ಎರಡು ಆ್ಯಪ್ ಉದ್ಘಾಟಿಸಿ ಸಹಕಾರ ಸಚಿವ ಅಮಿತ್ ಷಾ ಹೇಳಿಕೆ
ನವದೆಹಲಿ: ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ಡಿಜಿಟಲ್ ಪಾವತಿಯ ಬಳಕೆಯನ್ನು ಹೆಚ್ಚಿಸಲು ‘ಸಹಕಾರ್ ಡಿಜಿ ಪೇ’ ಮತ್ತು ‘ಸಹಕಾರ್ ಡಿಜಿ ಲೋನ್’ ಎಂಬ ಎರಡು ಮೊಬೈಲ್ ಆ್ಯಪ್‌ಗಳಿಗೆ ಸೋಮವಾರ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಚಾಲನೆ ನೀಡಿದ್ದಾರೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಪ್ರಸಕ್ತ ನಗದು ರಹಿತ ಪಾವತಿ ವಿಧಾನ ಹೆಚ್ಚುತ್ತಿದ್ದು, ಸಹಕಾರಿ ಬ್ಯಾಂಕುಗಳ ಉಳಿವಿಗೆ ಡಿಜಿಟಲ್ ಪಾವತಿ ಅಳವಡಿಕೆ ಅಗತ್ಯ. ನಗರ ಸಹಕಾರಿ ಬ್ಯಾಂಕುಗಳು (ಯುಸಿಬಿ) ಮತ್ತು ಪತ್ತಿನ ಸಹಕಾರ ಸಂಘಗಳ ವೃತ್ತಿಪರತೆ ಹೆಚ್ಚಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎಂದು ಅಮಿತ್ ಷಾ ಹೇಳಿದರು. ದೇಶದ ಸಹಕಾರ ವಲಯದ ಅನುತ್ಪಾದಕ ಆಸ್ತಿ (ಎನ್‌ಪಿಎ) ಕಳೆದ ಎರಡು ವರ್ಷದ ಹಿಂದೆ ಶೇಕಡ 2.8ರಷ್ಟಿತ್ತು. ಈಗ ಶೇ.0.6ಕ್ಕೆ ಇಳಿದಿದೆ. ಬ್ಯಾಂಕ್‌ಗಳ ಕಾರ್ಯಾಚರಣೆಯಲ್ಲಿ ಸುಧಾರಣೆ ಮತ್ತು ಆರ್ಥಿಕ ಶಿಸ್ತು ಉಂಟಾಗಿದೆ ಎಂದು ಅಮಿತ್ ಷಾ ವಿವರಿಸಿದರು. ರಾಷ್ಟ್ರೀಯ ನಗರ ಸಹಕಾರಿ ಬ್ಯಾಂಕ್ ಹಾಗೂ ಪತ್ತಿನ ಸಂಸ್ಥೆಗಳ ಒಕ್ಕೂಟವು (ಎನ್‌ಎಎಫ್‌ಸಿಯುಬಿ) ಮುಂದಿನ ಐದು ವರ್ಷದೊಳಗೆ ಎರಡು ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇರುವ ಪ್ರತಿ ಪಟ್ಟಣದಲ್ಲಿ ಕನಿಷ್ಠ ಒಂದಾದರೂ ಹೆಚ್ಚುವರಿ ನಗರ ಸಹಕಾರಿ ಬ್ಯಾಂಕ್ ಸ್ಥಾಪಿಸುವ ಗುರಿ ಸಾಧಿಸಬೇಕು ಎಂದು ಅಮಿತ್ ಷಾ ಸೂಚಿಸಿದ್ದಾರೆ. ಡಿಜೀ ಪೇ ಇಂದು ಅಗತ್ಯವಾಗಿದೆ. ನಗರ ಸಹಕಾರಿ ಬ್ಯಾಂಕ್ ಗಳು ಈ ಪಾವತಿ ವಿಧಾನಕ್ಕೆ ಹೊಂದಿಕೊಳ್ಳದಿದ್ದರೆ, ಸ್ಪರ್ಧೆಯಿಂದ ಹೊರಗುಳಿಯುತ್ತವೆ. ಎರಡು ವರ್ಷಗಳೊಳಗೆ 1,500 ಬ್ಯಾಂಕ್‌ಗಳು ಈ ಅಪ್ಲಿಕೇಶನ್ ಅನ್ನು ಅಳವಡಿಸಿಕೊಳ್ಳಬೇಕು’ ಎಂದು ಅವರು ತಿಳಿಸಿದ್ದಾರೆ.

