Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಸಂಘಗಳ ವಿರುದ್ಧ ಎರಡನೇ ಹಂತದ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಸಿದ್ಧತೆ?
    News

    ಸಹಕಾರ ಸಂಘಗಳ ವಿರುದ್ಧ ಎರಡನೇ ಹಂತದ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಸಿದ್ಧತೆ?

    adminBy adminOctober 13, 2025

    ಸಿಬ್ಬಂದಿ, ನೌಕರರ ನೇಮಕಾತಿ, ವರ್ಗಾವಣೆಗೆ ಸಂಬಂಧಿಸಿದ ಕಾಯ್ದೆ ತಿದ್ದುಪಡಿ ಕಾನೂನುಬಾಹಿರ ಎಂದಿದ್ದ ಕೋರ್ಟ್‌, ಹೈಕೋರ್ಟ್‌ಗೆ ಮೇಲ್ಮನವಿ

    ಬೆಂಗಳೂರು: ಸಹಕಾರ ಸಂಘಗಳಲ್ಲಿ ಸಿಬ್ಬಂದಿ-ನೌಕರರ ನೌಕರರ ನೇಮಕಾತಿ, ವರ್ಗಾವಣೆ, ಶಿಸ್ತುಕ್ರಮದ ಅಧಿಕಾರ ಈ ವಿಷಯಗಳಲ್ಲಿ ರಾಜ್ಯ ಸರ್ಕಾರವು ಸಹಕಾರ ಸಂಘಗಳ ವಿರುದ್ಧ ಎರಡನೇ ಹಂತದ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಿದೆ.
    ಈ ವಿಷಯದಲ್ಲಿ ಮೊದಲ ಹಂತದ ಕಾನೂನು ಹೋರಾಟದಲ್ಲಿ ಹಿನ್ನಡೆ ಅನುಭವಿಸಿದ್ದ ರಾಜ್ಯ ಸರಕಾರ ಇದೀಗ ಸಹಕಾರ ಸಂಘಗಳ ವಿರುದ್ಧ ಎರಡನೇ ಹಂತದ ಕಾನೂನು ಹೋರಾಟಕ್ಕೆ ಮುಂದಾಗಿದ್ದು ಅದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t

    ಸಹಕಾರ ಸಂಘಗಳಲ್ಲಿ ಸಿಬ್ಬಂದಿ-ನೌಕರರ ನೇಮಕಾತಿಗೆ ಸಂಬಂಧಿಸಿದ ವೃಂದ ರಚನೆ, ನೇಮಕಾತಿ ಮಾಡಿಕೊಳ್ಳುವುದು, ನೌಕರರ ವರ್ಗಾವಣೆ, ಅವರ ವಿರುದ್ಧ ಆರೋಪಗಳು ಕೇಳಿ ಬಂದಾಗ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸರಕಾರ ಮೊಟಕುಗೊಳಿಸಿತ್ತು ಇದರ ವಿರುದ್ಧ ಸಹಕಾರ ಸಂಘಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಸರಕಾರದ ಕ್ರಮ ಕಾನೂನುಬಾಹಿರವೆಂದು ಸಾರಿದ್ದ ನ್ಯಾಯಾಲಯ ಸಹಕಾರ ಸಂಘಗಳ ಪರವಾಗಿ ಕಳೆದ ವರ್ಷ ತೀರ್ಪು ನೀಡಿತ್ತು. ಆ ತೀರ್ಪು ರದ್ದುಪಡಿಸುವಂತೆ ಕೋರಿ ಸರ್ಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿದೆ.


    ಸಹಕಾರ ಸಂಘಗಳಲ್ಲಿ ಚಾಲ್ತಿಯಲ್ಲಿದ್ದ ನೇಮಕಾತಿ ವೃಂದ ರಚನೆ, ನೇಮಕಾತಿ ಮಾಡಿಕೊಳ್ಳುವುದು, ನೌಕರರ ವರ್ಗಾವಣೆ, ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸಹಕಾರ ಸಂಘಗಳಿಂದ ಮೊಟಕುಗೊಳಿಸಲು ಸಂಘಗಳ ಕಾಯ್ದೆ-1919ರ ಮೂಲ ಕಾಯ್ದೆ ಸೆಕ್ಷನ್ 128 -ಎಗೆ ತಿದ್ದುಪಡಿ ತಂದು ಸಹಕಾರ ಸಂಘಗಳ (ತಿದ್ದುಪಡಿ) ಕಾಯ್ದೆ-2023ರನ್ನು ಜಾರಿಗೆ ತಂದಿತ್ತು. ಇದನ್ನು ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕೃಷಿ ಸಹಕಾರ ಸಂಘ ಹಾಗೂ ರಾಜ್ಯದ ಇತರ ಸಹಕಾರ ಸಂಘಗಳು ಹೈಕೋರ್ಟ್ ಮೆಟ್ಟಿಲೇರಿದ್ದವು. ಸರಕಾರ ತಂದಿದ್ದ ತಿದ್ದುಪಡಿ ಸಂವಿಧಾನಬಾಹಿರ ಎಂದು ಹೇಳಿದ್ದ ಹೈಕೋರ್ಟ್, ಆ ತಿದ್ದುಪಡಿಯನ್ನು ರದ್ದುಪಡಿಸಿ 2024ರ ಆಗಸ್ಟ್‌ನಲ್ಲಿ ತೀರ್ಪು ಪ್ರಕಟಿಸಿತ್ತು. ಮೊದಲ ಹಂತದಲ್ಲಿ ಹಿನ್ನಡೆ ಕಂಡಿದ್ದ ರಾಜ್ಯ ಸರಕಾರ, ಎರಡನೇ ಹಂತದ ಕಾನೂನು ಹೋರಾಟಕ್ಕೆ ಮುಂದಾಗಿದೆ.
    ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128-ಎಗೆ ತಿದ್ದುಪಡಿ ತರುವ ಮೂಲಕ ಸಹಕಾರ ಸಂಘಗಳ ನಿಬಂಧಕರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನೇಮಕ ಅಧಿಕಾರಕ್ಕೆ ಸಂಬಂಧಿಸಿದಂತೆ ಕೆಲವು ಮಾರ್ಗಸೂಚಿಗಳನ್ನು ರೂಪಿಸಿದ್ದಾರೆಯೇ ಹೊರತು, ಸಹಕಾರ ಸಂಘಗಳ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಅಲ್ಲದೆ, ಸರಕಾರಿ ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ದೊಡ್ಡ ಪ್ರಮಾಣದ ಹಣ ಸಹಕಾರ ಸಂಘಗಳ ಮೂಲಕ ಪಾವತಿಯಾಗುತ್ತದೆ. ಇಲ್ಲೇನಾದರೂ ಆರ್ಥಿಕ ಅವ್ಯವಹಾರ ಆದರೆ ಅದನ್ನು ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಉಳಿದಂತೆ ಸರಕಾರದ ತಿದ್ದುಪಡಿಯಿಂದ ಸಂವಿಧಾನದ ಪರಿಚ್ಛೇದ 19ರ ಮೂಲಭೂತ ಹಕ್ಕಿನ ಉಲ್ಲಂಘನೆ ಆಗುವುದಿಲ್ಲ ಎಂದು ಸರ್ಕಾರ ಹೇಳಿದೆ.
    ಸಹಕಾರ ಸಂಘಗಳನ್ನುರಚಿಸಿ, ಅವುಗಳನ್ನು ನಿರ್ವಹಿಸುವುದು ಸಂವಿಧಾನದ ಪರಿಚ್ಛೇದ 19(1)(ಸಿ) ಪ್ರಕಾರ ನಾಗರಿಕರ ಮೂಲಭೂತ ಹಕ್ಕು ಆಗಿದೆ. ಆದರೆ, ಸರ್ಕಾರ ಸಹಕಾರ ಸಂಘಗಳ ಕಾಯ್ದೆ ಸೆಕ್ಷನ್ 128 -ಎಗೆ ತಿದ್ದುಪಡಿ ತರುವ ಮೂಲಕ ಸಂವಿಧಾನದತ್ತವಾದ ಆ ಮೂಲಭೂತ ಹಕ್ಕನ್ನು ಮೊಟಕುಗೊಳಿಸಿದೆ. ಸ್ಥಳೀಯರು ತಾವೇ ಸೇರಿಕೊಂಡು ಮಾಡುತ್ತ ಬಂದಿರುವ ಸಹಕಾರ ಸಂಘಗಳಲ್ಲಿನ ನೌಕರರ ನೇಮಕಾತಿ, ವರ್ಗಾವಣೆ, ಶಿಸ್ತು ಕ್ರಮ ಮತ್ತಿತರ ಆಡಳಿತಾತ್ಮಕ ವಿಚಾರಗಳನ್ನು ಆಯಾ ಸಹಕಾರ ಸಂಘಗಳ ಆಡಳಿತ ಮಂಡಳಿಗಳು ನೋಡಿಕೊಳ್ಳುತ್ತಿದ್ದವು. ಆದರೆ ಅದಕ್ಕೆ ಈಗ ಕಡಿವಾಣ ಹಾಕಲಾಗಿದೆ. ಈ ತಿದ್ದುಪಡಿಯು ಸಂವಿಧಾನಬಾಹಿರವಾಗಿದೆ ಎಂದು ಸಹಕಾರ ಸಂಘಗಳ ವಾದವಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    128 A Section Co Operative Act 1919 Karnataka High Court
    Previous Articleಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸಹಕಾರಿ ನೌಕರರಿಗೂ ಅನ್ವಯ
    Next Article ಸಂಸ್ಥೆಯ ಬೆಳವಣಿಗೆಯಲ್ಲಿ ಗ್ರಾಹಕರ ಕೊಡುಗೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.