ಮಂಡ್ಯ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ ಆಯೋಜನೆ
ಮಂಡ್ಯ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಮತ್ತು ಸಹಕಾರ ಕುರಿತು ಸಂವಾದ ಕಾರ್ಯಕ್ರಮ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಲಾಗಿತ್ತು.
https://chat.whatsapp.com/JVAtKKe2M19AFO3W5629ZS?mode=ems_copy_t
ಮಂಡ್ಯದ ಶಾಸಕ ಪಿ.ರವಿಕುಮಾರ್ ಗೌಡ ಕಾರ್ಯಕ್ರಮದ ಉದ್ಘಾಟಿಸಿದರು. ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ ಗೌರವ ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ ಎಸ್.ಕೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೈ ಶುಗರ್ ಮಂಡ್ಯದ ಮುಖ್ಯ ಹಣಕಾಸು ಅಧಿಕಾರಿ ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಖಾದರ್ ಪಾಷಾ, ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಗುರುರಾಜ್ ಬಿ.ಟಿ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ.ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು. ಮೈಸೂರು ಪ್ರಾಂತಿಯ ಅಧಿಕಾರಿ ಗುರುಪ್ರಸಾದ್ ಬಂಗೇರ ಸ್ವಾಗತಿಸಿದರು.

ನಂತರ ಸಹಕಾರ ಕ್ಷೇತ್ರದ ಪರಿಚಯ ಹಾಗೂ ಯುವಕರ ಪಾತ್ರದ ಕುರಿತು ಮೈಸೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗದ ಸಂದರ್ಶಕ ಪ್ರಾಧ್ಯಾಪಕ, ಡಾ.ಎ.ಆರ್ ಶ್ರೀನಾಥ್ ಉಪನ್ಯಾಸ ನೀಡಿದರು. ಸಂವಾದ ಕಾರ್ಯಕ್ರಮ ಮಂಜುನಾಥ ಎಸ್.ಕೆ ಅಧ್ಯಕ್ಷತೆಯಲ್ಲಿ ನಡೆಯಿತು. ಶರಣಗೌಡ ಜಿ ಪಾಟೀಲ್ ಸಂವಾದಕಾರರಾಗಿದ್ದರು. ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಎಚ್.ಆರ್ ನಾಗಭೂಷಣ್, ಖಾದರ್ ಪಾಷಾ, ಸಂದರ್ಶಕ ಪ್ರಾಧ್ಯಾಪಕ ಡಾ.ಎ.ಆರ್ ಶ್ರೀನಾಥ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಕಾಲೇಜು ವಿದ್ಯಾರ್ಥಿಗಳು ಪ್ರಶ್ನೋತ್ತರಗಳನ್ನು ಕೇಳುವ ಮುಖಾಂತರ ಸಂವಾದ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಯಿತು.
ಮಧ್ಯಾಹ್ನದ ಅವಧಿಯಲ್ಲಿ ಉದ್ದೇಶಿತ ಕ್ಯಾಂಪಸ್ ಕೋಆಪರೇಟಿವ್ ರಚನೆ ಕುರಿತು ಸಹ ಪ್ರಾಧ್ಯಾಪಕ ಡಾ.ಲೋಕೇಶ್ ಕೆ.ಪಿ ಅಧ್ಯಕ್ಷತೆಯಲ್ಲಿ ಸಹ ಪ್ರಾಧ್ಯಾಪಕರುಗಳಾದ ಪ್ರೇಮ್ ಸಿಂಗ್ ಹಾಗೂ ಡಾ.ಶಿವರಾಂ ಉಪಸ್ಥಿತಿಯಲ್ಲಿ ನಡೆಯಿತು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ಬಲರಾಮ್ ಎನ್ ವಿಷಯ ನಿರ್ವಹಣೆ ಮಾಡಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ಅಶೋಕ್ ವಂದಿಸಿದರು. ಕಾಲೇಜಿನ 280ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು, ಸಿಬ್ಬಂದಿಗಳು ಭಾಗವಹಿಸಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com








