ಮಂಗಳೂರು: ರಾಜ್ಯೋತ್ಸವ, ರಾಜ್ಯ ಪ್ರಶಸ್ತಿ ಹಾಗೂ ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಗಂಜಿಮಠ ಶಾಖೆಯ ಸ್ಥಳಾಂತರ ಕಾರ್ಯಕ್ರಮ ಅಕ್ಟೋಬರ್ 24ರಂದು ಶುಕ್ರವಾರ ಬೆಳಗ್ಗೆ 11.30ಕ್ಕೆ ನಡೆಯಲಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಗಂಜಿಮಠ ಮುಖ್ಯ ರಸ್ತೆಯ ವೈಕುಂಠ ಪ್ರಭು ಕಾಂಪ್ಲೆಕ್ಸ್ ನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಬ್ಯಾಂಕಿನ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಆಡಳಿತ ಮಂಡಳಿ ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಸೀತಾರಾಮ್ ಎನ್., ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ದಿವಾಕರ್ ಬಿ. ಪಿ., ಗೋಪಾಲ್ ಎಂ, ಚಂದ್ರಾವತಿ, ಉಮಾವತಿ, ಸಲಹಾ ಸಮಿತಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

