ಪುತ್ತೂರು: ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕಿನ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮಂಗಳವಾರ ಬ್ಯಾಂಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ಬ್ಯಾಂಕಿನ ಅಧ್ಯಕ್ಷರಾದ ಎನ್. ಕಿಶೋರ್ ಕೊಳತ್ತಾಯ ಅವರು 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿ, ನೂತನ ಕ್ಯಾಲೆಂಡರ್ ವರ್ಷದಲ್ಲಿ ಬ್ಯಾಂಕ್ ಹಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಬ್ಯಾಂಕ್ ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಹೇಳಿದರು. ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಬ್ಯಾಂಕಿನ ಸಂಪೂರ್ಣ ಡಿಜಿಟಲೀಕರಣ ಕಾರ್ಯ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.
ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಅವರು ನೂತನ ಕ್ಯಾಲೆಂಡರ್ ವರ್ಷದ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಭೆಗೆ ವಿವರಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಶ್ರೀಧರ ಗೌಡ, ನಿರ್ದೇಶಕರಾದ ಬಪ್ಪಳಿಗೆ ಚಂದ್ರಶೇಖರ ರಾವ್, ಕಿರಣ್ ಕುಮಾರ್ ರೈ, ರಾಜು ಶೆಟ್ಟಿ, ರಾಮಚಂದ್ರ ಕಾಮತ್, ಮಲ್ಲೇಶ್ ಕುಮಾರ್, ಸುಜೀಂದ್ರ ಪ್ರಭು, ಶ್ರೀಧರ ಪಟ್ಲ, ಸಿ.ಎ. ಅರವಿಂದ ಕೃಷ್ಣ, ಗಣೇಶ ಕೌಕ್ರಾಡಿ, ಹರೀಶ ಭಿಜತ್ರೆ, ಶ್ರೀಮತಿ ಸೀಮಾ ಎ.ಎ., ಶ್ರೀಮತಿ ವೀಣಾ ಹಾಗೂ ಇತರ ಗಣ್ಯರು ಹಾಜರಿದ್ದರು. ಪುತ್ತೂರು ಶಾಖೆಯ ಶಾಖಾಧಿಕಾರಿ ಚಿದಂಬರ ಹಾಗೂ ಬ್ಯಾಂಕಿನ ಸಿಬ್ಬಂದಿವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

