ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಾಟೆಕಲ್ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ ಬೆಳರಿಂಗೆ ಕಿನ್ಯ ಇವರ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಮಂಗಳಾ ಕಾಲೇಜು, ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇವರ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನದ ಆವರಣದಲ್ಲಿ ಜರುಗಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಭಂಡಾರಮನೆ, ಕಿನ್ಯಾ ಬೆಳರಿಂಗೆ ಇದರ ಅರ್ಚಕರಾದ ರವಿ ಪೂಜಾರಿ ಹಾಗೂ ಅರ್ಚಕ ಪಾತ್ರಿ ಕಿಶೋರ್ ಪೂಜಾರಿ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿಯ ದಂತ ವೈದ್ಯರಾದ ಡಾ|ಇಮ್ರಾನ್ ಪಾಷಾ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಮಾರ್ಗದರ್ಶನ ಹಾಗೂ ಸಂಘದ ಸಹಯೋಗದೊಂದಿಗೆ ಯೆನಪೋಯ ಆಸ್ಪತ್ರೆಯು ಹಲವಾರು ಉಚಿತ ಶಿಬಿರಗಳನ್ನು ಆಯೋಜನೆ ಮಾಡುತ್ತಿದೆ. ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ, ಹಲ್ಲನ್ನು ಕೀಳುವುದು, ಹಲ್ಲನ್ನು ಸ್ವಚ್ಛಗೊಳಿಸುವುದು, ಹಾಗೂ ಹುಳುಕು ಹಲ್ಲುಗಳ ಭರ್ತಿ ಮಾಡಲಾಗುವುದಲ್ಲದೇ, ಈ ಶಿಬಿರದಲ್ಲಿ ಅನೇಕ ಸೇವೆಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.


ಮಂಗಳಾ ಕಾಲೇಜು, ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇದರ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಜೆ.ಸಿ ನಾಯಕ್ ಮಾತನಾಡಿ ಯಾವುದೇ ಮುಜುಗರ ತೋರಿಸದೆ ಆರೋಗ್ಯ ತಪಾಸಣೆ ಮಾಡಿಸಿ ಆರೋಗ್ಯದಿಂದ ಇರಬೇಕು. ರೋಗ ಬಂದಿರುವವರು ಮಾತ್ರ ಚಿಕಿತ್ಸೆ ಪಡೆಯುವುದಲ್ಲದೇ, ರೋಗ ಬರುವ ಮುಂಚಿತವಾಗಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿಕೊಂಡು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಅತ್ಯಗತ್ಯ ಎಂದು ಹೇಳಿದರು.
ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ ಇದರ ಸ್ಥಾಪಕಾಧ್ಯಕ್ಷರಾದ ಜಯಂತ ಎಂ ಪೂಜಾರಿ ಮಾತನಾಡಿ “ಕೆಲಸದ ಒತ್ತಡ ಹಾಗೂ ದೈನಂದಿನ ಕಾರ್ಯಚಟುವಟಿಕೆಗಳಿಂದ ನಮ್ಮ ಆರೋಗ್ಯದತ್ತ ಗಮನ ಹರಿಸಲು ಸಾಧ್ಯವಾಗದ ಕಾರಣ ಜೀವನದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇಂತಹ ಶಿಬಿರಗಳಲ್ಲಿ ತಮ್ಮ ಆರೋಗ್ಯ ತಪಾಸಣೆ ಮಾಡಿದರೆ ಉತ್ತಮ ಜೀವನ ಶೈಲಿ ನಡೆಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ನಮ್ಮ ಊರಿನ ಜನಸಾಮಾನ್ಯರಿಗೆ ಇಂತಹ ಶಿಬಿರಗಳನ್ನು ಆಯೋಜನೆ ಮಾಡಿರುವುದಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನದ ವತಿಯಿಂದ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ‘ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಮಂಗಳಾ ಕಾಲೇಜು, ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇದರ ಆಡಳಿತ ವರ್ಗ, ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ ಇದರ ಅಧ್ಯಕ್ಷರಾದ ಶಿವಪ್ಪ ಪೂಜಾರಿ, ಮಹಾಮ್ಮಯಿ ಮಿತ್ರ ಮಂಡಳಿ ಬೆಳರಿಂಗೆ ಕಿನ್ಯಾ ಇದರ ಅಧ್ಯಕ್ಷರಾದ ಜಗದೀಶ್ ಪೂಜಾರಿ ಬೆಳರಿಂಗೆ, ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ಇದರ ಸಾರ್ವಜನಿಕ ಸಂಪರ್ಕ ಅಧಿಕಾರಿ ಭರತ್ ಮತ್ತಿತ್ತರರು ಉಪಸ್ಥಿತರಿದ್ದರು. ಸುಮಾರು ೧೦೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಕನ್ನಡಕ ವಿತರಣೆ, ದಂತ ತಪಾಸಣೆ ಹಾಗೂ ನೇತ್ರ ತಪಾಸಣೆ ನಡೆಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖಾಧಿಕಾರಿ ಅಕ್ಷತಾ. ಕೆ ಸ್ವಾಗತಿಸಿ, ಸಿಬ್ಬಂದಿ ಪವಿತ್ರ ವಂದಿಸಿದರು. ಸಹಾಯಕ ಪ್ರಬಂದಕರಾದ ವಿಶ್ವನಾಥ ಕಾರ್ಯಕ್ರಮ ನಿರ್ವಹಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com





