಿಗೆ ಧನ್ಯವಾದ ಅರ್ಪಿಸಿದರು. ಕಳೆದ ಏಳು ವರ್ಷಗಳಲ್ಲಿ ಬ್ಯಾಂಕಿನ ಗಮನಾರ್ಹ ಪ್ರಗತಿಯನ್ನು ತಿಳಿಸಿ ಈ ಅವಧಿಯಲ್ಲಿ ಬ್ಯಾಂಕಿನ ವಹಿವಾಟು ₹ 500 ಕೋಟಿಯಿಂದ ₹ 1300 ಕೋಟಿಗೆ ಏರಿದೆ. ಸಂತೆಕಟ್ಟೆ, ದೇರಳಕಟ್ಟೆ ಮತ್ತು ಇತರ ಸ್ಥಳಗಳಲ್ಲಿ ಹೊಸ ಶಾಖೆಗಳನ್ನು ತೆರೆಯುವುದು ಸೇರಿದಂತೆ ಬ್ಯಾಂಕಿನ ಮುಂದಿನ ಯೋಜನೆಗಳನ್ನು ಅವರು ಹಂಚಿ‌ಕೊಂಡು, ಗ್ರಾಹಕರು ತಮ್ಮ ನಿರಂತರ ಬೆಂಬಲ ಮತ್ತು ಸಹಕಾರವನ್ನು ನೀಡಬೇಕೆಂದು ಅವರು ಮನವಿ ಮಾಡಿದರು.


    ಶಿಕ್ಷಣ, ಕ್ರೀಡೆ ಮತ್ತು ಕಲೆಗಳಂತಹ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಗೌರವಿಸುವ ಸಂಪ್ರದಾಯವನ್ನು ಎಂಸಿಸಿ ಬ್ಯಾಂಕ್ ಆರಂಭಿಸಿದೆ ಎಂದು ಹೇಳಿ, ನಿರ್ದೇಶಕರು, ಸಿಬ್ಬಂದಿ, ಗ್ರಾಹಕರು ಮತ್ತು ಸಮುದಾಯದ ಸದಸ್ಯರಿಗೆ ಅವರ ಅಚಲ ಬೆಂಬಲಕ್ಕಾಗಿ ಕೃತಜ್ಞತೆ ಸಲ್ಲಿಸಿ, ರಾಜಿ ಇಲ್ಲದೆ ಉತ್ತಮ ಗುಣಮಟ್ಟದ ಸೇವೆಗಳನ್ನು ನೀಡಲು ಎಂಸಿಸಿ ಬ್ಯಾಂಕ್ ಬದ್ಧವಾಗಿದೆ ಎಂದು ಭರವಸೆ ನೀಡಿದರು.


    ರೆವರೆಂಡ್ ಫಾದರ್ ಜೋಕಿಮ್ ಫೆರ್ನಾಂಡಿಸ್ ಮಾತನಾಡಿ, ಕಿನ್ನಿಗೋಳಿ ಶಾಖೆಯಲ್ಲಿ ತನ್ನ 12ನೇ ಎಟಿಎಂ ಉದ್ಘಾಟಿಸಿ ಬ್ಯಾಂಕಿಗೆ ಅಭಿನಂದನೆ ಸಲ್ಲಿಸಿದರು. 1996ರಿಂದ ಎಂಸಿಸಿ ಬ್ಯಾಂಕಿನ ಗ್ರಾಹಕರಾಗಿರುವ ಅವರು, ಬ್ಯಾಂಕಿನೊoದಿಗಿನ ತಮ್ಮ ದೀರ್ಘ ಸಂಬಂಧವನ್ನು ನೆನಪಿಸಿಕೊಂಡು, ಶಾಖೆಯ ಅತ್ಯುತ್ತಮ ಗ್ರಾಹಕ ಸೇವೆಯನ್ನು ಶ್ಲಾಘಿಸಿದರು. ಮೌಲ್ಯಾಧಾರಿತ ಮತ್ತು ಫಲಿತಾಂಶ-ಆಧಾರಿತ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸಲು ಅವರು ಬ್ಯಾಂಕಿಗೆ ಸೂಚಿಸಿ ಗ್ರಾಹಕರೊಂದಿಗೆ ಬಲವಾದ, ಸ್ನೇಹಪರ ಸಂಬoಧಗಳನ್ನು ನಿರ್ಮಿಸುವ ಮಹತ್ವವನ್ನು ಹೇಳಿದರು. ಎಂಸಿಸಿ ಬ್ಯಾಂಕ್ ಕರ್ನಾಟಕದಾದ್ಯಂತ ಮತ್ತು ಅಂತಿಮವಾಗಿ ದೇಶಾದ್ಯಂತ ವಿಸ್ತರಿಸುತ್ತದೆ ಎಂಬ ಆಶಯವನ್ನೂ ವ್ಯಕ್ತಪಡಿಸಿದರು.
    ಡಾ|ರುಡಾಲ್ಫ್ ಜೋಯರ್ ನೊರೊನ್ಹಾ ಮಾತನಾಡಿ, ಕಿನ್ನಿಗೋಳಿಯಲ್ಲಿ ನಡೆದ ಎಟಿಎಂ ಉದ್ಘಾಟನೆಯಲ್ಲಿ ಭಾಗವಹಿಸಲು ಅವಕಾಶ ನೀಡಿದ್ದಕ್ಕಾಗಿ ಬ್ಯಾಂಕಿಗೆ ಧನ್ಯವಾದ ಅರ್ಪಿಸಿದರು. ಇಂದಿನ ಅತ್ಯಂತ ಸ್ಪರ್ಧಾತ್ಮಕ ವಾತಾವರಣದಲ್ಲಿ, ಬೆಳವಣಿಗೆ ಸವಾಲಿನದ್ದಾಗಿದ್ದರೂ ಎಂಸಿಸಿ ಬ್ಯಾಂಕಿನ ಬಲವಾದ ಹಣಕಾಸು ನಿರ್ವಹಣೆಯ ದೃಷ್ಟಿಕೋನ ಮತ್ತು ಆ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಅದರ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯ ಸಮರ್ಪಣೆಯನ್ನು ಶ್ಲಾಘಿಸಿದರು.
    ರೆವರೆಂಡ್ ಫಾದರ್ ಪಾಲ್ ಸಿಕ್ವೇರ ಮಾತನಾಡಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅವರ ಕ್ರಿಯಾತ್ಮಕ ನಾಯಕತ್ವವನ್ನು ಶ್ಲಾಘಿಸಿ, ಬ್ಯಾಂಕಿನ ನಿರಂತರ ಯಶಸ್ಸಿಗೆ ಶುಭಾಶಯ ತಿಳಿಸಿದರು.


    ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಸಿಎ ಪೂರ್ಣಗೊಳಿಸಿದ ನಿಕಿತಾ ರಿಯೋನಾ ಡಿಸೋಜ, ಡಾ| ಮೆಲಿಶಾ ರೊಡ್ರಿಗಸ್ (ನೀಟ್ ಪಿಜಿ 163ನೇ ರ‍್ಯಾಂಕ್) ಮತ್ತು ಶಾನ್ ಸಿಕ್ವೇರ (ಕರಾಟೆ ಚಾಂಪಿಯನ್) ಅವರನ್ನು ಅವರ ಅತ್ಯುತ್ತಮ ಸಾಧನೆಗಳಿಗಾಗಿ ಸನ್ಮಾನಿಸಲಾಯಿತು. ಸೆಪ್ಟೆಂಬರ್ 13ರಂದು ಹುಟ್ಟುಹಬ್ಬ ಆಚರಿಸಿಕೊಂಡ ಗ್ರಾಹಕರನ್ನು ಕೇಕ್ ಕತ್ತರಿಸುವ ಮೂಲಕ ವಿಶೇಷವಾಗಿ ಸನ್ಮಾನಿಸಲಾಯಿತು ಮತ್ತು ಸೆಪ್ಟೆಂಬರ್ 19ರಂದು ತಮ್ಮ 75 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಡೇನಿಯಲ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು.
    ನಿರ್ದೇಶಕಿ ಡಾ| ಫ್ರೀಡಾ ಫ್ಲಾವಿಯಾ ಡಿ’ಸೋಜ ಸ್ವಾಗತಿಸಿದರು. ಅನ್ಸಿಲ್ಲಾ ಫೆರ್ನಾಂಡಿಸ್ ಮತ್ತು ಡೇಲ್ ಡಿಸೋಜ ಅವರ ನೇತೃತ್ವದಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.
    ನಿರ್ದೇಶಕರಾದ ಆಂಡ್ರ್ಯೂ ಡಿಸೋಜ, ಮೆಲ್ವಿನ್ ವಾಸ್, ಡೇವಿಡ್ ಡಿಸೋಜ, ಉಪ ಪ್ರಧಾನ ವ್ಯವಸ್ಥಾಪಕ ರಾಜ್ ಮಿನೆಜಸ್, ಶಾಖಾ ವ್ಯವಸ್ಥಾಪಕರು, ಸಿಬ್ಬಂದಿ ಸದಸ್ಯರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿದ್ದರು. ಲವಿಟಾ ಡಿಸೋಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    EMAIL: sahakaraspandana@gmail.com

    Anil Lobo MCC BANK
    Previous Articleಸಹಕಾರಿಗಳ ಧರ್ಮಜಾಗೃತಿ ಯಾತ್ರೆ ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕರ ಮನವಿ
    Next Article ಸಹಕಾರಿ ಬಂಧುಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಜಾಗೃತಿ ಸಮಾವೇಶ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.