Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಶ್ರೀದುರ್ಗಾ ಸಹಕಾರ ಸೌಧ ಅ.12ರಂದು ಲೋಕಾರ್ಪಣೆ
    News

    ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಶ್ರೀದುರ್ಗಾ ಸಹಕಾರ ಸೌಧ ಅ.12ರಂದು ಲೋಕಾರ್ಪಣೆ

    adminBy adminOctober 10, 2025

    ಉಡುಪಿ: ಇಲ್ಲಿನ ಪರ್ಕಳ ಮುಖ್ಯ ರಸ್ತೆಯ ಪಾಂಡುರಂಗ ಟವರ್ಸ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಪರ್ಕಳ ರಾಷ್ಟ್ರೀಯ ಹೆದ್ದಾರಿಯ ಪಾರ್ಶ್ವದಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಶ್ರೀದುರ್ಗಾ ಸಹಕಾರ ಸೌಧದ ಉದ್ಘಾಟನಾ ಸಮಾರಂಭ ಅಕ್ಟೋಬರ್‌ 12ರಂದು ನಡೆಯಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಪರ್ಕಳ ಹೈಸ್ಕೂಲ್‌ ಕ್ರೀಡಾಂಗಣದಲ್ಲಿ ಬೆಳಗ್ಗೆ 11ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ. ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಅಶೋಕ್‌ ಕಾಮತ್‌ ಕೊಡಂಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್‌ಪಾಲ್‌ ಸುವರ್ಣ, ಸುರೇಶ್‌ ಶೆಟ್ಟಿ ಗುರ್ಮೆ, ಮಾಜಿ ಶಾಸಕ ರಘುಪತಿ ಭಟ್‌, ಉಡುಪಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಮಂಗಳೂರಿನ ಜಂಟಿ ನಿರ್ದೇಶಕ ಗೋಕುಲ್‌ದಾಸ್‌ ಕಾಮತ್‌, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಉಡುಪಿ ಜಿಲ್ಲಾ ಉಪನಿಬಂಧಕಿ ಲಾವಣ್ಯ ಕೆ.ಆರ್‌., ನಗರಸಭಾ ಸದಸ್ಯೆ ಸುಮಿತ್ರಾ ಆರ್‌.ನಾಯಕ್‌ ಭಾಗವಹಿಸಲಿದ್ದಾರೆ.


    ಮಧ್ಯಾಹ್ನ 12.30ರಿಂದ ಸಾಂಸ್ಕೃತಿಕ ವೈಭವ ನಡೆಯಲಿದ್ದು, ಸಿಂಧೂ ಸಂಗೀತ ಬಳಗ ಉಡುಪಿ ಇವರಿಂದ ರಾಜ್ಯಪ್ರಶಸ್ತಿ ವಿಜೇತ ಕಲಾವತಿ ದಯಾನಂದ ಇವರಿಂದ ಜಾನಪದ, ದಾಸ ಸಾಹಿತ್ಯ, ತತ್ವಪದಗಳು, ಭಾವಗೀತೆ, ದೇಶಭಕ್ತಿಗೀತೆ, ರಂಗಗೀತೆಗಳ ಕಲಾರಸಧಾರೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Banking Co Operative ministry Shree Durgaparameshwari Credit Co Operative Society Parkala Udupi ShreeDurga Sahakara Soudha Souharda Sahakari Spandana
    Previous Articleಅ.11ರಂದು ರಾಜ್ಯಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮ
    Next Article ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸಹಕಾರಿ ನೌಕರರಿಗೂ ಅನ್ವಯ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.