Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎನ್‌ಸಿಡಿಸಿ, MyGovನಿಂದ ರಾಷ್ಟ್ರಮಟ್ಟದ ಪ್ರಬಂಧ ಸ್ಪರ್ಧೆ
    News

    ಎನ್‌ಸಿಡಿಸಿ, MyGovನಿಂದ ರಾಷ್ಟ್ರಮಟ್ಟದ ಪ್ರಬಂಧ ಸ್ಪರ್ಧೆ

    adminBy adminOctober 15, 2025

    ನವದೆಹಲಿ: ಭಾರತದ ಸಹಕಾರಿ ಚಳವಳಿಯ ಭವಿಷ್ಯದ ಬಗ್ಗೆ ಹೊಸ ಚಿಂತನೆ ಸೃಜಿಸುವ ಪ್ರಯತ್ನವೊಂದರಲ್ಲಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮವು (NCDC), MyGov ಸಹಭಾಗಿತ್ವದಲ್ಲಿ “ಬದಲಾಗುತ್ತಿರುವ ಕಾಲದಲ್ಲಿ ಸಹಕಾರಿ ಸಂಸ್ಥೆಗಳ ಹೆಚ್ಚುತ್ತಿರುವ ಮಹತ್ವ” (“Increasing Significance of Cooperatives in Changing Times.”) ಎಂಬ ವಿಷಯದ ಕುರಿತು ರಾಷ್ಟ್ರವ್ಯಾಪಿ ಪ್ರಬಂಧ ಸ್ಪರ್ಧೆ ಆಯೋಜಿಸಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸ್ಪರ್ಧೆಯಲ್ಲಿ ಯಾವುದೇ ವಯೋಮಿತಿಯ ನಾಗರಿಕರು ಮುಕ್ತವಾಗಿ ಭಾಗವಹಿಸಬಹುದು. ವೇಗವಾಗಿ ವಿಕಸನಗೊಳ್ಳುತ್ತಿರುವ ಆರ್ಥಿಕ ಮತ್ತು ಸಾಮಾಜಿಕ ಸನ್ನಿವೇಶದಲ್ಲಿ ಸಹಕಾರಿ ಸಂಸ್ಥೆಗಳು ವಿವಿಧ ಸಮುದಾಯಗಳಿಗೆ ಹೇಗೆ ಹೊಂದಿಸಿಕೊಳ್ಳಬಹುದು, ವಿಸ್ತರಿಸಬಹುದು ಮತ್ತು ಸಬಲೀಕರಣಗೊಳಿಸಬಹುದು ಎಂಬುದರ ಕುರಿತು ಮೂಲ ವಿಚಾರಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದೆ. ಸಹಕಾರಿ ಕ್ಷೇತ್ರವು ಸಮಗ್ರ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಸ್ಥಳೀಯ ಸ್ವಾವಲಂಬನೆಯನ್ನು ಸಾಧಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಲಿದೆ ಎಂದು ಎನ್‌ಸಿಡಿಸಿ ಪ್ರತಿಪಾದಿಸುತ್ತದೆ. ಕೃಷಿ, ಹೈನುಗಾರಿಕೆ, ವಸತಿ, ಸಾಲ, ಮೀನುಗಾರಿಕೆ ಮತ್ತು ಸೇವೆಗಳಂತಹ ಕ್ಷೇತ್ರಗಳು, ನೀತಿಗಳು ಮತ್ತು ಡಿಜಿಟಲ್ ರೂಪಾಂತರಕ್ಕೆ ಒಳಗಾಗುತ್ತಿರುವ ಸಮಯದಲ್ಲಿ, ಸಹಕಾರಿ ಸಂಸ್ಥೆಗಳನ್ನು ಬಲಪಡಿಸುವ ಬಗ್ಗೆ ಸಾರ್ವಜನಿಕ ಸೃಜನಶೀಲತೆಯನ್ನು ವಿಶೇಷವಾಗಿ ಯುವಕರು, ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಂದ ಬಳಸಿಕೊಳ್ಳಲು ಈ ಸ್ಪರ್ಧೆಯು ಮುಂದಾಗಿದೆ.
    ಸ್ಪರ್ಧೆಯಲ್ಲಿ ಭಾಗವಹಿಸುವವರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಬರೆಯಬಹುದು, ಪ್ರಬಂಧಗಳು 1,500 ಪದಗಳಿಗೆ ಮೀರಬಾರದು. ಆಡಳಿತವನ್ನು ಸುಧಾರಿಸಲು, ಮಾರುಕಟ್ಟೆ ಪ್ರವೇಶವನ್ನು ಯುವಕರ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸಲು, ಸುಸ್ಥಿರತೆಯ ಮಾದರಿಗಳನ್ನು ನಿರ್ಮಿಸಲು ಮತ್ತು ಸಹಕಾರಿಗಳನ್ನು ರಾಷ್ಟ್ರೀಯ ಅಭಿವೃದ್ಧಿ ಆದ್ಯತೆಗಳೊಂದಿಗೆ ಜೋಡಿಸಲು ಹೊಸ ಹೊಸ ಆವಿಷ್ಕಾರಗಳನ್ನು ಸೃಜಿಸಲು ಈ ಮೂಲಕ ಎನ್‌ಸಿಡಿಸಿ ಯೋಜಿಸುತ್ತಿದೆ. ಪ್ರಥಮ ಬಹುಮಾನ ರೂ. 15,000, ಎರಡನೇ ಮತ್ತು ಮೂರನೇ ಸ್ಥಾನಗಳಿಗೆ ರೂ. 10,000 ಮತ್ತು ರೂ. 5,000 ನಿಗದಿಪಡಿಸಲಾಗಿದ್ದು, ತಲಾ ರೂ 2,000 ನ ಮೂರು ಸಮಾಧಾನಕರ ಬಹುಮಾನಗಳನ್ನು ಸಹ ನೀಡಲಾಗುವುದು. ಈ ಕುರಿತ ಯಾವುದೇ ಮಾಹಿತಿಗಾಗಿ MyGov ಅನ್ನು ತೆರೆದು ಪರಿಶೀಲಿಸಬಹುದು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Essay Contest Increasing Significance of Cooperatives in Changing Times MyGov NCDC role of Cooperatives
    Previous Articleಮಂಗಳೂರು ಹಾಪ್‌ಕಾಮ್ಸ್‌ ಆಡಳಿತ ಸಹಕಾರ ಭಾರತಿ ತೆಕ್ಕೆಗೆ
    Next Article ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ ಪಿ ಅವಿರೋಧ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.