ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ೧೪ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರ ಪಡೀಲ್ ಬೈರಾಡಿಕೆರೆ ಹತ್ತಿರದ ಆತ್ಮಶಕ್ತಿ ಸೌಧದಲ್ಲಿ ಜರುಗಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಜೋಸೆಪ್ ತಿಯೋದರ್ ಉದ್ಘಾಟಿಸಿದರು. ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಇದರ ವೈದ್ಯರಾದ ಡಾ.ಪ್ರವೀಣ್ ಜೋಡಳ್ಳಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಜಾಗೃತಿ ಮೂಡಿಸುತ್ತಿದೆ. ಜನರು ಶಿಬಿರದಲ್ಲಿ ಲಭ್ಯವಿರುವ ಎಲ್ಲಾ ವೈದ್ಯಕೀಯ ಸೇವೆಗಳ ಸದುಪಯೋಗ ಪಡೆಯುವಂತೆ ವಿನಂತಿಸಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಆರೋಗ್ಯ ಶಿಬಿರ ಏರ್ಪಡಿಸುತ್ತಿದೆ. ಇವತ್ತಿನ ಈ ಶಿಬಿರವು ಸಂಘದ ಸದಸ್ಯರಿಗೆ ತುಂಬ ಪ್ರಯೋಜನಕಾರಿಯಾಗಿದೆ. ಇದರಿಂದ ಸಂಘದ ಸದಸ್ಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ ಎಂದು ತಿಳಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಜಿ.ಪರಮೇಶ್ವರ ಪೂಜಾರಿ, ಆನಂದ್ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಬಿ.ಪಿ.ದಿವಾಕರ್, ಗೋಪಾಲ್ ಎಂ., ಚಂದ್ರಾವತಿ, ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮಂಗಳೂರು ಇದರ ವೈದ್ಯರಾದ ಡಾ.ಅನಘ, ಡಾ.ಸೌಮ್ಯ, ಡಾ.ಸಮೀಪ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಶಾಖಾಧಿಕಾರಿ ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com




