Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ಸಹಕಾರ ಸಂಘದಿಂದ ಮಹಿಳೆಯರಿಗೆ ಹೆಚ್ಚಿನ ಉದ್ಯೋಗ
    News

    ಆತ್ಮಶಕ್ತಿ ಸಹಕಾರ ಸಂಘದಿಂದ ಮಹಿಳೆಯರಿಗೆ ಹೆಚ್ಚಿನ ಉದ್ಯೋಗ

    adminBy adminOctober 26, 2025

    ಗಂಜಿಮಠ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ ಎಂ ಶ್ಲಾಘನೆ

    ಗುರುಪುರ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗಂಜಿಮಠ ಶಾಖೆಯ ಸ್ಥಳಾಂತರ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t

    ಗಂಜಿಮಠ ಗ್ರಾಮ ಪಂಚಾಯತ್ ಕಟ್ಟಡದಲ್ಲಿ 2022ರಿಂದ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಯು ಗಂಜಿಮಠ ಮುಖ್ಯ ರಸ್ತೆಯಲ್ಲಿರುವ ವೈಕುಂಠ ಪ್ರಭು ಕಾಂಪ್ಲೆಕ್ಸ್ನನ ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರಗೊಳಿಸಲಾಯಿತು.
    ಗಂಜಿಮಠ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲತಿ ಎಂ ಅವರು ಸ್ಥಳಾಂತರಗೊ0ಡ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಆತ್ಮಶಕ್ತಿ ಸಂಘದ ಶಾಖೆಯು ಕಳೆದ 3 ವರ್ಷದಿಂದ ಗಂಜಿಮಠ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಘವು ಮಹಿಳೆಯರಿಗೆ ಹೆಚ್ಚು ಉದ್ಯೋಗಾವಕಾಶ ಕಲ್ಪಿಸಿಕೊಟ್ಟಿದೆ. ಗಂಜಿಮಠ ಶಾಖೆಯ ಸಿಬ್ಬಂದಿಗಳು ಪ್ರೀತಿ ವಿಶ್ವಾಸದಿಂದ ಕಾರ್ಯನಿರ್ವಹಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದಾರೆ. ಈ ಬ್ಯಾಂಕಿನಿ0ದ ಜನರಿಗೆ ಇನ್ನಷ್ಟು ಪ್ರಯೋಜನ ದೊರೆಯಲಿ ಎಂದು ಹೇಳಿದರು.
    ಗಂಜಿಮಠ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಾರಮ್ಮ ಅವರು ಗಣಕೀಕೃತ ಬ್ಯಾಂಕಿ0ಗ್‌ಗೆ ಚಾಲನೆ ನೀಡಿದರು.
    ಗಂಜಿಮಠ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ  ಸೋಹನ್ ಅತಿಕಾರಿ ಭದ್ರತಾ ಕೋಶವನ್ನು ಉದ್ಘಾಟಿಸಿ ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ಸಹಕಾರಿ ರಂಗದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡುತ್ತಿದೆ. ಪ್ರಸ್ತುತ ರಾಷ್ಟಿಯ ಹೆದ್ದಾರಿಯ ಅಗಲೀಕರಣದಿಂದ ಶಾಖೆಯ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಾಖೆಯನ್ನು ಸ್ಥಳಾಂತರ ಮಾಡಿರುವುದು ಶ್ಲಾಘನೀಯ. ಪ್ರಸ್ತುತ 33 ಶಾಖೆಯನ್ನು ಹೊಂದಿರುವ ಈ ಸಂಸ್ಥೆಯು ಮುಂದಿನ ದಿನಗಳಲ್ಲಿ 100 ಶಾಖೆಯನ್ನು ಹೊಂದಲಿ ಎಂದು ಶುಭ ಹಾರೈಸಿದರು.
    ತಾಲೂಕ್ ಪಂಚಾಯತ್ ಮಾಜಿ ಸದಸ್ಯರಾದ ಜಿ ಸುನಿಲ್ ಅವರು ಮಾತನಾಡಿ “ಗಂಜಿಮಠ ಗ್ರಾಮ ಪಂಚಾಯತ್ ಕಟ್ಟಡದ ಒಂದನೇ ಅಂತಸ್ತಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಾಖೆಯನ್ನು ಗ್ರಾಹಕರ ಹಿತದೃಷ್ಟಿಯಿಂದ ಗಂಜಿಮಠ ಮುಖ್ಯ ರಸ್ತೆಯಲ್ಲಿರುವ ವೈಕುಂಠ ಪ್ರಭು ಕಾಂಪ್ಲೆಕ್ಸ್ನ ನೆಲ ಅಂತಸ್ತಿನ ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರಿಸಿರುವುದು ಸಂತೋಷದ ವಿಷಯ. ಕಳೆದ 13 ವರ್ಷಗಳಿಂದ ಈ ಸಂಸ್ಥೆಯು ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ನೇತೃತ್ವದಲ್ಲಿ ಜಿಲ್ಲಾದ್ಯಂತ ಉತ್ತಮ ಸೇವೆಯನ್ನು ನೀಡುತ್ತಿದೆ. ಅದರೊಂದಿಗೆ ಸಂಘದ ಸಿಬ್ಬಂದಿಗಳ ಪರಿಶ್ರಮವೂ ಕಾರಣ ಎಂದು ಆಶಯ ವ್ಯಕ್ತಪಡಿಸಿದರು.
    ಬಿಲ್ಲವ ಸಂಘ ಪಡುಪೆರಾರ ಇದರ ಗೌರವ ಅಧ್ಯಕ್ಷರಾದ ಕೃಷ್ಣ ಕೆ ಅಮೀನ್ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಹಾಗೂ ಎಲ್ಲಾ ಆಡಳಿತ ನಿರ್ದೇಶಕರಿಗಳಿಗೆ ಅಭಿನಂದನೆ ಸಲ್ಲಿಸಿ, ಸಹಕಾರಿ ಸಂಘವು ಜನರಿಗೆ ಕಷ್ಟ ಕಾಲದಲ್ಲಿ ಅನುಕೂಲವಾಗಲೆಂದೇ ಕಾರ್ಯನಿರ್ವಹಿಸಿ ಗ್ರಾಹಕರಿಗೆ ತೃಪ್ತಿಕರ ಸೇವೆಯನ್ನು ನೀಡುತ್ತಾ ಬಂದಿದೆ. ಇನ್ನು ಮುಂದೆಯೂ ಇದೇ ರೀತಿಯಲ್ಲಿ ಸೇವೆಯನ್ನು ನೀಡಲಿ ಎಂದು ಆಶಯ ವ್ಯಕ್ತಪಡಿಸಿದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೊಳಾರ್  ಮಾತನಾಡಿ, ಸಂಘದ ಸದಸ್ಯರ ಅನುಕೂಲಕೋಸ್ಕರ ಗಂಜಿಮಠ ಗ್ರಾಮ ಪಂಚಾಯತ್ ಕಟ್ಟಡದ ಪ್ರಥಮ ಅಂತಸ್ತಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಾಖೆಯನ್ನು ಗಂಜಿಮಠ ಮುಖ್ಯ ರಸ್ತೆಯಲ್ಲಿರುವ ವೈಕುಂಠ ಪ್ರಭು ಕಾಂಪ್ಲೆಕ್ಸ್ನನ ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರ ಮಾಡಲಾಗಿದೆ. ನೂತನ ಶಾಖೆಯ ಉದ್ಘಾಟನಾ ಪ್ರಯುಕ್ತ ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 10,500/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು ಎಂದು ಹೇಳಿದರು.
    ಗಂಜಿಮಠ ಶಾಖೆ ಜೊತೆ ಉತ್ತಮ ಭಾಂದವ್ಯ ಹೊಂದಿರುವ ಹಿರಿಯ ಸದಸ್ಯರಾದ ಕೆ. ನಾರಾಯಣ ಕಾಮತ್, ಶಾಲಿನಿ, ಪ್ರವೀಣ್ ಎನ್ ಶೆಟ್ಟಿ,  ಲಕ್ಷ್ಮೀಶ ಅಂಚನ್,  ಜಿ ನಾರಾಯಣ ಕಾರಂತ್, ರೇಶ್ಮ,  ಕೃಷ್ಣಪ್ಪ ಪೂಜಾರಿ,  ದಯಾನಂದ,  ರೋನಾಲ್ಡ್ ಜೋಸೆಪ್ ರೆಬೆಲ್ಲೊ, ಜಾನ್ ರೋಡ್ರಿಗಸ್, ಹಾಗೂ ವಿಠಲ ಭಂಡಾರಿ ಅವರನ್ನು ಗೌರವಿಸಲಾಯಿತು.

    ಈ ಸಮಾರಂಭದಲ್ಲಿ ಗಂಜಿಮಠ ಗ್ರಾಮ ಪಂಚಾಯತ್ ಇದರ ಸದಸ್ಯರಾದ  ಸುನೀಲ್ ಮನೋಜ್ ಫೆರ್ನಾಂಡಿಸ್,  ರೇಖಾ,  ಪ್ರವೀಣ್ ಶೆಟ್ಟಿ, ರಿಕ್ಷಾ ಚಾಲಕ ಮಾಲಕರ ಸಂಘ ಗಂಜಿಮಠ ಇದರ ಗೌರವ ಅಧ್ಯಕ್ಷರಾದ  ರಮಾನಾಥ್ ಶೆಟ್ಟಿ, ವೈಕುಂಠ ಪ್ರಭು ಕಾಂಪ್ಲೆಕ್ಸ್ನ ಕಟ್ಟಡದ ಮಾಲಕರಾದ  ಸುಧಾ ವಿ ಪ್ರಭು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಮತ್ತಿತ್ತರರು ಉಪಸ್ಥಿತರಿದ್ದರು.

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರಾದ ಆನಂದ್ ಎಸ್. ಕೊಂಡಾಣ,  ಸೀತಾರಾಮ್ ಎನ್, ರಮಾನಾಥ ಸನಿಲ್, ಮುದ್ದು ಮೂಡಬೆಳ್ಳೆ, ಮತ್ತಿತ್ತರರು ಪಾಲ್ಗೊಂಡಿದ್ದರು.

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ  ನೇಮಿರಾಜ್ ಪಿ ವಂದಿಸಿದರು. ಸಹಾಯಕ ಪ್ರಭಂದಕರಾದ  ವಿಶ್ವನಾಥ್ ಹಾಗೂ ಶಾಖಾಧಿಕಾರಿ ಸಂದೀಪ್ ಕಾರ್ಯಕ್ರಮ ನಿರೂಪಿಸಿದರು.

    Atmashakti vividhoddesha sahakara sangha Ganjimata Malathi M Saramma
    Previous Articleಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕಿನಿಂದ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟನೆ
    Next Article ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಆಶ್ರಯದಲ್ಲಿ ದಾಸವಾಣಿ ಕಾರ್ಯಕ್ರಮ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.