ಪುತ್ತೂರು: ಬೊಳುವಾರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ರೋಯಲ್ ಸೌಹಾರ್ದ ಸಹಕಾರಿ ಸಂಘದ ಕೆಯ್ಯೂರು ಶಾಖೆಯ ಉದ್ಘಾಟನಾ ಸಮಾರಂಭ ಡಿಸೆಂಬರ್ 6ರಂದು ಶನಿವಾರ ಬೆಳಗ್ಗೆ 11ಕ್ಕೆ ಕೆಯ್ಯೂರಿನ ಬ್ರಹ್ಮಶ್ರೀ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಶಾಸಕ ಅಶೋಕ್ ಕುಮಾರ್ ರೈಯವರು ಕಚೇರಿ ಉದ್ಘಾಟಿಸಲಿದ್ದಾರೆ. ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈಯವರು ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ರಾಮಜಾಲು ಗರಡಿ ಪರ್ಪುಂಜ ಇದರ ಆಡಳಿತ ಮೊಕ್ತೇಸರರಾದ ಸಂಜೀವ ಪೂಜಾರಿ ಕೂರೇಲು ಗಣಕಯಂತ್ರ ಮತ್ತು ಕೋರ್ ಬ್ಯಾಂಕಿಂಗ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿಯ ನಿರ್ದೇಶಕರಾದ ಭಾರತಿ ಜಿ.ಭಟ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರೋಯಲ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಎ.ಕೆ ಜಯರಾಮ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಪ್ರಥಮ ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ದ್ವಾರಕಾ ಕಾರ್ಪೊರೇಶನ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಗೋಪಾಲಕೃಷ್ಣ ಭಟ್ ಸ್ವಸಹಾಯ ಸಂಘಗಳ ಪುಸ್ತಕ ಹಸ್ತಾಂತರಿಸಲಿದ್ದಾರೆ. ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷರಾದ ಸಹಕಾರ ರತ್ನ ದಂಬೆಕ್ಕಾನ ಸದಾಶಿವ ರೈ ಸ್ವಸಹಾಯ ಸಂಘಗಳಿಗೆ ಪುರಸ್ಕಾರ ಪ್ರದಾನ ಮಾಡಲಿದ್ದಾರೆ. ಕೆಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶರತ್ ಕುಮಾರ್ ಉಳಿತಾಯ ಖಾತೆ ಪುಸ್ತಕ ವಿತರಣೆ ಮಾಡಲಿದ್ದಾರೆ. ರೋಯಲ್ ಸೌಹಾರ್ದ ಸಹಕಾರಿ ಸಂಘದ ಕೆಯ್ಯೂರು ಶಾಖೆಯ ಸಲಹಾ ಸಮಿತಿಯ ಅಧ್ಯಕ್ಷರಾದ ಉಮಾಕಾಂತ್ ಬೈಲಾಡಿ ಪ್ರಥಮ ಸಾಲ ಪತ್ರ ವಿತರಣೆ ಮಾಡಲಿದ್ದಾರೆ. ಬ್ರಹ್ಮಶ್ರೀ ಕಟ್ಟಡದ ಮಾಲೀಕರಾದ ಜಯಂತ ಪೂಜಾರಿ ಪಿಗ್ಮಿ ಕಸ್ಟಮ್ ಆಫ್ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com









