Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಾರವಾರ ಅರ್ಬನ್‌ ಬ್ಯಾಂಕ್‌ಗೆ ಲಿಕ್ವಿಡೇಟರ್‌ ನೇಮಕ
    News

    ಕಾರವಾರ ಅರ್ಬನ್‌ ಬ್ಯಾಂಕ್‌ಗೆ ಲಿಕ್ವಿಡೇಟರ್‌ ನೇಮಕ

    adminBy adminOctober 8, 2025

    ಕಾರವಾರ: ಇಲ್ಲಿನ ಕಾರವಾರ ಅರ್ಬನ್ ಬ್ಯಾಂಕ್‌ಗೆ ಲಿಕ್ವಿಡೇಟರ್ (ಸಮಾಪನಾಧಿಕಾರಿ) ಅನ್ನು ನೇಮಕ ಮಾಡಲಾಗಿದ್ದು, ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಮುಂದಿನ ಆದೇಶದ ತನಕ ಈ ಬ್ಯಾಂಕ್‌ನ ಕಾರ್ಯಚಟುವಟಿಕೆಗಳು ಲಿಕ್ವಿಡೇಟರ್‌ ಅವರ ನೇತೃತ್ವದಲ್ಲೇ ತೆರೆಯಲಿದ್ದು, ಸಾಲ ವಸೂಲಿ ಹಾಗೂ ಇತರ ಕಾರ್ಯಗಳೂ ಈ ಹಿಂದಿನಂತೆ ನಡೆಯಲಿದೆ ಎಂದು ಲಿಕ್ವಿಡೇಟರ್ ಮಾಹಿತಿ ನೀಡಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಕಳೆದ ಜುಲೈ 22ರಂದು ಕಾರವಾರ ಅರ್ಬನ್ ಬ್ಯಾಂಕ್‌ನ ಲೈಸನ್ಸ್ ರದ್ದು ಮಾಡಿ ರಿಸರ್ವ್‌ ಬ್ಯಾಂಕ್‌ ಆದೇಶ ಹೊರಡಿಸಿತ್ತು. ಹಣಕಾಸಿನ ಪರಿಸ್ಥಿತಿ ಕಳವಳಕಾರಿಯಾಗಿದ್ದರಿಂದ ಬ್ಯಾಂಕಿನ ನಿರಂತರ ಕಾರ್ಯಾಚರಣೆಯು ಠೇವಣಿದಾರರ ಹಿತಾಸಕ್ತಿಗಳಿಗೆ ಹಾನಿಕಾರಕ ಎಂದು ಅಭಿಪ್ರಾಯಪಟ್ಟಿದ್ದ ಆರ್‌ಬಿಐ, ಲಿಕ್ವಿಡೇಟರ್‌ ಅನ್ನು ನೇಮಿಸುವಂತೆ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸೂಚಿಸಿತ್ತು. ಅದರಂತೆ ಅಂಕೋಲಾ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಮಮತಾ ನಾಯಕ್‌ ಅವರು ಲಿಕ್ವಿಡೇಟರ್‌ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
    ಅಧಿಕಾರ ವಹಿಸಿದ ನಂತರ ಮಾತನಾಡಿರುವ ಮಮತಾ ನಾಯಕ್‌, ಬ್ಯಾಂಕ್‌ನಲ್ಲಿ ಠೇವಣಿ ಇಟ್ಟವರಿಗೆ ಗರಿಷ್ಠ 5 ಲಕ್ಷದವರೆಗೆ ವಿಮಾ ಸೌಲಭ್ಯವಿದೆ. 3670 ಗ್ರಾಹಕರು 5 ಲಕ್ಷದ ಒಳಗೆ ಠೇವಣಿ ಇಟ್ಟಿದ್ದು, ಅವರ ಪೈಕಿ 1588 ಜನರಿಗೆ ಒಟ್ಟು 37.79 ರೂ.ಗಳನ್ನು ಡಿಪಾಸಿಟ್ ಇನ್ಶೂರೆನ್ಸ್ ಆಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (ಡಿಐಸಿಜಿಸಿ) ಜೂನ್ 30ರವರೆಗೆ ಹಣ ಪಾವತಿಸಿದೆ. ಇನ್ನೂ 2082 ಠೇವಣಿದಾರರಿಗೆ 32.52 ಕೋಟಿ ರೂ. ಪಾವತಿ ಮಾಡಬೇಕಿದ್ದು, ಆ ಪ್ರಕ್ರಿಯೆಯನ್ನು ಸದ್ಯದಲ್ಲೇ ಪ್ರಾರಂಭಿಸಲಿದ್ದೇವೆ ಎಂದು ಹೇಳಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಸಾಲ ವಸೂಲಾತಿ ಪ್ರಕ್ರಿಯೆ ಹಾಗೂ ಇತರ ಕಾರ್ಯಗಳನ್ನು ಮಾಡಲಿದ್ದಾರೆ. ಸಹಕಾರ ಸಂಘಗಳ ಕಾಯ್ದೆಯ ನಿಯಮ 64ರ ಅಡಿ ಬ್ಯಾಂಕ್‌ ಅವ್ಯವಹಾರದ ಬಗ್ಗೆ ತನಿಖೆ ನಡೆಯುತ್ತಿದೆ. ಅದರ ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    Co Operative Bill 64 Karavara Urban Bank Liquidator Mamatha Nayak RBI
    Previous Articleಕಚ್ಚೂರು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಬೆಳ್ತಂಗಡಿ ಶಾಖೆ ಉದ್ಘಾಟನೆ
    Next Article ಅ.11ರಂದು ರಾಜ್ಯಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.