ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ, ಗುರುಕೃಪಾ ಸೆಂಟ್ರಲ್ ಸ್ಕೂಲ್, ಬಳ್ಕೊಟ್ಟು, “ನಿನಾದ” ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಪಾವಂಜೆ ಸಹಯೋಗದಲ್ಲ ಪಾವಂಜೆಯ ರಂಗಮಂದಿರ ವಠಾರದಲ್ಲಿ ಕಾರಂತರ ಚಿಂತನೆಯೊಂದಿಗೆ ನಂದಿನಿ ನದಿಯ ತಟದಲ್ಲಿ ಭತ್ತದ ಕೃಷಿಯ ಸುತ್ತ ಕಾರ್ಯಕ್ರಮವು ನಡೆಯಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಇಂದಿನ ಯುವ ಪೀಳಿಗೆಗೆ ಕೃಷಿ ಪದ್ಧತಿ ಹಾಗೂ ಸಂಪ್ರದಾಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಅತೀ ಅಗತ್ಯವಾಗಿದ್ದು, ನಮ್ಮ ನಾಡು ಕಂಡ ಶ್ರೇಷ್ಠ ಕವಿ, ಪರಿಸರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ ಕಾರಂತರ ಚಿಂತನೆಯೊಂದಿಗೆ ಕೃಷಿ ಬದುಕಿನ ಅಧ್ಯಯನ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು, ವಿದ್ಯಾರ್ಥಿಗಳಿಗೆ ಪ್ರಕೃತಿಯ ಮಹತ್ವ ತಿಳಿಸಿಕೊಡುವ ನಿಟ್ಟಿನಲ್ಲಿ ಕಾರಂತರನ್ನು ಕೇಂದ್ರವಾಗಿಟ್ಟುಕೊಂಡು ಟ್ರಸ್ಟ್ ವತಿಯಿಂದ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ವಿದ್ಯಾರ್ಥಿಗಳು ಪ್ರಕೃತಿಯ ರಕ್ಷಣೆಯ ಜವಾಬ್ದಾರಿ ಹೊಂದಬೇಕು ಎಂದರು.


ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ ಬೆರ್ನಾಡ್, ಇಂದಿನ ಪೀಳಿಗೆ ಪರಿಸರದಿಂದ ಅಂತರವನ್ನು ಕಾಯ್ದುಕೊಳ್ಳುತ್ತಿದೆ. ಪರಿಸರದೊಂದಿಗೆ ಬದುಕಿ ನಮ್ಮ ಸಂಸ್ಕೃತಿಯನ್ನು ಅರಿತಾಗ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದರು.
ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಶಶೀಂದ್ರ ಕುಮಾರ್, ಬ್ರಹ್ಮಶ್ರೀ ನಾರಾಯಣ ಗುರು ಶಿಕ್ಷಣ ಟ್ರಸ್ಟ್ ದಯಾಕರ ಕುಳಾಯಿ, ಸಾಹಿತಿ ಡಾ.ನಿಕೇತನ, ಉದ್ಯಮಿ ಕಡಂಬೋಡಿ ಮಹಾಬಲ ಪೂಜಾರಿ, ಸುರತ್ಕಲ್ ಓರಿಯೆಂಟಲ್ ಇನ್ಸೂರೆನ್ಸ್ ಕಂಪೆನಿಯ ವಿಶ್ರಾಂತ ವಲಯ ಪ್ರಬಂಧಕ ಲ.ಯಾದವ ದೇವಾಡಿಗ, ಮುಕ್ಕ ಮೆಸ್ಕಾಂ ಸೆಕ್ಷನ್ ಆಫೀಸರ್ ಲ.ಯಶೋಧರ ಸಾಲ್ಯಾನ್, ಪಾವಂಜೆ ಗುರುಕೃಪಾ ಸೆಂಟ್ರಲ್ ಸ್ಕೂಲ್ ಪ್ರಾಂಶುಪಾಲ ರೋಹಿತ್ ಹಾಗೂ ಪ್ರಿಯದರ್ಶಿನಿ ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಉಪಸ್ಥಿತರಿದ್ದರು. ಪಾವಂಜೆ ನಿನಾದ ಸಂಸ್ಕೃತಿ ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ಗಣೇಶ್ ಸಂಕಮಾರ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿ, ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಗುರುಕೃಪಾ ಸೆಂಟ್ರಲ್ ಸ್ಕೂಲ್ ನ ಸಹಾಯಕ ಪ್ರಾಧ್ಯಾಪಕಿ ನಯನಾ ವಂದಿಸಿದರು.

