Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವತಿಯಿಂದ ಬೃಹತ್ ಆಧಾರ್ ನೋಂದಣಿ, ತಿದ್ದುಪಡಿ ಶಿಬಿರ
    News

    ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವತಿಯಿಂದ ಬೃಹತ್ ಆಧಾರ್ ನೋಂದಣಿ, ತಿದ್ದುಪಡಿ ಶಿಬಿರ

    adminBy adminNovember 7, 2025

    ಕಡಬ: ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಕಡಬ ತಾಲೂಕು ಪತ್ರಕರ್ತರ ಸಂಘದ ನೇತೃತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ಎರಡು ದಿನಗಳ ಬೃಹತ್ ಆಧಾರ್ ನೋಂದಣಿ ಹಾಗೂ ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮಾ ಶಿಬಿರಕ್ಕೆ ಗುರುವಾರ ಚಾಲನೆ ನೀಡಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕಡಬ ತಾಲೂಕು ಪತ್ರಕರ್ತರ ಸಂಘ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಸಮಾಜಕ್ಕೆ ಹತ್ತಿರವಾಗಿದೆ, ಪತ್ರಕರ್ತರು ಅಂಚೆ ಇಲಾಖೆಯ ಸಹಯೋಗದೊಂದಿಗೆ ಆಧಾರ್ ಮೇಳ ಮಾಡುತ್ತಿರುವುದು ಉತ್ತಮ ಕಾರ್ಯ, ಅಂಚೆ ಇಲಾಖೆ ಮುಂಚೆಯಿಂದಲೂ ಒಳ್ಳೆಯ ಕೆಲಸ ಮಾಡುತ್ತಾ ಬಂದಿದೆ, ಇದೀಗ ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಆಧಾರ್ ನೋಂದಣಿ, ತಿದ್ದುಪಡಿ , ವಿಮಾ ಯೋಜನೆಗಳನ್ನು ಜನರಿಗೆ ನೀಡುತ್ತಾ ಜನಸ್ನೇಹಿ ಇಲಾಖೆಯಾಗಿದೆ ಎಂದರು.
    ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ ಕಡಬ ತಾಲೂಕು ಪತ್ರಕರ್ತರ ಸಂಘ ಕೇವಲ ಸಂಘದೊಳಗಿನ ಸದಸ್ಯರಿಗೆ ಸೀಮಿತವಾಗದೆ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಕೊಂಡು ಉತ್ತಮ ಕಾರ್ಯ ಮಾಡುತ್ತಾ ಜಿಲ್ಲೆಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
    ಅಂಚೆ ಇಲಾಖೆಯ ಮಾರುಕಟ್ಟೆ ಪ್ರತಿನಿಧಿ ಗುರುಪ್ರಸಾದ್ ಅಂಚೆ ಇಲಾಖೆಯ ವಿಮಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಗಿರೀಶ್ ಎ.ಪಿ., ನಿರ್ದೇಶಕ ಸದಾನಂದ ಪಿ., ಕಡಬ ಪಟ್ಟಣ ಪಂಚಾಯಿತಿ ಸದಸ್ಯೆ ಅಕ್ಷತಾ ಬಾಲಕೃಷ್ಣ, ಅಂಚೆ ಇಲಾಖೆಯ ಸುಬ್ರಹ್ಮಣ್ಯ ಅಂಚೆಪಾಲಕ ನಾಗಾಚಾರಿ, ಮೇಲ್ವಿಚಾರಕ ರಮೇಶ್ , ಕಡಬ ಸಮುದಾಯ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿಗಳಾದ ಸೋನಿಯಾ, ಪೂರ್ಣಿಮಾ, ಕಡಬ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ವಿಜಯ ಕುಮಾರ್ ಪೆರ್ಲ ಉಪಸ್ಥಿತರಿದ್ದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸ್ಥಾಪಕಾಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊಯಿಲ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Adhar Tiddupadi Shibira Kadaba Patrakartara Sangha Kadaba Prathamika Krushi Pattina Sahakara Sangha Post Office Scheme
    Previous Articleಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಿಂದ ಜನೋಪಯೋಗಿ ಕಾರ್ಯಕ್ರಮ
    Next Article ವಿಶ್ವಕರ್ಮ ಬ್ಯಾಂಕಿನ ಸಮಾಜಮುಖಿ ಕಾರ್ಯ ಸ್ತುತ್ಯರ್ಹ : ಡಾ.ದೇವದಾಸ್ ರೈ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.