Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸ್ಪರ್ಧಾತ್ಮಕ ಯುಗದಲ್ಲಿ ಮಾಹಿತಿ ತಂತ್ರಜ್ಞಾನಕ್ಕೆ ಮಹತ್ವದ ಸ್ಥಾನ
    News

    ಸ್ಪರ್ಧಾತ್ಮಕ ಯುಗದಲ್ಲಿ ಮಾಹಿತಿ ತಂತ್ರಜ್ಞಾನಕ್ಕೆ ಮಹತ್ವದ ಸ್ಥಾನ

    adminBy adminNovember 12, 2025

    ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಹುಣಸೂರು ಶಾಸಕ ಜಿ.ಡಿ.ಹರೀಶ್‌ ಗೌಡ ಅಭಿಪ್ರಾಯ

    ಮೈಸೂರು: ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಲದ ವತಿಯಿಂದ ಮೈಸೂರಿನಲ್ಲಿ ಕ್ರೆಸ್ಟ್ ಇನ್ಫೋ ಮೀಡಿಯಾ ಸಹಯೋಗದೊಂದಿಗೆ ರಾಜ್ಯಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿತ್ತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಈ ವಿಚಾರ ಸಂಕಿರಣದಲ್ಲಿ ದಕ್ಷಿಣಭಾರತ ಮಟ್ಟದ ನಗರ ಸಹಕಾರಿ ಬ್ಯಾಂಕಿಂಗ್ ಶೃಂಗಸಭೆ (South India Urban Cooperative Banking Summit) ಕಾರ್ಯಕ್ರಮ ಆಯೋಜಿಸಲಾಗಿತ್ತು. ಹುಣಸೂರು ಶಾಸಕ ಹಾಗೂ ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಜಿ.ಡಿ.ಹರೀಶ್ ಗೌಡ ಉದ್ಘಾಟಿಸಿ ಮಾತನಾಡಿ, ಇಂದು ಬ್ಯಾಂಕಿಂಗ್ ಸ್ಪರ್ಧಾತ್ಮಕ ಯುಗದಲ್ಲಿ ಮಾಹಿತಿ ತಂತ್ರಜ್ಞಾನ ಮಹತ್ವ ಪಡೆದಿದೆ. ತಂತ್ರಜ್ಞಾನದ ಸಹಕಾರದಿಂದ ಬ್ಯಾಂಕಿಂಗ್‌ ಕ್ಷೇತ್ರವು ದೇಶದ ಮುಖ್ಯಸ್ಥಾನದಲ್ಲಿದ್ದು ಎಲ್ಲೋ ಮೂಲೆಯಲ್ಲಿರುವ ಶಾಖಾ ಕಚೇರಿಯ ವಹಿವಾಟುಗಳನ್ನು ಡೇಟಾ ಮೂಲಕ ತಿಳಿದುಕೊಳ್ಳುವ ಉತ್ತಮ ವ್ಯವಸ್ಥೆಯಿದೆ. ಇದರಿಂದಾಗಿ ಬ್ಯಾಂಕುಗಳು ಯಶಸ್ವಿಯಾಗಿ ಕಾರ್ಯಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು.
    ಪಟ್ಟಣ ಸಹಕಾರ ಬ್ಯಾಂಕುಗಳು ರಾಷ್ಟ್ರೀಕೃತ ಬ್ಯಾಂಕುಗಳಿಗಿಂತ ಸುಲಭವಾಗಿ ಸಾಲ ನೀಡುವ ಮೂಲಕ ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಎನ್‌ಪಿಎ ವಸೂಲಾತಿಯಲ್ಲೂ ಸಹಾ ಬೆರಳೆಣಿಕೆಯಷ್ಟು ಮಾತ್ರ ಹಿಂದೆ ಉಳಿದಿದೆ. ಸಾಲ ವಸೂಲಾತಿಯು ಉತ್ತಮವಾಗಿದ್ದು ಬ್ಯಾಂಕುಗಳು ಲಾಭ ಗಳಿಸಿ ಮುನೆನಡೆಯುತ್ತಿದೆ. ಸಾಲದ ವಿಚಾರದಲ್ಲಿ ಆಡಳಿತ ಮಂಡಳಿಯವರು ಸದಸ್ಯರ ನಂಬಿಕೆ ಉಳಿಸಿಕೊಳ್ಳಲು ಕಾರ್ಯನಿರ್ವಹಿಸುವ ಮೂಲಕ ಪ್ರಗತಿಯ ಜೊತೆಗೆ ಡಿವಿಡೆಂಡ್‌ ವಿತರಣಾ ವ್ಯವಸ್ಥೆಯೂ ಉತ್ತಮವಾಗಿ ಆದರೆ ಅಭಿವೃದ್ಧಿ ಸಾಧಿಸಬಹುದು ಎಂದು ಹೇಳಿದರು.


    ರಾಜ್ಯ ಪಟ್ಟಣ ಸಹಕಾರ ಮಹಾಮಂಡಳದ ನಿರ್ದೇಶಕರಾದ ಎಸ್.ಬಿ.ಎಂ ಮಂಜು ಸ್ವಾಗತಿಸಿದರು. ರಾಜ್ಯ ಪಟ್ಟಣ ಸಹಕಾರ ಮಹಾಮಂಡಳ ನಿರ್ದೇಶಕರಾದ ಬಿ.ಕೋದಂಡರಾಮು, ವೀರಮ್ಮ, ಎಂ ಬಿ.ಮಂಜೇಗೌಡ, ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಅದ್ಯಕ್ಷರಾದ ಜೆ.ಯೋಗೇಶ್, ಮಹಿಳಾ ಬ್ಯಾಂಕ್ ಅಧ್ಯಕ್ಷರಾದ ಮಂಜುಳಾ ಮಾನಸ ಮರ್ಚೆಂಟ್‌ ಬ್ಯಾಂಕ್, ಉಪಾಧ್ಯಕ್ಷ ಮಹೇಶ್, ಕನ್ಯಾಕಾಪರಮೇಶ್ವರಿ ಬ್ಯಾಂಕ್ ಅಧ್ಯಕ್ಷರಾದ ಸಂದೀಪ್, ಮುಸ್ಲಿಂ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಶೌಕತ್ ಪಾಷಾ, ಗ್ರಾಜುಯೇಟ್ ಬ್ಯಾಂಕ್ ಅಧ್ಯಕ್ಷರಾದ ಶ್ರೀನಿವಾಸ, ನವನಗರ ಬ್ಯಾಂಕ್ ಅಧ್ಯಕ್ಷರಾದ ಬಸಂತ್ ನಂಜಪ್ಪ,ಕೆ ಆರ್ ಬ್ಯಾಂಕ್ ಅಧ್ಯಕ್ಷರಾದ ಬಸಪ್ಪ ಹೆಚ್ ವಾಸು, ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಟಿ.ರವಿ, ನಿರ್ದೇಶಕರಾದ ಪಡುವಾರಹಳ್ಳಿ ಎಂ ರಾಮಕೃಷ್ಣ, ಎನ್ ಯೋಗಾನಂದ್, ಆರ್ ಸೋಮಣ್ಣ, ಹರೀಶ್, ಎಂ ಶಿವಪ್ರಕಾಶ್, ಪಿ.ಗೀತಾ ಕೇರಳ, ಆಂದ್ರಪ್ರದೇಶ , ತಮಿಳುನಾಡು, ತೆಲಂಗಾಣದ ವಿವಿಧ ಸಹಕಾರಿ ಬ್ಯಾಂಕುಗಳ ನಿರ್ದೇಶಕರುಗಳು, ಸಂಪನ್ಮೂಲ ವ್ಯಕ್ತಿಗಳು, ಸಂಘಟನೆಯ ಆಯೋಜಕರು, ಸದಸ್ಯರುಗಳು ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Crest Info Media G D Harish Gowda Karantaka Rajya Pattana Sahakara Bankugala Mahamandala South India Urban Cooperative Banking Summit The Mysore Co Operative Bank
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಗ್ರಾಹಕರ ಸಭೆ
    Next Article ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಿಂದ ಸಹಕಾರ ಸಪ್ತಾಹ ಆಚರಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.