Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಕಾಯ್ದೆಗೆ ಸಮಗ್ರ ತಿದ್ದುಪಡಿಯ ಹೈಕೋರ್ಟ್ ಆದೇಶ ಸ್ವಾಗತಾರ್ಹ
    News

    ಸಹಕಾರ ಕಾಯ್ದೆಗೆ ಸಮಗ್ರ ತಿದ್ದುಪಡಿಯ ಹೈಕೋರ್ಟ್ ಆದೇಶ ಸ್ವಾಗತಾರ್ಹ

    adminBy adminOctober 30, 2025

    ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಅಭಿಪ್ರಾಯ

    ಕಾರ್ಕಳ: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ವರ್ತಮಾನದ ಅಗತ್ಯಕ್ಕೆ ತಕ್ಕಂತಿಲ್ಲ, ಈ ಕಾಯ್ದೆಯನ್ನು ಅಗತ್ಯಕ್ಕೆ ತಕ್ಕಂತೆ ಪರಿಷ್ಕರಿಸುವುದು ಅಗತ್ಯ ಎಂದು ರಾಜ್ಯ ಹೈಕೋರ್ಟ್ ಹೇಳಿರುವುದು ಸ್ವಾಗತಾರ್ಹ ಮತ್ತು ಸಕಾಲಿಕ ಎಂದು ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ನ್ಯಾಯಮೂರ್ತಿ ಸೂರಜ್ ಗೋವಿಂದರಾಜ ಅವರಿದ್ದ ಏಕಸದಸ್ಯ ನ್ಯಾಯಪೀಠವು ಇತ್ತೀಚೆಗೆ ರಿಟ್ ಅರ್ಜಿಯೊಂದರ ವಿಚಾರಣೆಯ ಸಂದರ್ಭ ಕರ್ನಾಟಕ ಸಹಕಾರ ಸಂಘಗಳ (ಕೆಪಿಎಸ್) ಕಾಯ್ದೆ_1959 ಈವರೆಗೆ ಆಡಳಿತ ನಡೆಸಿರುವ ಸರಕಾರಗಳು ಹಲವು ತಿದ್ದುಪಡಿಗಳನ್ನು ತಂದಿದ್ದರೂ, ಅಸ್ಪಷ್ಟತೆಗಳು ಇನ್ನೂ ಉಳಿದಿರುವುದನ್ನು ಗಮನಿಸಿದೆ. ಕಾಯ್ದೆಯ ಅಡಿಯಲ್ಲಿ ಬರುವ ಸದಸ್ಯತ್ವದ ಹಕ್ಕುಗಳು, ಅನರ್ಹತೆ, ಮತದಾರರ ಪಟ್ಟಿ ಸಿದ್ದಪಡಿಸುವುದು, ಕಾಲಕಾಲಕ್ಕೆ ಚುನಾವಣೆ ನಡೆಸುವುದು, ಲೆಕ್ಕಪರಿಶೋಧನೆ ಮತ್ತು ಆಡಳಿತ ಅಧಿಕಾರಿ ನೇಮಕಾತಿಗೆ ಸಂಬಂಧಿಸಿದ ಹಲವು ನಿಯಮಗಳಲ್ಲಿ ಸಂಘರ್ಷದ ಅಂಶಗಳಿವೆ. ಈ ಎಲ್ಲಾ ಗೊಂದಲಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಪಿಎಸ್ ಕಾಯಿದೆಗೆ ತಾರ್ಕಿಕವಾಗಿ ಸಮಗ್ರ ತಿದ್ದುಪಡಿ ಮಾಡಬೇಕಾಗಿದೆ ಎಂದು ಕೋರ್ಟ್ ಹೇಳಿದೆ.


    ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಹಣಕಾಸು ,ನೇಕಾರಿಕೆ, ಸಕ್ಕರೆ, ವಸತಿ ವಲಯಗಳಲ್ಲಿನ ಸಹಕಾರ ಸಂಘಗಳು ಸಮಾಜದಲ್ಲಿ ಹಾಸುಹೊಕ್ಕಾಗಿ ಅವುಗಳು ಬೀರುತ್ತಿರುವ ಪರಿಣಾಮವನ್ನು ಗಮನಿಸಿದಾಗ ಕೋರ್ಟ್‌ನ ಕಳಕಳಿ ಅರ್ಥವಾಗುತ್ತದೆ. ಯಾವುದೇ ಕಾಯ್ದೆ ಇರಲಿ, ಕಾಲದ ಅವಶ್ಯಕತೆಗಳಿಗೆ ಸ್ಪಂದಿಸದೆ ಹೋದರೆ ಅದು ತನ್ನ ಮೌಲ್ಯ ಕಳೆದುಕೊಳ್ಳುತ್ತದೆ ಮತ್ತು ಆ ಕಾಯ್ದೆಯನ್ನು ರೂಪಿಸಿದ ಉದ್ದೇಶವೂ ವ್ಯರ್ಥವಾಗುತ್ತದೆ. ಸಹಕಾರಿ ಸಂಸ್ಥೆಗಳ ಸ್ವಾಯತ್ತತೆ ಹಾಗೂ ಆ ಸಂಸ್ಥೆಗಳಲ್ಲಿ ಸಾಂವಿಧಾನಿಕ ತತ್ವಗಳೊಂದಿಗೆ ದಕ್ಷತೆ, ಪಾರದರ್ಶಕತೆ ಮತ್ತು ಹೊಂದಾಣಿಕೆ ಖಾತರಿಪಡಿಸಿಕೊಳ್ಳಲು ಅನುಕೂಲವಾಗುವಂತೆ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗುತ್ತದೆ.
    ಹೈಕೋರ್ಟ್‌ನ ಅಭಿಪ್ರಾಯ ಹೊರಬೀಳುವ ಮೊದಲೇ ರಾಜ್ಯ ಸರಕಾರವು ಇದೇ ವರ್ಷ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ_2025ನ್ನು ರೂಪಿಸಿ ಅದಕ್ಕೆ ಎರಡೂ ಸದನಗಳಿಂದ ಅಂಗೀಕಾರ ಪಡೆದಿದೆ. ಆದರೆ ಈ ತಿದ್ದುಪಡಿಯಲ್ಲಿ ಮಾಡಿರುವ ಅಂಶಗಳು ಕೆಲವೇ ಕೆಲವು ವಿಷಯಗಳಿಗೆ ಸೀಮಿತವಾಗಿದೆಯೇ ಹೊರತು ಹೈಕೋರ್ಟ್ ಹೇಳಿರುವಂತೆ ಕಾಯ್ದೆಯನ್ನು ಕೂಲಂಕಶವಾಗಿ ಪರಿಶೀಲನೆಗೆ ಒಳಪಡಿಸಿ ಸಮಗ್ರ ತಿದ್ದುಪಡಿ ತರುವ ಉದ್ದೇಶವನ್ನು ಹೊಂದಿರಲಿಲ್ಲ.
    ರಾಜ್ಯ ಸರಕಾರದ ಸಹಕಾರಿ ಇಲಾಖೆಯು ಹೈಕೋರ್ಟ್ ಹೇಳಿರುವಂತೆ ಹೊಸ ಸಮಗ್ರ ಸಹಕಾರಿ ಕಾಯ್ದೆಯನ್ನು ರೂಪಿಸಲು ತಜ್ಞರ ಸಮಿತಿ ರಚಿಸಿ, ಹಿರಿಯ ಅನುಭವಿ ಸಹಕಾರಿಗಳ ಸಲಹೆ ಪಡೆದು ಕರ್ನಾಟಕ ರಾಜ್ಯದ ಸಹಕಾರಿ ಕ್ಷೇತ್ರದ ಆಮೂಲಾಗ್ರ ಬದಲಾವಣೆಗಾಗಿ ಹೊಸ ಕಾಯ್ದೆಯನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಾಣೂರು ನರಸಿಂಹ ಕಾಮತ್ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Co Operative ministry Cooperative Cooperative Registrar Highcourt KPS ACT 1959 Sahakara Bharathi State Secretery Sanooru Narasimha Kamath
    Previous Articleಆತ್ಮಶಕ್ತಿ ಸಹಕಾರಿ ಸಂಘದ ಸಿಬ್ಬಂದಿಯಿಂದ ಉತ್ತಮ ಸೇವೆ
    Next Article ಸಹಕಾರ ಕ್ಷೇತ್ರದ ಸಾಧಕ ಶೇಖರ ಗೌಡ ಮಾಲಿಪಾಟೀಲರಿಗೆ ರಾಜ್ಯೋತ್ಸವ ಪ್ರಶಸ್ತಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.