Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕುಂದಾಪುರ ಶ್ರೀ ಬ್ರಾಹ್ಮೀ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್. ಸಚ್ಚಿದಾನಂದ ಚಾತ್ರ , ಉಪಾಧ್ಯಕ್ಷರಾಗಿ ವಿವೇಕ್ ಯು ಅವಿರೋಧ ಆಯ್ಕೆ
    News

    ಕುಂದಾಪುರ ಶ್ರೀ ಬ್ರಾಹ್ಮೀ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್. ಸಚ್ಚಿದಾನಂದ ಚಾತ್ರ , ಉಪಾಧ್ಯಕ್ಷರಾಗಿ ವಿವೇಕ್ ಯು ಅವಿರೋಧ ಆಯ್ಕೆ

    adminBy adminNovember 25, 2025

    ಕುಂದಾಪುರ: ಕುಂದಾಪುರ ಶ್ರೀ ಬ್ರಾಹ್ಮೀ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ 2025-26ರಿಂದ 2029-30ರ ತನಕದ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಎಸ್. ಸಚ್ಚಿದಾನಂದ ಚಾತ್ರ, ಉಪಾಧ್ಯಕ್ಷರಾಗಿ ವಿವೇಕ್ ಯು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಇದಕ್ಕೆ ಮೊದಲು ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾ ನಿರ್ವಚನಾಧಿಕಾರಿ ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಸಹಾಯಕ ನಿರ್ದೇಶಕರಾದ ವೇಣುಗೋಪಾಲ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಎಸ್.ಸಚ್ಚಿದಾನಂದ ಚಾತ್ರ , ವಿವೇಕ್ ಯು, ಬಿ ಕುಷ್ಠ ನಾಯ್ಕ , ಗಾಯತ್ರಿ ಕಾರಂತ್, ಸುಪ್ರೀತ್ ಎಸ್ ಚಾತ್ರ, ಪ್ರಭಾಕರ ಪೈ, ಪಿ. ಸುಬ್ರಾಯ ಹೆಬ್ಬಾರ್, ನಟರಾಜ್ ಹೆಚ್ , ನವೀನ್ ಚಾತ್ರ , ನಾಗೇಶ್ ರಾವ್ , ರವೀಂದ್ರ ಕನ್ನಂತ, ಮಹಿಳಾ ಮೀಸಲು ಸ್ಥಾನದಿಂದ ಅನಿತಾ ಶಾಸ್ತ್ರಿ ಸುಮಿತ್ರಾ ಬಾಯಿ, ಪರಿಶಿಷ್ಟ ಜಾತಿಯಿಂದ ಟಿ.ರಾಮ, ಪರಿಶಿಷ್ಟ ಪಂಗಡದಿಂದ ಶರಶ್ಚಂದ್ರ ನಾಯ್ಕ್, ಹಿಂದುಳಿದ ವರ್ಗ ಮೀಸಲು ಸ್ಥಾನದಿಂದ ಚಂದ್ರಕಾಂತ್ ಖಾರ್ವಿ, ಪುಪ್ಪಾ ಶೇಟ್ ಕೆ ಇವರುಗಳು ಆಯ್ಕೆಯಾಗಿದ್ದಾರೆ.


    ಪದಾಧಿಕಾರಿಗಳ ಚುನಾವಣೆ: ಸಂಘದ ಆಡಳಿತ ಮಂಡಳಿ ಸಭೆ ಜರಗಿ ಮುಂದಿನ ಅವಧಿಗೆ ಸಂಘದ ಅಧ್ಯಕ್ಷರಾಗಿ ಎಸ್.ಸಚ್ಚಿದಾನಂದ ಚಾತ್ರ, ಉಪಾಧ್ಯಕ್ಷರಾಗಿ ವಿವೇಕ್ ಯು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಟಿ ರಾಮ ಇವರ ಅಧ್ಯಕ್ಷತೆಯಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ಅಡಿಗ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಅಧ್ಯಕ್ಷರಾದ ಎಸ್. ಸಚ್ಚಿದಾನಂದ ಚಾತ್ರ ಅವರು, ಸಂಘದ ಅಭಿವೃದ್ಧಿಗೆ ಠೇವಣಾತಿದಾರರು ಹಾಗೂ ಕ್ಲಪ್ತ ಸಮಯಕ್ಕೆ ಸಾಲ ಮರುಪಾವತಿಸಿದ ಸದಸ್ಯರು ಮುಖ್ಯ ಕಾರಣರಾಗಿದ್ದಾರೆ. ಅವರ ಸೇವೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಠೇವಣಾತಿದಾರರು ಹಾಗೂ ಸಾಲಗಾರರನ್ನು ಸಂಘದ ಸಿಬ್ಬಂದಿಗಳು ಸಮಾನದೃಷ್ಟಿಯಲ್ಲಿ ಅವರೊಂದಿಗೆ ವ್ಯವಹರಿಸುವಂತೆ ನೋಡಿಕೊಳ್ಳಬೇಕು ಹಾಗೂ ನೂತನ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರ ಸಂಪೂರ್ಣ ಸಹಕಾರ ಸಂಘದ ಅಭಿವೃದ್ದಿಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Election S. Sacchidananda Chatra Shree Brahmi Souharda Credit Co operative Society Kundapura Shree Brahmi Souharda Sahakari Sangha
    Previous Articleಮುಂದಿನ ಪೀಳಿಗೆಗೆ ನಾವು ನೀಡಬಲ್ಲ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ
    Next Article ನಾಳೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಬೆಳ್ತಂಗಡಿ ಶಾಖೆ ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.