ಬಂಟ್ವಾಳ: ಸ್ವಾತಂತ್ರ್ಯ ಯೋಧ, ಸಮಾಜರತ್ನ ಡಾ|ಅಮ್ಮೆಂಬಳ ಬಾಳಪ್ಪರವರ ನೇತೃತ್ವ ಹಾಗೂ ಸಹಕಾರಿ ಧುರೀಣ ಬಿ.ಹೂವಯ್ಯ ಮೂಲ್ಯರವರ ಸಾರಥ್ಯದಲ್ಲಿ 1981ರಲ್ಲಿ ಬಂಟ್ವಾಳದಲ್ಲಿ ಸ್ಥಾಪನೆಯಾದ ಸಮಾಜ ಸೇವಾ ಸಹಕಾರಿ ಸಂಘದ ಹದಿನೇಳನೇ ಶಾಖೆಯು ಕಡಬ ತಾಲೂಕಿನ ಆಲಂಕಾರಿನಲ್ಲಿ ಅಕ್ಟೋಬರ್ 5ರಂದು ಬೆಳಗ್ಗೆ 10.30ಕ್ಕೆ ಉದ್ಘಾಟನೆಯಾಗಲಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಆಲಂಕಾರಿನ ಮಾತೃಕೃಪಾ ಕಾಂಪ್ಲೆಕ್ಸ್‌ನಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲನ ಮಾಡಿ ಆಶೀರ್ವಚನ ನೀಡಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ|ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟನೆ ಮಾಡಲಿದ್ದಾರೆ. ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ಶಾಸಕರಾದ ಭಾಗೀರಥಿ ಮುರುಳ್ಯ ಸೇಫ್ ಲಾಕರ್ ಉದ್ಘಾಟನೆ ಮಾಡಲಿದ್ದಾರೆ. ಸಮಾಜ ಸೇವಾ ಸಹಕಾರಿ ಸಂಘ ನಿ ಇದರ ಅಧ್ಯಕ್ಷರಾದ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಗಣಕಯಂತ್ರ ಉದ್ಘಾಟಿಸಲಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್ ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕುಲಾಲ ಸಂಘ ಬೆಂಗಳೂರು ಅಧ್ಯಕ್ಷ ದಿವಾಕರ ಮೂಲ್ಯ, ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಶೀಲಾ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಭಟ್ ಯು., ಲ್ಯಾಂಪ್ಸ್ ಸಹಕಾರ ಸಂಘ ನಿ. ಪುತ್ತೂರು ಇದರ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಪೂವಪ್ಪ ನಾಯ್ಕ ಎಸ್, ವಕೀಲರ ಸಂಘ, ಪುತ್ತೂರು ಇದರ ಕೋಶಾಧಿಕಾರಿ ಮಹೇಶ್ ಸವಣೂರು, ದ.ಕ. ಜಿಲ್ಲಾ ಎಂಡೋ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಪೀರ್ ಮೊಹಮ್ಮದ್ ಸಾಹೇಬ್, ಆಲಂಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಪೂಜಾರಿ, ಆಲಂಕಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಾತ ಕೆ, ಆಲಂಕಾರು ಶತಾಕ್ಷಿ ಕ್ಲಿನಿಕ್‌ನ ಡಾ| ಕೃತಿ ಶೆಟ್ಟಿ, ಶಾಖಾ ಕಟ್ಟಡ ಮಾಲೀಕರಾದ ಕುಶಾಲಪ್ಪ ಗೌಡ ಸುರುಳಿ ಭಾಗವಹಿಸಲಿದ್ದಾರೆ. ಸಂಘದ ಉಪಾಧ್ಯಕ್ಷ ಜನಾರ್ಧನ ಬೊಂಡಾಲ, ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ, ಶಾಖಾ ವ್ಯವಸ್ಥಾಪಕರು ಉಷಾ, ಆಡಳಿತ ಮಂಡಳಿ ಸದಸ್ಯರಾದ ರಮೇಶ್ ಸಾಲ್ಯಾನ್, ಅರುಣ್ ಕುಮಾರ್ ಕೆ., ಸತೀಶ್, ಬಿ.ರಮೇಶ್ ಸಾಲ್ಯಾನ್, ಸುರೇಶ್ ಕುಲಾಲ್ ಎನ್., ಭೋಜ ಸಾಲಿಯಾನ್, ಕಿರಣ್ ಕುಮಾರ್ ಎ., ಹರೀಶ್, ಪ್ರೇಮನಾಥ ಬಂಟ್ವಾಳ್, ವಿದ್ಯಾ, ಮಾಲತಿ ಮಚ್ಚೇಂದ್ರ, ಜಗನ್ನಿವಾಸ ಗೌಡ, ಗಣೇಶ್ ಸಮಗಾರ, ರೇಖಾ ನಾಯಕ್ ಹಾಗೂ ನೌಕರ ವೃಂದದವರು ಭಾಗವಹಿಸಲಿದ್ದಾರೆ.

