ವಿಶ್ವಕರ್ಮ ಬ್ಯಾಂಕ್ ಆಶ್ರಯದಲ್ಲಿ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿ ಲಯನ್ ಸುಧಾಕರ ಆಚಾರ್ಯ ಅಭಿಪ್ರಾಯ
ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಸುವರ್ಣ ಸಂಭ್ರಮದ ಸಂದರ್ಭದಲ್ಲಿ ನೂರಾರು ಕೋಟಿ ವ್ಯವಹಾರ ಮಾಡುವುದರೊಂದಿಗೆ ಸಮಾಜಕ್ಕಾಗಿ ನಿರಂತರ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬ್ಯಾಂಕಿಂಗ್ ಸೇವೆಯೊಂದಿಗೆ ಸಾಮಾಜಿಕ ಸೇವೆಯನ್ನು ಮಾಡುತ್ತಿರುವುದು ಅದರಲ್ಲಿಯೂ ಮೆಲ್ಕಾರ್‌ನಂತಹ ಸಾಮಾನ್ಯ ಪರಿಸರದಲ್ಲಿ ನಿರಂತರ ಮುಂದಿನ 10 ತಿಂಗಳ ಕಾಲ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಜನರಿಗೆ ತುಂಬ ಸಂತಸ ಉಂಟುಮಾಡಿದೆ ಎಂದು ಬಜಾರ್ ಬೀಡಿ ಮಾಲೀಕರಾದ ಲಯನ್ ಸುಧಾಕರ್ ಆಚಾರ್ಯ ಹೇಳಿದರು.
https://chat.whatsapp.com/JVAtKKe2M19AFO3W5629ZS?mode=ems_copy_t
ವಿಶ್ವಕರ್ಮ ಸಹಕಾರ ಬ್ಯಾಂಕಿನ ಸುವರ್ಣ ವರ್ಷಾಚರಣೆ ಪ್ರಯುಕ್ತ ಬ್ಯಾಂಕಿನ ಮೆಲ್ಕಾರ್ ಶಾಖೆಯ ವತಿಯಿಂದ ಭಾನುವಾರ ಪಾಣೆಮಂಗಳೂರು ಪರಿಸರದ ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನ ಪರಿಸರದಿಂದ ನರಿಕೊಂಬು ಪರಿಸರದ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛ ಪರಿಸರದ ನಿರ್ಮಾಣದ ನಿಟ್ಟಿನಲ್ಲಿ ಸ್ವಚ್ಛತೆಯ ಶ್ರಮದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಯುವ ಸಂಗಮ ಮೆಲ್ಕಾರ್ ಇದರ ಗೌರವಾಧ್ಯಕ್ಷರಾದ ಎಂ.ಎನ್ ಕುಮಾರ್ ಮಾತನಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಯೊಂದಿಗೆ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತಿರುವುದು ಬ್ಯಾಂಕಿನ ಸಾಮಾಜಿಕ ಬದ್ಧತೆಗೆ ಹಿಡಿದ ಕೈಗನ್ನಡಿ. ಸ್ವಚ್ಛ ಭಾರತ ಕಾರ್ಯಕ್ರಮ ನಮ್ಮ ಮನೆಯಿಂದ ಪ್ರಾರಂಭವಾಗಬೇಕು, ಮುಂದಿನ ಪೀಳಿಗೆಗೂ ಸ್ವಚ್ಛತೆಯ ಅರಿವನ್ನು ಮೂಡಿಸಬೇಕು. ಈ ನಿಟ್ಟಿನಲ್ಲಿ ವಿಶ್ವಕರ್ಮ ಬ್ಯಾಂಕ್ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.







ಬ್ಯಾಂಕಿನ ನಿರ್ದೇಶಕರಾದ ಬಿಜು ಜಯ, ಜಯಪ್ರಕಾಶ್ ಭಂಡಾರಿಬೆಟ್ಟು, ಪ್ರಕಾಶ್ ಆಚಾರ್ಯ ತುಂಬೆ, ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಮತ್ತು ಸದಸ್ಯರು, ಬಂಟ್ವಾಳ ಪುರಸಭೆಯ ಮಾಜಿ ಸದಸ್ಯೆ ವಸಂತಿ ಗಂಗಾಧರ್, ಯುವ ಸಂಗಮ (ರಿ). ಮೆಲ್ಕಾರ್ ಇದರ ಅಧ್ಯಕ್ಷರಾದ ಪೂರ್ಣೇಶ್, ಸತ್ಯದೇವತೆ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಹರೀಶ್ ಗಾಣಿಗ ಹಾಗೂ ಸದಸ್ಯರು, ನವಜೀವನ ಗೇಮ್ಸ್ ಕ್ಲಬ್ ಇದರ ಅಧ್ಯಕ್ಷರಾದ ಧನಂಜಯ ಮತ್ತು ಸದಸ್ಯರು, ನರಿಕೊಂಬು ಯುವಕ ಮಂಡಲ ಅಧ್ಯಕ್ಷರಾದ ಕೃಷ್ಣ ಹಾಗೂ ಉಪಾಧ್ಯಕ್ಷರಾದ ಭಾಸ್ಕರ್ ಕುಲಾಲ್, ಮಹಿಳಾ ಪ್ರೇರಣಾ ಸಂಘ, ವಿನಾಯಕ ಫ್ರೆಂಡ್ಸ್ ವಿದ್ಯಾನಗರ ನರಿಕೊಂಬು, ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಪಾಣೆಮಂಗಳೂರು ಇದರ ಪದಾಧಿಕಾರಿಗಳು, ಬ್ಯಾಂಕಿನ ವ್ಯವಸ್ಥಾಪಕರಾದ ಉಷಾ ಕೆ ಹಾಗೂ ಸಿಬ್ಬಂದಿಗಳು ಸೇರಿದಂತೆ ಬೇರೆ ಬೇರೆ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಪದಾಧಿಕಾರಿಗಳು, ಬ್ಯಾಂಕಿನ ಗ್ರಾಹಕರು ಸ್ವಯಂಪ್ರೇರಿತರಾಗಿ ಭಾಗವಹಿಸಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಹಕರಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com




