Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ರೈತ ಬೆಳಗಿದರೆ ಭಾರತ ವಿಕಾಸ: ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಅಭಿಪ್ರಾಯ
    News

    ರೈತ ಬೆಳಗಿದರೆ ಭಾರತ ವಿಕಾಸ: ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಅಭಿಪ್ರಾಯ

    adminBy adminSeptember 26, 2025

    ಬಂಟ್ವಾಳ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಿಶೇಷ ತರಬೇತಿ ಶಿಬಿರ

    ಬಂಟ್ವಾಳ: ಸಹಕಾರ ಕ್ಷೇತ್ರ ಪವಿತ್ರವಾದ ಕ್ಷೇತ್ರ. ರಾಸುಗಳ ಖರೀದಿಗೆ ಒಂದು ಎಕರೆ ಭೂಮಿ ಇರುವವರಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಮೂರು ಲಕ್ಷ ರೂ.ವರೆಗೂ ಬಡ್ಡಿ ರಹಿತ ನೀಡುತ್ತಿದೆ. ಇದರ ಸದುಪಯೋಗದ ಬಗ್ಗೆ ಹೈನುಗಾರ ಸದಸ್ಯರಿಗೆ ತಿಳಿಯಪಡಿಸಬೇಕು. ರೈತ ಬೆಳಗಿದರೆ ಭಾರತ ವಿಕಾಸವಾಗುತ್ತದೆ ಎಂದು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರೂ ಆಗಿರುವ ಶಶಿಕುಮಾರ್‌ ರೈ ಬಾಲ್ಯೊಟ್ಟು ಅಭಿಪ್ರಾಯಪಟ್ಟರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಬಂಟ್ವಾಳ ವ್ಯವಸಾಯ ಸೇವಾ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಹಾಲು ಒಕ್ಕೂಟ ನಿಯಮಿತ ಮಂಗಳೂರು ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನಡೆದ ವಿಶೇಷ ತರಬೇತಿ ಶಿಬಿರದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಕಳೆದ ಆರು ತಿಂಗಳಿನಿಂದ ಹಾಲು ಒಕ್ಕೂಟವು ೨೫ ಸಾವಿರ ಲೀ. ನಿಂದ ೭೫ ಸಾವಿರ ಲೀಟರ್‌ಗೆ ಹಾಲಿನ ಉತ್ಪಾದನೆ ಹೆಚ್ಚು ಮಾಡಿದೆ. ಇದಕ್ಕೆ ಹೈನುಗಾರರು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರಣೀಭೂತರು. ಹೈನುಗಾರ ರೈತರಿಗೆ ಸರ್ಕಾರ ಹಾಗೂ ಹಾಲು ಒಕ್ಕೂಟವು ಸಹಕಾರ ನೀಡುತ್ತದೆ. ಹಾಲು ಉತ್ಪಾದಕರ ಸಹಕಾರ ಸಂಘಗಳು ಬೆಳೆಯಬೇಕಾದರೆ ಮುಖ್ಯಕಾರ್ಯನಿರ್ವಹಣಾಧಿಕಾರಿಯವರ ಪಾತ್ರ ಮಹತ್ತರವಾಗಿದೆ ಎಂದು ಹೇಳಿದರು.
    ತರಬೇತಿ ಉದ್ಘಾಟಿಸಿ ಮಾತನಾಡಿದ ದ.ಕ. ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ಹಾಲು ಒಕ್ಕೂಟಗಳು ಹೊಸ ತಂತ್ರಜ್ಞಾನವನ್ನು ಆದಷ್ಟು ಬೇಗ ಅಳವಡಿಸಕೊಳ್ಳಬೇಕು. ಒಕ್ಕೂಟಗಳ ಕಾರ್ಯದರ್ಶಿಗಳು ಉತ್ತಮವಾದ ತರಬೇತಿ ಪಡೆದಲ್ಲಿ ಕಾಲಕಾಲಕ್ಕೆ ಆಗುವ ಕಾಯ್ದೆಗಳ ತಿದ್ದುಪಡಿಯ ಅಂಶಗಳನ್ನು ತಿಳಿದುಕೊಂಡು ತಮ್ಮ ಸಂಘದ ಸರ್ವತೋಮುಖ ಅಭಿವೃದ್ಧಿಗೆ ವಿನಿಯೋಗಿಸಿದರೆ ಹಾಲು ಒಕ್ಕೂಟಗಳು ಅಭಿವೃದ್ಧಿ ಹೊಂದಲು ಸಾಧ್ಯ. ಸಂಘದ ನಿರ್ದೇಶಕರು ಮತ್ತು ಕಾರ್ಯದರ್ಶಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಘದ ಏಳಿಗೆಗೆ ಪೂರಕ ಎಂದು ಹೇಳಿದರು.


    ದ.ಕ. ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರಾದ ನಂದರಾಮ ರೈ, ಸವಿತಾ ಎನ್.ಶೆಟ್ಟಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಪದ್ಮಶೇಖರ್ ಜೈನ್ , ಸಂಜೀವ ಪೂಜಾರಿ, ಸ್ಕ್ಯಾಡ್ಸ್‌ ಅಧ್ಯಕ್ಷರಾದ ರವೀಂದ್ರ ಕಂಬಳಿ, ಬಂಟ್ವಾಳ ವ್ಯವಸಾಯ ಸೇವಾ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕರುಣೇಂದ್ರ ಎಂ, ಉಪಾಧ್ಯಕ್ಷರಾದ ಆದಿರಾಜ ಕೆ.ಜೈನ್, ದ.ಕ. ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ರವಿರಾಜ ಉಡುಪ ಉಪಸ್ಥಿತರಿದ್ಧರು.
    ಸಭಾ ಕಾರ್ಯಕ್ರಮದ ಬಳಿಕ ತರಬೇತಿ ಶಿಬಿರದಲ್ಲಿ ದ.ಕ. ಹಾಲು ಒಕ್ಕೂಟದ ಉಪವ್ಯವಸ್ಥಾಪಕರಾದ ಡಾ.ಚಂದ್ರಶೇಖರ್ ಭಟ್ ಹಾಲಿನ ಗುಣಮಟ್ಟ, ರಾಸುಗಳ ನಿರ್ವಹಣೆ ಮತ್ತು ಒಕ್ಕೂಟದ ಯೋಜನೆಗಳು, ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ದ.ಕ. ಸಹಕಾರಿ ಹಾಲು ಒಕ್ಕೂಟದ ನಿವೃತ್ತ ಸಹಾಯಕ ವ್ಯವಸ್ಥಾಪಕ ಕೆ.ಸುಬ್ಬರಾವ್ ಲೆಕ್ಕಪತ್ರಗಳ ನಿರ್ವಹಣೆ, ಸಂಘದಲ್ಲಿ ಇರಬೇಕಾದ ಪ್ರಮುಖ ದಾಖಲೆ ಪುಸ್ತಕಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.
    ದ.ಕ ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ ಸ್ವಾಗತಿಸಿ, ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    D.K Jilla Sahakari Union Dakshina Kannada Sahakari Halu Okkuta South Canara District Co Operative Union
    Previous Articleಅರವಿಂದ್ ತಗಾಡಿಯಾಗೆ ಸಹಕಾರಿ ಶಿರೋಮಣಿ, ಶೈಲಜಾದೇವಿಗೆ ಸಹಕಾರಿ ವಿಭೂಷಣ ಪ್ರಶಸ್ತಿ ಪ್ರದಾನ
    Next Article ನಿವೃತ್ತ ಸಿಬ್ಬಂದಿಗೆ ಸಿದ್ದಕಟ್ಟೆ ಸಹಕಾರ ಸಂಘದಲ್ಲಿ ಗೌರವ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.