ಪಡುಬಿದ್ರಿ: ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್ ಟ್ರಸ್ಟ್‌ಗಳ ಸಹಭಾಗಿತ್ವದಲ್ಲಿ ವಿದ್ಯಾರ್ಥಿವೇತನ, ಸಹಾಯಧನ ವಿತರಣೆ, ದಾನಿಗಳಿಗೆ ಸಮ್ಮಾನ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆಯೊಂದಿಗೆ ಸಿರಿಮುಡಿ ದತ್ತಿನಿಧಿ ವಿತರಣಾ ಸಮಾರಂಭ ಹಾಗೂ ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪಡುಬಿದ್ರಿ ಇದರ ಉದ್ಘಾಟನೆ ಅ.5ರಂದು ಪಡುಬಿದ್ರಿ ಬಂಟರ ಭವನದ ಸಭಾಂಗಣದಲ್ಲಿ ಬೆಳಗ್ಗೆ 10ಕ್ಕೆ ಜರಗಲಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಸಿರಿಮುಡಿ ದತ್ತಿನಿಧಿ ಇದೀಗ 1.31 ಕೋಟಿ ರೂ.ನಷ್ಟು ಆರ್ಥಿಕ ಸಂಚಯನವನ್ನು ಹೊಂದಿದೆ. ಇದರ ಜತೆಗೆ ಬಂಟ್ಸ್ ವೆಲ್ಫೆರ್ ಟ್ರಸ್ಟ್ ಕೂಡ ಕೈಜೋಡಿಸುತ್ತಿದ್ದು, ಪ್ರಸಕ್ತ ವರ್ಷ ಸುಮಾರು 17 ಲಕ್ಷ ರೂ. ಸಹಾಯಧನ ವಿತರಣೆಯಾಗಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸೊಸೈಟಿಯು ಸುಮಾರು 50 ಲಕ್ಷ ರೂ. ವೆಚ್ಚದ ಸ್ವಂತ ಕಟ್ಟಡದಲ್ಲಿ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯೊಂದಿಗೆ ಕಾರ್ಯಾಚರಿಸಲು ಸಿದ್ಧವಾಗಿದೆ. ಉದ್ಯಮಿ, ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ ಸದಾನಂದ ಕೆ.ಶೆಟ್ಟಿ ಅವರು ಇದರ ಸ್ಥಾಪನೆಯಲ್ಲಿ ಮಹತ್ವದ ಸಹಕಾರ ನೀಡಿದ್ದಾರೆ. ಅ. 5ರಂದು ‘ಸಹಕಾರ ರತ್’ ಡಾ। ಎಂ.ಎನ್. ರಾಜೇಂದ್ರ ಕುಮಾರ್ ಅವರು ಸೊಸೈಟಿಯನ್ನು ಉದ್ಘಾಟಿಸಲಿದ್ದಾರೆ. ‘ಸದಾನಂದ ಕುಡ್ಡು ಶೆಟ್ಟಿ ಸಂಕೀರ್ಣ’ವನ್ನು ಉದ್ಯಮಿ ಸದಾನಂದ ಕೆ.ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಿರಿಮುಡಿ ದತ್ತಿನಿಧಿ ಕಾರ್ಯಕ್ರಮದ ಉದ್ಘಾಟನೆಯನ್ನು ಎಂಆರ್‌ಜಿ ಗ್ರೂಪ್ ಆಡಳಿತ ನಿರ್ದೇಶಕ ಡಾ|ಕೆ. ಪ್ರಕಾಶ್ ಶೆಟ್ಟಿ ಅವರು ನೆರವೇರಿಸಲಿದ್ದಾರೆ. ಉದ್ಯಮಿಗಳಾದ ಕನ್ಯಾನ ಸದಾಶಿವ ಶೆಟ್ಟಿ, ಕೆ. ಎಂ. ಶೆಟ್ಟಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ ಉಪಸ್ಥಿತರಿದ್ದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.


ಪಡುಬಿದ್ರಿ ಬಂಟರ ಸಂಘದ ಮಹತ್ವಾಕಾಂಕ್ಷಿ ಯೋಜನೆ ಬಂಟಾಶ್ರಯ -ಕುಟುಂಬ ಸೇವಾಶ್ರಮಕ್ಕೆ ಈಗಾಗಲೇ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರು ಸುಮಾರು 6.5 ಎಕರೆ ಸ್ಥಳವನ್ನು ಎಲ್ಲೂರು ಗ್ರಾಮದಲ್ಲಿ ಖರೀದಿಸಿ ಸಂಘಕ್ಕೆ ನೀಡಿದ್ದಾರೆ. ಮುಂದೆ 10.5 ಕೋಟಿ ರೂ. ಗಳ ಪ್ರಥಮ ಹಂತದ ಕಾಮಗಾರಿಗಳಿಗೆ ಡಿಸೆಂಬರ್‌ನಲ್ಲಿ ಚಾಲನೆ ನೀಡಲಾಗುವುದು ಎಂದರು.
ಸಿರಿಮುಡಿ ದತ್ತಿನಿಧಿ ಸ್ಥಾಪಕ ಸಾಂತೂರು ಭಾಸ್ಕರ ಶೆಟ್ಟಿ ಬಂಟ್ಸ್ ವೆಲ್ಫೇರ್ ಟ್ರಸ್ಟ್‌ನ ಅಧ್ಯಕ್ಷ ಡಾ| ವೈ.ಎನ್. ಶೆಟ್ಟಿ, ಸಂಘದ ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಮಹಿಳಾ ವಿಭಾಗದ ಅಧ್ಯಕ್ಷೆ ಭಾರತಿ ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ಸುಜಿತ್ ಶೆಟ್ಟಿ ಹಾಗೂ ಕಾರ್ಯಕ್ರಮ ಸಂಚಾಲಕ ಸತೀಶ್ ಶೆಟ್ಟಿ ಗುಡ್ಡೆಚ್ಚಿ ಜಯ ಶೆಟ್ಟಿ ಪದ್ಮ, ಶ್ರೀನಾಥ್ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು ವಂದಿಸಿದರು.

