Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನ.23ರಂದು ಸೌಹಾರ್ದ ಸಹಕಾರಿಗಳ ಕ್ರೀಡಾಕೂಟದ ಬಹುಮಾನ ವಿತರಣೆ
    News

    ನ.23ರಂದು ಸೌಹಾರ್ದ ಸಹಕಾರಿಗಳ ಕ್ರೀಡಾಕೂಟದ ಬಹುಮಾನ ವಿತರಣೆ

    adminBy adminNovember 19, 2025

    ರಾಯಚೂರು: ರಾಯಚೂರು ತಾಲೂಕು ಕಾರ್ಯನಿರತ ಸೌಹಾರ್ದ ಸಹಕಾರಿಗಳ ನೌಕರರ ಸಂಘ, ರಾಯಚೂರು, ಮಾನ್ವಿ, ಸಿರವಾರ ಮತ್ತು ದೇವದುರ್ಗ ತಾಲೂಕು ಸೌಹಾರ್ದ ಸಹಕಾರಿಗಳ ಸಮೂಹ ಹಾಗೂ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸೌಹಾರ್ದ ಕಾಯ್ದೆಯ ರಜತ ಮಹೋತ್ಸವ ಹಾಗೂ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆಯ ಅಂಗವಾಗಿ ರಾಯಚೂರು, ಮಾನ್ವಿ, ಸಿರವಾರ ಮತ್ತು ದೇವದುರ್ಗ ತಾಲೂಕು ಸೌಹಾರ್ದ ಸಹಕಾರಿಗಳ ಕ್ರೀಡಾಕೂಟದ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ ನವೆಂಬರ್‌ 23ರಂದು ಭಾನುವಾರ ಬೆಳಗ್ಗೆ 10ರಿಂದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬಸವೇಶ್ವರ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನ ಗೌಡ ಹಾಗೂ ಕರ್ನಾಟಕ ರಾಜ್ಯ ಬಸವೇಶ್ವರ ಸುದ್ದಿ ಮಾಧ್ಯಮ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಗುರುನಾಥ ಜಾಂತೀಕರ್‌ ಉದ್ಘಾಟಿಸಲಿದ್ದಾರೆ. ಮಾನ್ವಿ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್‌ ಅಧ್ಯಕ್ಷ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಆರ್‌.ತಿಮ್ಮಯ್ಯ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಯಚೂರು ಶಾಸಕ ಡಾ.ಶಿವರಾಜ ಪಾಟೀಲ್‌, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮಂತಪ್ಪ, ಹೊಸಪೇಟೆ ವಿಕಾಸ ಸೌಹಾರ್ದ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ವಿಶ್ವನಾಥ ಹಿರೇಮಠ, ಬಳ್ಳಾರಿಯ ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಮೋಹಿತ್‌ ಮಸ್ಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಜಿ.ಶ್ರೀಧರ, ಹನುಮಂತಯ್ಯ ಶೆಟ್ಟಿ, ಶೈಲಜಾ ತಪಲಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೃತ್ತಿಪರ ನಿರ್ದೇಶಕ ಸಂಜೀವ ಮಹಾಜನ, ರಾಯಚೂರು-ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಸೋಮನಗೌಡ ಬಾದರ್ಲಿ, ರಾಯಚೂರು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಎಂ.ದೊಡ್ಡ ಬಸವರಾಜ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಲಬುರಗಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ.ಪಾಟೀಲ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಕಲಬುರಗಿ ಪ್ರಾಂತದ ಪ್ರಾಂತೀಯ ವ್ಯವಸ್ಥಾಪಕ ಸೂರ್ಯಕಾಂತ ರ್ಯಾಕಲೆ, ಪ್ರಾಧ್ಯಾಪಕ ಡಾ.ರಾಜಣ್ಣ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
    ಅದೇ ದಿನ ರೋಟರಿ ಜನಸೇವಾ ಪ್ರತಿಷ್ಠಾನ ಬ್ಲಡ್‌ ಸೆಂಟರ್‌ ಇವರ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Banking Cooperative Cooperative Department G.Nanjan Gowda Guruath janthikar Kreedakuta Rayachur Thaluku Karyaniratha Souharda Sahakarigala okkuta Souharda Sahakari
    Previous Articleಸುಕೋ ಬ್ಯಾಂಕ್ ಮಹಿಳಾ ಅಧಿಕಾರಿಗಳಿಗೆ ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    Next Article ಆರ್ಥಿಕ ಅಭಿವೃದ್ಧಿ, ಹೊಸ ಜೀವನೋಪಾಯದ ಸೃಷ್ಟಿಗೆ ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರಿ ಸಂಘಗಳ ಆಳವಾದ ವಿಸ್ತಾರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.