Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅನನ್ಯ ಸೌಹಾರ್ದ ಸಹಕಾರಿ ಸಂಘದ ಆರನೇ ವಾರ್ಷಿಕ ಮಹಾಸಭೆ
    News

    ಅನನ್ಯ ಸೌಹಾರ್ದ ಸಹಕಾರಿ ಸಂಘದ ಆರನೇ ವಾರ್ಷಿಕ ಮಹಾಸಭೆ

    adminBy adminSeptember 22, 2025

    ಬ್ರಹ್ಮಾವರ: ಅನನ್ಯ ಸೌಹಾರ್ದ ಸಹಕಾರಿ ಸಂಘ ಹೇರಾಡಿ, ಇದರ ಆರನೇ ವರ್ಷದ ವಾರ್ಷಿಕ ಮಹಾಸಭೆಯು ಭಾನುವಾರ ಶ್ರೀ ರುಕ್ಮಿಣಿ ಶೆಡ್ತಿ ಸ್ಮಾರಕ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹೇರಾಡಿ ಇಲ್ಲಿ ಸಂಸ್ಥೆಯ ಅಧ್ಯಕ್ಷ ಹರೀಶ್ ಕುಮಾರ್ ಇವರ ನೇತೃತ್ವದಲ್ಲಿ ಜರುಗಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ವರದಿ ವರ್ಷದಲ್ಲಿ ಸಂಘವು 37.68 ಕೋಟಿ ರೂ. ವಹಿವಾಟು ನಡೆಸಿದ್ದು, 13.27 ಲಕ್ಷ ರೂ. ಪಾಲು ಬಂಡವಾಳ ಹೊಂದಿದೆ. 6.14 ಕೋಟಿ ರೂಪಾಯಿ ಸಂಗ್ರಹಿಸಿ 5.86 ಕೋಟಿ ರೂ. ಸಾಲ ನೀಡಲಾಗಿದ್ದು 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ 17.01 ಲಕ್ಷ ರೂ. ಲಾಭ ಗಳಿಸಿದೆ. 30.18 ಲಕ್ಷ ನಿಧಿಗಳನ್ನು ಹೊಂದಿದೆ ಎಂದರು.

    ಸದಸ್ಯರ ಹಾಗೂ ಸಾರ್ವಜನಿಕ ಹಿತಾಸಕ್ತಿಗಾಗಿ ಸಂಘದಲ್ಲಿ ಇ -ಸ್ಟ್ಯಾಂಪ್, ಆರ್‌ಟಿಸಿ ನೀಡುವ ಸೌಲಭ್ಯವಿದ್ದು ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್‌ ಘೋಷಣಿ ಮಾಡಲಾಗಿದೆ. ಸಭೆಯಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ಸಂಸ್ಥೆಯ ಹಿರಿಯ ಸದಸ್ಯರಾದ ರಾಜೀವ ಶೇರ್ವೆಗಾರ್ ಇವರು ನೀಡಿದರು. ಸಹಕಾರಿಯ ಉಪಾಧ್ಯಕ್ಷ ರತ್ನಾಕರ ಶೆಟ್ಟಿ ಸ್ವಾಗತಿಸಿ, ನಿರ್ದೇಶಕ ರಾಜೇಂದ್ರ ಸೂಚನಾಪತ್ರ ಓದಿದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೇಘಾ ವರದಿ ವಾಚಿಸಿದರು. ನಿರ್ದೇಶಕ ಮಣಿಕಂಠ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಸುಧೀರ್ ನಡಾವಳಿ ವರದಿ, ನಿರ್ದೇಶಕಿ ಮಲ್ಲಿಕಾ ಹೆಚ್ಚಿನ ಖರ್ಚು ವೆಚ್ಚಗಳ ವಿವರ, ಹಾಗೂ ನಿರ್ದೇಶಕ ನಿಖಿಲ್ ಅನುಪಾಲನಾ ವರದಿ, ನಿರ್ದೇಶಕ ರಜನಿಕಾಂತ್ ಲೆಕ್ಕ ಪರಿಶೋಧನಾ ಅಧಿಕಾರಿಯವರ ಬದಲಾವಣೆ ಬಗ್ಗೆ ಮಾಹಿತಿ ನೀಡಿದರು. ನಿರ್ದೇಶಕ ನಾಗೇಂದ್ರ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ನಿರ್ದೇಶಕ ಸಂದೇಶ್ ಶೆಟ್ಟಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Ananya Souharda Sahakari Sangha Heradi Shree Rukmini Shedthi memorial School Heradi
    Previous Articleಶ್ರೀ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘ 15% ಡಿವಿಡೆಂಡ್
    Next Article ಸೆ.28ರಂದು ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸ್ಮರಣಾಂಜಲಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.