Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವ್ಯಾವಹಾರಿಕ ಬದ್ಧತೆ ಜೊತೆಗೆ ಸಾಮಾಜಿಕ ಜವಾಬ್ದಾರಿ
    News

    ವ್ಯಾವಹಾರಿಕ ಬದ್ಧತೆ ಜೊತೆಗೆ ಸಾಮಾಜಿಕ ಜವಾಬ್ದಾರಿ

    adminBy adminOctober 19, 2025

    ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಸ್ ಆರ್ ಹರೀಶ್ ಆಚಾರ್ಯ ಅಭಿಪ್ರಾಯ

    ಕಾರ್ಕಳ: ಯಾವುದೇ ಆರ್ಥಿಕ ಸಂಸ್ಥೆಗೆ ವ್ಯಾವಹಾರಿಕ ಬದ್ಧತೆಯ ಜೊತೆಗೆ ಸಾಮಾಜಿಕ ಜವಾಬ್ದಾರಿ ಕೂಡ ಇರುತ್ತದೆ. ಈ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ವಚ್ಛ ಭಾರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಅವರು ವಿಶ್ವಕರ್ಮ ಬ್ಯಾಂಕಿನ ಕಾರ್ಕಳ ಶಾಖೆಯ ವತಿಯಿಂದ ಭಾನುವಾರ “ಸ್ವಚ್ಛತಾ ಹೀ ಸೇವಾ” ಎಂಬ ಆಶಯದಂತೆ ನಡೆದ ಸ್ವಚ್ಛ ಭಾರತ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
    ವಿಶ್ವಕರ್ಮ ಸಹಕಾರ ಬ್ಯಾಂಕ್ ಇದರ ಸ್ವರ್ಣ ಮಹೋತ್ಸವ ಪ್ರಯುಕ್ತ ಸ್ವಚ್ಛ ಪರಿಸರ ರೂಪಿಸಲು ಪ್ರತಿಯೊಬ್ಬರೂ ಭಾಗಿದಾರಿಕೆ ವಹಿಸುವ ಅಗತ್ಯವಿದೆ. ಆದುದರಿಂದ ಸ್ವಚ್ಛತೆಯ ಮೂಲಭೂತ ಕರ್ತವ್ಯಗಳಲ್ಲಿ ನಾವೆಲ್ಲರೂ ಒಂದಾಗಬೇಕಾಗಿದೆ. ನಮ್ಮ ಕಸ, ನಮ್ಮ ಜವಾಬ್ದಾರಿ ಎಂಬ ಮೂಲಮಂತ್ರವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.


    ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಸ್ವಚ್ಛ ಕಾರ್ಕಳದ ಪ್ರಮುಖರಾದ ಪ್ರಕಾಶ್ ರಾವ್ ಮಾತನಾಡಿ ವಿಶ್ವಕರ್ಮ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಯ ಜೊತೆಜೊತೆಗೆ ಸ್ವಚ್ಛತೆಯಂತಹ ಪ್ರಮುಖ ಸಾಮಾಜಿಕ ಕಾರ್ಯಕ್ರಮವನ್ನು ಮುಂದಿನ ಹತ್ತು ತಿಂಗಳು ನಿರಂತರವಾಗಿ ಹಮ್ಮಿಕೊಂಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.


    ಕಾರ್ಕಳ ಅನಂತಶಯನ ದೇವಸ್ಥಾನ ಪರಿಸರದಿಂದ ನಗರದ ಬಸ್ ಸ್ಟ್ಯಾಂಡ್ ಪರಿಸರದರವರೆಗೆ ಸ್ವಚ್ಛತೆಯ ಶ್ರಮದಾನದ ಕಾರ್ಯಕ್ರಮ ಜರುಗಿತು. ರೋಟರಿ ಕ್ಲಬ್ ಅಧ್ಯಕ್ಷರಾದ ಸುರೇಂದ್ರ ನಾಯಕ್, ಚಿನ್ನ -ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಎಂ ರಮೇಶ್ ಆಚಾರ್ಯ, ಲಯನ್ಸ್ ರೂರಲ್ ಇದರ ಸ್ಥಾಪಕ ಅಧ್ಯಕ್ಷರಾದ ಜ್ಯೋತಿ ರಮೇಶ್, ಕಾಳಿಕಾಂಬಾ ದೇವಸ್ಥಾನದ ಮೊಕೇಸ್ತರರಾದ ಪಿ ರವಿ ಆಚಾರ್ಯ, ಸ್ವಚ್ಛ ಬ್ರಿಗೇಡ್ ಕಾರ್ಕಳದ ಫಿಲಿಕ್ಸ್ ವಾಸ್ ಹಾಗೂ ಸದಸ್ಯರು, ವಕೀಲರ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಭುವನೇoದ್ರ ಕಾಲೇಜಿನ ಪ್ರಾಧ್ಯಾಪಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶಂಕರ್ ಕುಡ್ವ ಹಾಗೂ ವಿದ್ಯಾರ್ಥಿಗಳು, ಜ್ಯೋತಿ ಯುವಕ ಮಂಡಲದ ಅಧ್ಯಕ್ಷರಾದ ಪ್ರಶಾಂತ್ ಹಾಗೂ ಸಂಸ್ಥೆಯ ಸದಸ್ಯರು, ಬ್ಯಾಂಕಿನ ನಿರ್ದೇಶಕರಾದ ಬಿ.ಸೀತಾರಾಮ ಆಚಾರ್, ಹರಿಪ್ರಸಾದ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ವಸಂತ ಅಡ್ಯಂತಾಯ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bhuvanendra College Karkala Dr. S R Harish Acharya Karkala Ananthashayana Road Swacchatha Abhiyana Vishwakarma Sahakara Bank Limited
    Previous Articleಮಂಗಳೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ.ಭಾಸ್ಕರ ರಾವ್ ಆಯ್ಕೆ
    Next Article ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 18ನೇ ಶಾಖೆ ಕಡಬದಲ್ಲಿ ನಾಳೆ ಉದ್ಘಾಟನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.