Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಮ್ಮ ಕಸ, ನಮ್ಮ ಜವಾಬ್ದಾರಿ
    News

    ನಮ್ಮ ಕಸ, ನಮ್ಮ ಜವಾಬ್ದಾರಿ

    adminBy adminOctober 13, 2025

    ವಿಶ್ವಕರ್ಮ ಬ್ಯಾಂಕ್‌ ಅಧ್ಯಕ್ಷ ಡಾ. ಎಸ್ ಆರ್ ಹರೀಶ್ ಆಚಾರ್ಯ ಅಭಿಮತ

    ಮಂಗಳೂರು: ಸ್ವಚ್ಛತೆಯ ಕಾರ್ಯ ದೇಶದ ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯವಾಗಿದೆ. ನಮ್ಮ ಮನೆ ಮಾತ್ರವಲ್ಲ, ನಮ್ಮ ನಾಗರೀಕ ಪರಿಸರದ ಜವಾಬ್ಧಾರಿಯು ನಮ್ಮೆಲ್ಲರ ವೈಯಕ್ತಿಕ ಜವಾಬ್ದಾರಿಯಾಗಿದೆ. ಆದುದರಿಂದ ನಮ್ಮ ಕಸ, ನಮ್ಮ ಜವಾಬ್ದಾರಿ ಎಂಬ ಮಂತ್ರದಂತೆ ಸ್ವಚ್ಛ ಭಾರತದ ಕನಸನ್ನು ನನಸಾಗಿಸುವ ಕಾರ್ಯದಲ್ಲಿ ನಾವು ಮುಂದುವರಿಯಬೇಕಾಗಿದೆ ಎಂದು ಡಾ. ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಅವರು ವಿಶ್ವಕರ್ಮ ಸಹಕಾರ ಬ್ಯಾಂಕ್ ಆಯೋಜಿಸಿರುವ ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ಸ್ವಯಂಸೇವಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಭಾರತ ಕಾರ್ಯಕ್ರಮದ “ಸ್ವಚ್ಛತಾ ಹೀ ಸೇವಾ “ ಎಂಬ ಧ್ಯೇಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬ್ಯಾಂಕ್ ತನ್ನ ಸ್ವರ್ಣ ಜಯಂತಿಯ ಹಿನ್ನಲೆಯೊಳಗೆ ಎಲ್ಲಾ ಶಾಖೆಗಳು ಮತ್ತು ಅದರ ಗ್ರಾಹಕರೊಂದಿಗೆ ಈ ಆಂದೋಲನದಲ್ಲಿ ಕೈಜೋಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಹೇಳಿದರು.


    ವಿಶ್ವಕರ್ಮ ಸಹಕಾರ ಬ್ಯಾಂಕಿನ ಪ್ರಧಾನ ಕಚೇರಿ ಪರಿಸರದಲ್ಲಿ ಪ್ರಾರಂಭವಾದ ಈ ಸ್ವಚ್ಛ ಭಾರತ್ ಕಾರ್ಯಕ್ರಮವನ್ನು ಹಸಿರು ನಿಶಾನೆ ತೋರುವ ಮೂಲಕ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ರಾಜೇಂದ್ರ, ದ.ಕ. ಜಿಲ್ಲಾ ಚಿನ್ನದ ಕೆಲಸಗಾರರ ಸಂಘದ ಅಧ್ಯಕ್ಷರಾದ ಕೆ.ಎಲ್. ಹರೀಶ್ ಮತ್ತು ಕಾಳಿಕಾಂಬಾ ಸೇವಾ ಸಮಿತಿಯ ಜಗದೀಶ್ ಸಿದ್ದಕಟ್ಟೆ ಇವರು ಉದ್ಘಾಟಿಸಿದರು. ಸ್ವಚ್ಛ ಭಾರತ ಕಾರ್ಯಕ್ರಮದ ಸಂಚಾಲಕರಾದ ಭರತ್ ನಿಡ್ಪಳ್ಳಿ ಹಾಗೂ ಪ್ರಕಾಶ್ ಆಚಾರ್ಯ ಹಲೇಜಿ ಶ್ರಮದಾನದ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಬ್ಯಾಂಕಿನ ಉಪಾದ್ಯಕ್ಷರಾದ ಜಗದೀಶ್ ಆಚಾರ್ಯ ಪಡುಪಣಂಬೂರು, ನಿರ್ದೇಶಕರುಗಳಾದ ಹರಿಪ್ರಸಾದ್, ಬಿಜು ಜಯ, ಜಯಶ್ರೀ ವಿ. ಆಚಾರ್ಯ, ರೇಷ್ಮಾ ಚಂದನ್, ವ್ಯವಸ್ಥಾಪಕ ನಿರ್ದೇಶಕರಾದ ವಸಂತ ಅಡ್ಯಂತಾಯ, ಅಂಬಾಮಹೇಶ್ವರಿ ಸೇವಾ ಟ್ರಸ್ಟ್ ಸದಸ್ಯರಾದ ಪುನೀತ್, ಮಂಜುಳಾ, ನೇಹಾ, ಸಾಮಾಜಿಕ ಕಾರ್ಯಕರ್ತರಾದ ರತ್ನಾಕರ ಆಚಾರ್ಯ, ಕೆ.ಎಲ್. ಸುರೇಶ್, ಕೆ.ಜೆ.ಗುರುರಾಜ್, ಪ್ರಕಾಶ್ ಕುಂಟಾಡಿ, ನಾಗೇಶ್ ಆಚಾರ್ಯ ಕುಳಾಯಿ, ಗೋಪಾಲ್ ಶೇಟ್, ಪುರುಷೋತ್ತಮ ಪ್ರಭು, ದ.ಕ. ಚಿನ್ನದ ಕೆಲಸಗಾರರ ಸಂಘದ ಸದಸ್ಯರು, ವಿಶ್ವಕರ್ಮ ಯುವ ವೇದಿಕೆಯ ಸದಸ್ಯರು, ಕಾಳಿಕಾಂಬಾ ಸೇವಾ ಸಮಿತಿಯ ಸದಸ್ಯರು ಹಾಗೂ ಬ್ಯಾಂಕಿನ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿ ಸಹಕರಿಸಿದರು.
    ಬ್ಯಾಂಕಿನ ಸುತ್ತಮುತ್ತಲಿನ ಪ್ರದೇಶಗಳಾದ ಟೆಂಪಲ್ ಸ್ಕ್ವೇರ್, ಫ್ಲವರ್ ಮಾರ್ಕೆಟ್, ರಥಬೀದಿ, ನ್ಯೂಚಿತ್ರಾ ಟಾಕಿಸ್, ಅಳಕೆ, ಡೊಂಗರಕೇರಿ ಮುಂತಾದ ಪ್ರದೇಶಗಳಲ್ಲಿ ಸ್ವಯಂಸೇವಕ ಕಾರ್ಯಕರ್ತರು ಪರಿಸರದ ಸ್ವಚ್ಛತೆ ಹಾಗೂ ಸೌಂದರ್ಯೀಕರಣದ ಕಾರ್ಯದಲ್ಲಿ ತೊಡಗಿಸಿಕೊಂಡು ಕರ್ತವ್ಯ ನಿರ್ವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Carstreet Dakshina Kannada Jilla Chinnada Kelsagarara Sangha Swachha Bharatha Vishwakarma Sahakara Bank Limited
    Previous Articleಸಾಂಸ್ಥಿಕ ಬೆಳವಣಿಗೆಯಿಂದ ಸಿಬ್ಬಂದಿಗಳ ಬೆಳವಣಿಗೆ
    Next Article ಜನತಾ ಬಜಾರ್‌ಗೆ ನಿರ್ದೇಶಕರ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.