Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಆಯ್ಕೆ
    News

    ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಆಯ್ಕೆ

    adminBy adminNovember 22, 2025

    ಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ (ಎಂಡಿಸಿಸಿಬಿ) ನೂತನ ಅಧ್ಯಕ್ಷರಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ, ರಾಜ್ಯದ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿಯವರ ಪುತ್ರ ಸಿ.ಸಚಿನ್‌ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮದ್ದೂರಿನ ಸಿ.ಚಲುವರಾಜು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    12 ನಿರ್ದೇಶಕರ ಬಲದ ಎಂಡಿಸಿಸಿ ಬ್ಯಾಂಕ್‌ನಲ್ಲಿ ಒಬ್ಬರಷ್ಟೇ ಜೆಡಿಎಸ್‌ ಬೆಂಬಲಿತ ನಿರ್ದೇಶಕರಿದ್ದು, ಉಳಿದ 11 ಮಂದಿಯೂ ಕಾಂಗ್ರೆಸ್‌ ಬೆಂಬಲಿತರು. ಹೀಗಾಗಿ ಕಾಂಗ್ರೆಸ್‌ ಬೆಂಬಲಿಗರ ಪಡೆಗೆ ಅಧಿಕಾರ ಸಿಗುವುದು ಖಚಿತವಾಗಿದ್ದರೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿತ್ತು. ಕಡೆಗೆ ನಾಗಮಂಗಲ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಸಿ.ಸಚಿನ್‌ ಚಲುವರಾಯಸ್ವಾಮಿ ಅವರ ರಂಗಪ್ರವೇಶವಾಯಿತು. ಬೆಂಗಳೂರಿನ ಕುಮಾರಕೃಪದಲ್ಲಿ ಸಚಿವ ಎನ್‌. ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆದ ಜಿಲ್ಲೆಯ ಎಲ್ಲ ಕಾಂಗ್ರೆಸ್‌ ಶಾಸಕರು, ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕರು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಚಿನ್‌ ಅವರ ಆಯ್ಕೆಯನ್ನೇ ಅಂತಿಮಗೊಳಿಸಲಾಯಿತು.


    ಉಪಾಧ್ಯಕ್ಷ ಸ್ಥಾನವನ್ನು ಮದ್ದೂರಿಗೆ ಕೊಡಲು ತೀರ್ಮಾನಿಸಿ, ಉಪಾಧ್ಯಕ್ಷ ಸ್ಥಾನಕ್ಕೆ ಚಲುವರಾಜು ಹೆಸರು ಅಂತಿಮವಾಗಿತ್ತು. ಅದರಂತೆ ಚುನಾವಣೆ ದಿನದಂದು ಅಧ್ಯಕ್ಷ ಸ್ಥಾನಕ್ಕೆ ಸಿ.ಸಚಿನ್‌ ಚಲುವರಾಯಸ್ವಾಮಿ, ಉಪಾಧ್ಯಕ್ಷ ಸ್ಥಾನಕ್ಕೆ ಸಿ.ಚಲುವರಾಜು ಅವರಿಬ್ಬರು ಮಾತ್ರವೇ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ, ಮಂಡ್ಯ ಉಪವಿಭಾಗಾಧಿಕಾರಿ ಎಂ. ಶಿವಮೂರ್ತಿ ಅವರು ಅವಿರೋಧ ಆಯ್ಕೆ ಪ್ರಕಟಿಸಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಎಂಡಿಸಿಸಿ ಬ್ಯಾಂಕಿನ ಎಲ್ಲ ನಿರ್ದೇಶಕರು, ಕಾಂಗ್ರೆಸ್‌ ಮುಖಂಡರು ಬ್ಯಾಂಕಿನ ನೂತನ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದರು.
    ನೂತನ ಅಧ್ಯಕ್ಷರಾಗಿ ಆಯ್ಕೆ ಬಳಿಕ ಮಾತನಾಡಿದ ಸಿ.ಸಚಿನ್‌ ಚಲುವರಾಯಸ್ವಾಮಿ, ‘ಕೆ.ವಿ. ಶಂಕರಗೌಡರು ಸ್ಥಾಪಿಸಿದ ಎಂಡಿಸಿಸಿ ಬ್ಯಾಂಕ್‌ ಈವರೆಗೆ ಉತ್ತಮ ಕೆಲಸ ಮಾಡಿಕೊಂಡು ಬರುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಜೋಗಿಗೌಡರು ಸಹ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಎಂಡಿಸಿಸಿ ಬ್ಯಾಂಕ್‌ನ ಎಲ್ಲ ಸಿಬ್ಬಂದಿ ವರ್ಗದವರೊಂದಿಗೆ ಸಮನ್ವಯ ಸಾಧಿಸಿ ಉತ್ತಮ ಕೆಲಸ ಮಾಡಲಾಗುವುದು,” ಎಂದು ಹೇಳಿದರು.

    ಈ ಮಧ್ಯೆ ಮಳವಳ್ಳಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರೂ ಆದ ಪಿ.ಎಂ. ನರೇಂದ್ರಸ್ವಾಮಿ ಅವರು ಎಂಡಿಸಿಸಿ ಬ್ಯಾಂಕಿನ ನಿರ್ದೇಶಕರೂ ಆಗಿದ್ದಾರೆ. ಇದೀಗ ಎಂಡಿಸಿಸಿ ಬ್ಯಾಂಕ್‌ನಿಂದ ಅಪೆಕ್ಸ್‌ ಬ್ಯಾಂಕ್‌ ಪ್ರತಿನಿಧಿಯಾಗಿ ನರೇಂದ್ರಸ್ವಾಮಿ ಅವರು ಆಯ್ಕೆಯಾಗುವುದು ಖಚಿತವಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    C Cheluvaraju Malavalli MLA Malavalli MP Mandya District Co Operative Central Bank MDCCB Sachin Chaluvaraya Swamy
    Previous Articleಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಕ್ಯಾಲೆಂಡರ್‌ ಬಿಡುಗಡೆ
    Next Article ಸಹಕಾರ ಭಾರತಿ ಬಾಗಲಕೋಟೆ, ವಿಜಯಪುರ ಜಿಲ್ಲಾ ವಿಶೇಷ ಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.