ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ, ರೋಟರಿ ಕ್ಲಬ್ ಮಂಗಳೂರು ಸನ್‌ರೈಸ್, ಲಯನ್ಸ್ ಕ್ಲಬ್ ಮಂಗಳಾದೇವಿ, ಕೆ.ಎಸ್ ಹೆಗ್ಡೆ ವೈದ್ಯಕೀಯ ಅಕಾಡಮಿ ನಿಟ್ಟೆ, ಎ ಜೆ ದಂತ ವೈದ್ಯಕೀಯ ಮಹಾವಿದ್ಯಾಲಯ, ಮಂಗಳೂರು, ಮಣಿನಾಲ್ಕೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಸರಪಾಡಿ, ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಪಣಂಬೂರು, ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಮತ್ತು ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ಉಚಿತ ವೈದ್ಯಕೀಯ ಶಿಬಿರ ಹಾಗೂ ಸಮಗ್ರ ಸುಸ್ಥಿರ ಕೃಷಿಯ ಮಾಹಿತಿ, ಕಿಟ್ ವಿತರಣಾ ಕಾರ್ಯಕ್ರಮ ಮತ್ತು ಜೇನು ಸಾಕಣೆ ಬಗ್ಗೆ ಸಮಗ್ರ ಮಾಹಿತಿ ಕಾರ್ಯಕ್ರಮವು ಅಕ್ಟೋಬರ್ 26ರ ಭಾನುವಾರ ಬೆಳಿಗ್ಗೆ 9.30ರಿಂದ ಸರಪಾಡಿ ದಿವಂಗತ ಸುಬ್ಬಣ್ಣ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗ:ಳು ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ವಿಶೇಷವಾಗಿ ಉಚಿತ ವೈದ್ಯಕೀಯ ಶಿಬಿರ, ಸಾಮಾನ್ಯ ಆರೋಗ್ಯ ತಪಾಸಣೆ, ಕಿವಿ, ಮೂಗು, ಗಂಟಲು ತಪಾಸಣೆ, ಮಕ್ಕಳ ಆರೋಗ್ಯ ತಪಾಸಣೆ, ದಂತ ತಪಾಸಣೆ, ಕಣ್ಣಿನ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ಮೂಳೆ ತಪಾಸಣೆ, ಸಾಮಾನ್ಯ ಶಸ್ತ್ರಚಿಕಿತ್ಸೆ, ಇಸಿಜಿ ಇತ್ಯಾದಿಗಳನ್ನು ಮಾಡಲಾಗುವುದು.
ಕೃಷಿ ಮಾಹಿತಿಗೆ ಸಂಬಂಧಿಸಿ ಕೃಷಿಕರಿಗೆ ಡಾಕ್ಟರ್ ಸಾಯಿಲ್ ರೀ ಜನರೇಷನ್ ಕಿಟ್ ವಿತರಣೆ, ಜೇನು ಸಾಕಣೆ ಬಗ್ಗೆ ಸಮಗ್ರ ಮಾಹಿತಿ ಮತ್ತು ಜೇನುಹುಳಗಳೊಂದಿಗೆ ಜೇನು ಪೆಟ್ಟಿಗೆ ವಿತರಣೆ, ಗಂಧದ ಸಸಿ ವಿತರಣೆ, ಸೋಲಾರ್ ಅಳವಡಿಕೆ ಬಗ್ಗೆ ಮಾಹಿತಿ ಮತ್ತು ವಿತರಣೆ, ಮಹಿಳಾ ಸಬಲೀಕರಣದ ಬಗ್ಗೆ ಮಾಹಿತಿ ಹಾಗೂ ಆಯ್ದ ಫಲಾನುಭವಿಗಳಿಗೆ ಕೃಷಿ ಸಲಕರಣೆಗಳ ವಿತರಣೆಯೂ ಜರಗಲಿದೆ. ಸಾರ್ವಜನಿಕರು ಇದರ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : 9008444644.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


