Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರಿ ಸಂಘಗಳಿಂದ ಜನರ ಅಭಿವೃದ್ಧಿ
    News

    ಸಹಕಾರಿ ಸಂಘಗಳಿಂದ ಜನರ ಅಭಿವೃದ್ಧಿ

    adminBy adminOctober 6, 2025

    ಸಿರಿಮುಡಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟಿಸಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯ

    ಪಡುಬಿದ್ರಿ: ವಾಣಿಜ್ಯ ಬ್ಯಾಂಕ್‌ಗಳ ತವರೂರಾಗಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಸಹಕಾರ ಸಂಘಗಳು ಜನರ ಅಭಿವೃದ್ಧಿಗೆ ಇರುವ ಏಕೈಕ ಸಂಸ್ಥೆಗಳಾಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ಫೇರ್‌ ಟ್ರಸ್ಟ್ ಪಡುಬಿದ್ರಿ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್‌ ಟ್ರಸ್ಟ್ ಪಡುಬಿದ್ರಿ ಸಹಭಾಗಿತ್ವದಲ್ಲಿ ಭಾನುವಾರ ಸದಾನಂದ ಕುಡ್ಡು ಶೆಟ್ಟಿ ಹವಾನಿಯಂತ್ರಿತ ಸ್ವಂತ ಕಟ್ಟಡದಲ್ಲಿ ಸ್ಥಾಪಿಸಿರುವ ಸಿರಿಮುಡಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟಿಸಿ ಮಾತನಾಡಿದರು.
    ಸರಳವಾಗಿ, ತ್ವರಿತವಾಗಿ ಜನರಿಗೆ ಸಾಲ ನೀಡುವಂತಹ ವ್ಯವಸ್ಥೆಯಿರುವ ಸಂಸ್ಥೆಯೆಂದರೆ ಸಹಕಾರಿ ಸಂಸ್ಥೆ ಎಂದು ಹೇಳಲು ಸಂತೋಷವಾಗುತ್ತದೆ. ಇಲ್ಲಿನ ಬಂಟರ ಸಂಘ ಸಿರಿಮುಡಿ ದತ್ತಿನಿಧಿ ಮತ್ತು ಸೊಸೈಟಿ ಆರಂಭದ ಮೂಲಕ ಹೆಮ್ಮೆ ತರುವಂತಹ ಕೆಲಸ ಮಾಡಿದೆ. ಇಲ್ಲಿನ ಸೊಸೈಟಿ ಕಟ್ಟಡಕ್ಕೆ 10 ಲಕ್ಷ, ಬಂಟರ ಸಂಘಕ್ಕೆ ಲಿಫ್ಟ್‌ ಅಳವಡಿಕೆಗೆ 10 ಲಕ್ಷ ಹಾಗೂ ಮುಂದೆ ಬಂಟಾಶ್ರಯ ಕುಟುಂಬ ಸೇವಾಶ್ರಮಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.



    ಸಿರಿಮುಡಿ ದತ್ತಿನಿಧಿ ಕಾರ್ಯಕ್ರಮ ಉದ್ಘಾಟಿಸಿದ ಎಂಆರ್‌ಜಿ ಗ್ರೂಪ್‌ ಆಡಳಿತ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿ ಮಾತನಾಡಿ, ಮುಂದಿನ ಮೂರು ವರ್ಷದಲ್ಲಿ ಬ್ಯಾಂಕ್‌ನ ಠೇವಣಾತಿಯನ್ನು 131 ಕೋಟಿಗೆ ಏರಿಸುವ ಪ್ರಯತ್ನ ಸಂಘದ ಅಧ್ಯಕ್ಷರಿಂದಾಗಲಿ. ಅದಕ್ಕೆ ನಾನು ಕೂಡ ಕೈಜೋಡಿಸುತ್ತೇನೆ. ವಿಜಯ ಬ್ಯಾಂಕ್ ಸ್ಥಾಪಕರಾದ ಮೂಲ್ಕಿ ಸುಂದರ್‌ರಾಮ್ ಶೆಟ್ಟಿ ಹೆಸರಿನಲ್ಲಿ ಆರಂಭಿಸಿರುವ ಟ್ರಸ್ಟ್ ಚೇರ್ಮನ್‌ ಆಗಿದ್ದು, ಮೂಲ್ಕಿಯಲ್ಲಿ ಅವರ ಸ್ಮಾರಕ ಭವನದಲ್ಲಿ ಸಂಗ್ರಹವಾಗುವ ಮೊತ್ತದಲ್ಲಿ ಮುಂದಿನ ದಿನಗಳಲ್ಲಿ ಕಾಪು, ಪಡುಬಿದ್ರಿ ಹಾಗೂ ಮೂಲ್ಕಿ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸಹಾಯ ನೀಡುವ ಯೋಜನೆ ಬಗ್ಗೆ ಟ್ರಸ್ಟ್‌ನ ಇತರರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.


    ಸದಾನಂದ ಕೆ.ಶೆಟ್ಟಿ ಸದಾನಂದ ಕುಡ್ಡು ಶೆಟ್ಟಿ ಸಂಕೀರ್ಣವನ್ನು, ಹೇರಂಭ ಗ್ರೂಪ್‌ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಸಿರಿಮುಡಿ ಉಳಿತಾಯ ಖಾತೆಯ ಪಾಸ್ ಪುಸ್ತಕ, ವಿ.ಕೆ.ಗ್ರೂಪ್‌ನ ಆಡಳಿತ ನಿರ್ದೇಶಕ ಕೆ.ಎಂ.ಶೆಟ್ಟಿ ನಿರಖು ಠೇವಣಿ ಪತ್ರ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ ಸವಲತ್ತುಗಳನ್ನು ವಿತರಿಸಿದರು. ಕೆ.ಪ್ರಕಾಶ್ ಶೆಟ್ಟಿ ಪಡುಬಿದ್ರಿ ಬಂಟರ ಮಾಹಿತಿ ಕೈಪಿಡಿ ಬಿಡುಗಡೆ ಮಾಡಿದರು. 2026 ಜನವರಿಯಲ್ಲಿ ಪಡುಬಿದ್ರಿ ಬಂಟರ ಸಂಘದ ಸಾಂಸ್ಕೃತಿಕ ವಿಭಾಗದಿಂದ ಆಯೋಜಿಸುವ ರಾಷ್ಟ್ರೀಯ ಬಂಟರ ಕಲೋತ್ಸವ 2026 ಸಾಂಸ್ಕೃತಿಕ ಸ್ಪರ್ಧೆಯ ಮಾಹಿತಿ ಕರಪತ್ರ ಬಿಡುಗಡೆ ಮಾಡಲಾಯಿತು. ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿಧವೆಯರಿಗೆ, ವಿಶೇಷ ಚೇತನರಿಗೆ, ಅಶಕ್ತರಿಗೆ, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಸಹಾಯಧನ ವಿತರಣೆ, ದಾನಿಗಳಿಗೆ ಸನ್ಮಾನ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ, ಸಿರಿಮುಡಿ ದತ್ತಿ ನಿಧಿ ವಿತರಿಸಲಾಯಿತು.
    ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಡಾ.ವೈ.ಎನ್.ಶೆಟ್ಟಿ, ಬಂಟರ ಸಂಘ ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಸೊಸೈಟಿ ಉಪಾಧ್ಯಕ್ಷ ಶ್ರೀನಾಥ್ ಹೆಗ್ಡೆ, ನಿರ್ದೇಶಕರುಗಳಾದ ಶಶಿಧರ್ ಶೆಟ್ಟಿ, ರವೀಂದ್ರನಾಥ್ ಜಿ.ಹೆಗ್ಡೆ, ಸುರೇಶ್ ಶೆಟ್ಟಿ ಗುಂಡ್ಲಾಡಿ, ನವೀನ್‌ಚಂದ್ರ ಶೆಟ್ಟಿ, ಸಂತೋಷ್ ಶೆಟ್ಟಿ ಪಲ್ಲವಿ, ಮಾಧವ ಸಿ.ಶೆಟ್ಟಿ ಸಂತೃಪ್ತಿ ಎಂ.ಶೆಟ್ಟಿ, ಶೋಭಾ ಜೆ.ಶೆಟ್ಟಿ, ಸಿಇಒ ಅಂಕಿತಾ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಭಾರತಿ ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ಸುಜಿತ್ ಶೆಟ್ಟಿ, ಉಪಸ್ಥಿತರಿದ್ದರು. ಬಂಟರ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಪ್ರಾಸ್ತಾವಿಕ ಮಾತನಾಡಿದರು. ಸಿರಿಮುಡಿ ದತ್ತಿ ನಿಧಿ ಸಂಸ್ಥಾಪಕ ಸಾಂತೂರು ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು ವಂದಿಸಿದರು. ಸಂಘಟನಾ ಸಮಿತಿ ಸಂಚಾಲಕ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಸಾಂಸ್ಕೃತಿಕ ವಿಭಾಗದ ಜಯ ಶೆಟ್ಟಿ ಪದ್ರ, ವಿದಿಶಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Deviprasad Belapu Dr.M.N.Rajendra Kumar Sirimudi Credit Co Operative Society Padubidri Sirimudi Dattinidhi Samarpane
    Previous Articleಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಉದ್ಘಾಟನೆ
    Next Article ಆತ್ಮಶಕ್ತಿ ಸಹಕಾರಿ ಸಂಘ ವತಿಯಿಂದ ಕಿನ್ಯಾದಲ್ಲಿ ಉಚಿತ ವೈದ್ಯಕೀಯ ಶಿಬಿರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.