Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರಿ ಸಂಘಗಳಿಂದ ಸ್ವಾಭಿಮಾನದ ಬದುಕು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ
    News

    ಸಹಕಾರಿ ಸಂಘಗಳಿಂದ ಸ್ವಾಭಿಮಾನದ ಬದುಕು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

    adminBy adminSeptember 20, 2025

    ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ಸಾಮಾನ್ಯ ಸಭೆಯಲ್ಲಿ ಆಶೀರ್ವಚನ

    ವಿಟ್ಲ: ಸಹಕಾರ ತತ್ವದಲ್ಲಿ ಜೀವನದ ಸತ್ವ ಅಡಗಿದೆ. ವ್ಯವಹಾರದಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಇದ್ದಾಗ ಬೆಳವಣಿಗೆ ಸಾಧ್ಯವಾಗುತ್ತದೆ. ಸಹಕಾರಿ ಸಂಘಗಳು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಶುಕ್ರವಾರ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ಸಾಮಾನ್ಯ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ದಕ್ಷತೆಯಿಂದ ಕಾರ್ಯನಿರ್ವಹಿಸುವ ಸಹಕಾರಿಗಳು ಇದ್ದಾಗ ಸಹಕಾರಿ ಸಂಘಗಳು ಯಶಸ್ವಿಯಾಗಿ ಬೆಳೆಯುತ್ತವೆ. ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದ್ದರಿಂದ ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘವು ಉನ್ನತ ಸ್ಥಾನಕ್ಕೇರಿದೆ ಎಂದು ಹೇಳಿದರು.


    ಸಂಘದ ಅಧ್ಯಕ್ಷ ಸಹಕಾರ ರತ್ನ ಎ.ಸುರೇಶ್‌ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ನೇ ಸಾಲಿನಲ್ಲಿ 2,227 ಕೋಟಿ ರೂ. ವ್ಯವಹಾರ ನಡೆಸಿದ್ದು, 5.50 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ 21% ಡಿವಿಡೆಂಡ್ ನೀಡಲಾಗುವುದು. ಸಂಘದಲ್ಲಿ ಪಾರದರ್ಶಕ ವ್ಯವಹಾರ ನಡೆಸಲಾಗುತ್ತಿದೆ. ಒಡಿಯೂರು ಸ್ವಾಮೀಜಿಯವರು ಮತ್ತು ಸಾಧ್ವಿಯವರ ಆಶೀರ್ವಾದ ಹಾಗೂ ನಿರ್ದೇಶಕರು ಮತ್ತು ಸಿಬ್ಬಂದಿಗಳ ಸಹಕಾರದಿಂದ ಸಂಘವು ಸದೃಢವಾಗಿ ಬೆಳವಣಿಗೆ ಸಾಧಿಸುತ್ತಿದೆ. ಒಡಿಯೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಂಘವು 23 ಶಾಖೆಗಳನ್ನು ಹೊಂದಿದ್ದು, 41,000ಕ್ಕೂ ಅಧಿಕ ಸದಸ್ಯರನ್ನು ಹೊಂದಿದೆ ಎಂದು ಹೇಳಿದರು.


    ಇದೇ ಸಂದರ್ಭ ಶಾಸನಬದ್ದ ಲೆಕ್ಕಪರಿಶೋಧಕರು ಮತ್ತು ಆಂತರಿಕ ಲೆಕ್ಕಪರಿಶೋಧಕರನ್ನು ಆಯ್ಕೆ ಮಾಡಲಾಯಿತು. ವಿಕಾಸ ವಾಹಿನಿ ಸ್ವಸಹಾಯ ಸಂಘದಲ್ಲಿ ಅತ್ಯುತ್ತಮ ಸಾಧನೆ ತೋರಿದ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಅತ್ಯುತ್ತಮ ಪ್ರಗತಿ ತೋರಿಸಿದ ಶಾಖೆಗಳಿಗೆ ಬಹುಮಾನ ವಿತರಿಸಲಾಯಿತು.
    ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಲೆಕ್ಕಪರಿಶೋಧಕ ರಾಮಮೋಹನ ರೈ ಟಿ, ನಿರ್ದೇಶಕರಾದ ವೇಣುಗೋಪಾಲ ಮಾರ್ಲ, ತಾರಾನಾಥ ಶೆಟ್ಟಿ ಲೋಕನಾಥ ಶೆಟ್ಟಿ, ಶಾರದಾ ಮಣಿ, ಸರಿತಾ ಅಶೋಕ್‌, ಮೋನಪ್ಪ ಪೂಜಾರಿ ಕೆರೆಮನೆ ಕಾವು, ಗಣಪತಿ ಭಟ್ ಸೇರಾಜೆ, ದೇವಪ್ಪ ನಾಯ್ಕ ಉಪ್ಪಳಿಗೆ, ಸೋಮಪ್ಪ ನಾಯ್ಕ್‌ ಕಡಬ, ಗಣೇಶ ಅತ್ತಾವರ, ಭವಾನಿಶಂಕರ ಶೆಟ್ಟಿ, ಅಶೋಕ್ ಕುಮಾರ್ ಯು.ಎಸ್., ಜಯಪ್ರಕಾಶ್ ರೈ ನೂಜಿಬೈಲು, ಕರುಣಾಕರ ಜೆ. ಉಚ್ಚಿಲ ಮತ್ತಿತರರು ಉಪಸ್ಥಿತರಿದ್ದರು.
    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲು ವರದಿ ವಾಚಿಸಿ, ಲೆಕ್ಕಪತ್ರ ಮಂಡಿಸಿದರು. ನಿರ್ದೇಶಕ ಗಣಪತಿ ಭಟ್ ಸೇರಾಜೆ ಸ್ವಾಗತಿಸಿದರು. ನಿರ್ದೇಶಕ ದೇವಪ್ಪ ನಾಯ್ಕ ಉಪ್ಪಳಿಗೆ ಮದಿಸಿದರು. ಪುತ್ತೂರು ಶಾಖೆಯ ವ್ಯವಸ್ಥಾಪಕಿ ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    A Suresh Rai Cooperative Registrar Odiyuru Shree Gurudevananda Swameeji Odiyuru Shree Vividhoddesha Co Operative Society Souharda Sahakari
    Previous Articleಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ 3.26 ಕೋಟಿ ರೂ. ಲಾಭ: ಶೇ. 25 ಡಿವಿಡೆಂಡ್
    Next Article ಸೌಹಾರ್ದ ಸಹಕಾರಿ ಸಂಘಗಳ ಜೊತೆ ಇರಲಿದೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.