ಕುಂದಾಪುರ: ಇಲ್ಲಿನ ಹೊಸಾಡು ಸೇವಾ ಸಹಕಾರ ಸಂಘ ಮುಳ್ಳಿಕಟ್ಟೆ ಇದರ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಭಾನುವಾರ ಹೊಸಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಇವರು ವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಲೆಕ್ಕಪರಿಶೋಧನಾ ವರದಿ ವಾಚಿಸಿದರು. ನಿರ್ದೇಶಕರಾದ ಸತೀಶ್ ಶೆಟ್ಟಿ ಯಳೂರು ಸ್ವಾಗತಿಸಿದರು. ವರದಿ ವರ್ಷದಲ್ಲಿ ಸಂಘವು ಗಳಿಸಿದ ಲಾಭಾಂಶ ಹಂಚಿಕೆ ಮಾಡಿ ಎ ವರ್ಗದ ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಿಸಲಾಯಿತು. ಉತ್ತಮ ಗ್ರಾಹಕರನ್ನು ಗುರುತಿಸಿ ಗೌರವಿಸಲಾಯಿತು. ಉಪಾಧ್ಯಕ್ಷರಾದ ಚಂದ್ರಶೇಖರ, ನಿರ್ದೇಶಕರಾದ ದಿನೇಶ್ ಜೋಗಿ, ಶಶಿಧರ ಅಡಿಗ, ಪ್ರದೀಪ ಬಿಲ್ಲವ, ರಾಮ ಗಾಣಿಗ, ಶರತ್ ಶೆಟ್ಟಿ, ನವೀನ್ ಫೆರ್ನಾಂಡಿಸ್, ರೇಖಾ ಪುತ್ರನ್, ಅಕ್ಷತಾ ರವೀಂದ್ರ ಹಾಗೂ ಸಂಘದ ಸದಸ್ಯರು ಹಾಜರಿದ್ದರು. ಸಿಬ್ಬಂದಿ ಶಿಲ್ಪಾ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಪ್ರಶಾಂತ್ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


