ಕುಂದಾಪುರ : ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗಿರದೆ, ಆ ಪ್ರದೇಶದ ಜನರ ಅಗತ್ಯಗಳಿಗೆ ಸ್ಪಂದಿಸುವ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಸ್ತುತ್ಯರ್ಹ. ಸೇವೆಗೆ ಹೆಸರುವಾಸಿಯಾದ ಈ ಸಂಸ್ಥೆಯು ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತಿರುವುದರಿಂದ ಸಹಕಾರಿಯ ಹೆಸರು ಜನಮಾನಸದಲ್ಲಿ ಉಳಿಯುವಂತಾಗಿದೆ ಎಂದು ಪ್ರಸಿದ್ದ ವ್ಯಂಗ್ಯಚಿತ್ರಗಾರ, ಚುಟುಕು ಸಾಹಿತಿ ಜಿ.ಭಾಸ್ಕರ ಕಲೈಕಾರ್ ಹೇಳಿದರು.
https://chat.whatsapp.com/JVAtKKe2M19AFO3W5629ZS?mode=ems_copy_t
ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ. ಗಂಗೊಳ್ಳಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ಜಂಟಿ ಆಶ್ರಯದಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಬೈಲೂರು ಮಂಜುನಾಥ ಶೆಣೈ ಸಭಾಭವನದಲ್ಲಿ ಜರಗಿದ ಆಧಾರ್ ನೊಂದಣಿ ಮತ್ತು ತಿದ್ದುಪಡಿ ಶಿಬಿರ ಹಾಗೂ ಅಂಚೆ ಜನಸಂಪರ್ಕ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಿ.ವೆಂಕಟೇಶ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ, ಕುಂದಾಪುರದ ಸಹಾಯಕ ಅಂಚೆ ಅಧೀಕ್ಷಕ ಮಹೇಶ ಒಡಿಯೂರು, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಮಾರ್ಕೋಸ್ ಪಿಂಟೊ ಹಾಗೂ ಸದಸ್ಯರು, ಸಹಕಾರಿಯ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ ಮತ್ತು ನಿರ್ದೇಶಕರು ಹಾಗೂ ಸಿಬ್ಬಂದಿಗಳು, ಅಂಚೆ ಇಲಾಖೆಯ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭ ಕುಂದಾಪುರದ ಸಹಾಯಕ ಅಂಚೆ ಅಧೀಕ್ಷಕ ಮಹೇಶ ಒಡಿಯೂರು ಅವರನ್ನು ಗೌರವಿಸಲಾಯಿತು. ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕ ಗಣೇಶ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಒಟ್ಟು 193 ಫಲಾನುಭವಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.

