ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಳಿಯ ಟ್ರಿನಿಟಿ ಕಾಂಪ್ಲೆಕ್ಸ್ ನಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಬೆಳ್ತಂಗಡಿ ಶಾಖೆಯು ಬುಧವಾರ ಲೋಕಾರ್ಪಣೆಗೊಂಡಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ಶಾಖೆಯ ಉದ್ಘಾಟನೆಯನ್ನು ನೇರವೇರಿಸಿ ಆಶೀರ್ವಚನ ನೀಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಮಾನವೀಯತೆ, ಸಹಕಾರ, ಪ್ರೀತಿ, ಸೌಹಾರ್ದಗಳ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸುವ ಸಹಕಾರ ಕ್ಷೇತ್ರವು ಬಡವರ ಬಂಧು ಎನಿಸಿದೆ. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸಹಕಾರಿ ಸಂಘವು ಅತ್ಯುತ್ತಮ ಸೇವೆಯಿಂದ ಜನಸಾಮಾನ್ಯರ ಮನಸ್ಸು ಗೆದ್ದಿದೆ. ಗ್ರಾಮೀಣ ಪ್ರದೇಶದ ಜನರ ಹೃದಯ ಶ್ರೀಮಂತಿಕೆ, ಕೃಷಿ, ಹೈನುಗಾರಿಕೆ ದೇಶದ ಪ್ರಗತಿಯ ಬೆನ್ನೆಲುಬಾಗಿದೆ ಎಂದರು
ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದ ಬಡವರ, ರೈತಾಪಿ ವರ್ಗದವರಿಗೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಪ್ರಾರಂಭಿಸಿದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದರು.




ಉಜಿರೆ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಡಿ.ಬಿ. ಬಾಲಕೃಷ್ಣ ಗೌಡ, ಕಾರ್ಯಾಧ್ಯಕ್ಷ, ವಕೀಲ ಶ್ರೀನಿವಾಸ ಗೌಡ ಬೆಳಾಲು, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕಿ ಭಾರತಿ ಜಿ.ಭಟ್, ದ.ಕ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್ ಬಿ.ಎಸ್., ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕರಾದ ವಿಜಯ ಗೌಡ ವೇಣೂರು, ಸೌಮ್ಯಲತಾ ಜಯಂತ್ ಗೌಡ, ಜತೆ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ, ಜತೆ ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ವಕೀಲ ನವೀನ್ ಗೌಡ, ಸಂಘದ ಉಪಾಧ್ಯಕ್ಷ ಶಿವಕಾಂತ ಗೌಡ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ, ನಿರ್ದೇಶಕರುಗಳಾದ ಲಕ್ಷ್ಮಣ ಗೌಡ, ಬಾಲಕೃಷ್ಣ ಗೌಡ ಕೇರಿಮಾರ್, ದಾಮೋದರ ಗೌಡ ಸುರುಳಿ, ಜಯಂತ ಗೌಡ ಗುರಿಪಳ್ಳ, ಸುಂದರ ಗೌಡ ಪುಡ್ಕೆತ್ತು, ಕೃಷ್ಣಪ್ಪ ಗೌಡ ಬೇಂಗಳ, ಧರ್ಮರಾಜ ಗೌಡ ಅಡ್ಕಾಡಿ, ಜಯಂತ ಗೌಡ ಓಣಿಯಾಲು, ಭರತ್ ಗೌಡ ಹಾನಿಬೆಟ್ಟು, ಕೆ.ಸಂಜೀವ ಗೌಡ ಪಾಂಚಜನ್ಯ, ಸರೋಜಿನಿ ವಿಜಯ ಕುಮಾರ್, ಡಿ. ಚೇತನಾ ಚಂದ್ರಶೇಖರ ಗೌಡ ಉಪಸ್ಥಿತರಿದ್ದರು.
ಭವ್ಯಾ ಸುರೇಂದ್ರ ಗೌಡ ಹಾಗೂ ಹರಿಣಾಕ್ಷಿ ರತ್ನಾಕರ ಗೌಡ ಕಾರ್ಯಕ್ರಮ ನಿರೂಪಿಸಿದರು.
ಸಂಘದ ಸಾಧನಾಪಥ
ಉಜಿರೆ, ಅರಸಿನಮಕ್ಕಿ, ಇಂದಬೆಟ್ಟು, ಬೆಳ್ತಂಗಡಿಯಲ್ಲಿ ಶಾಖೆಗಳನ್ನು ಹೊಂದಿರುವ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸಹಕಾರಿ ಸಂಘವು ಪ್ರತಿವರ್ಷ ರಕ್ತದಾನ ಶಿಬಿರ, ಕ್ರೀಡಾಕೂಟ, ಕೆಂಪೇಗೌಡ ಜಯಂತಿ ಆಚರಣೆ, ಆದಿಚುಂಚನಗಿರಿ ಶಾಖಾ ಮಠಕ್ಕೆ ಸಹಕಾರ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸಂಘದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಹಕಾರ ನೀಡುತ್ತಾ ಬರುತ್ತಿದೆ. ಸೊಸೈಟಿಯಲ್ಲಿ ಒಟ್ಟು 12ಕ್ಕಿಂತ ಹೆಚ್ಚು ಸಿಬ್ಬಂದಿಗಳಿದ್ದಾರೆ. ಕಳೆದ ವರ್ಷ 150 ಕೋಟಿ ರೂ.ಗೂ ಅಧಿಕ ವ್ಯವಹಾರ ನಡೆಸಿದ್ದು 54 ಲಕ್ಷ ರೂ.ಗಿಂತ ಹೆಚ್ಚು ಲಾಭ ಗಳಿಸಿದೆ. ಸಂಘದ ಕೆಲಸ ಕಾರ್ಯಗಳಿಗೆ ಹಲವಾರು ಪ್ರಶಸ್ತಿಗಳು ದೊರಕಿದೆ ಎಂದು ಸಂಘದ ಅಧ್ಯಕ್ಷರು ರಂಜನ್ ಜಿ ಗೌಡ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

