Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕ್ಯಾಂಪ್ಕೋ ಅಧ್ಯಕ್ಷರಾಗಿ ಎಸ್ ಆರ್ ಸತೀಶ್ಚಂದ್ರ ಆಯ್ಕೆ
    News

    ಕ್ಯಾಂಪ್ಕೋ ಅಧ್ಯಕ್ಷರಾಗಿ ಎಸ್ ಆರ್ ಸತೀಶ್ಚಂದ್ರ ಆಯ್ಕೆ

    adminBy adminDecember 2, 2025

    ​ಕ್ಯಾಂಪ್ಕೊ ಸಂಸ್ಥೆಗೆ ನೂತನ ಸಾರಥ್ಯ: ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ ಆಯ್ಕೆ

    ಮಂಗಳೂರು: ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೋ ಮಾರ್ಕೆಟಿಂಗ್ ಆಂಡ್ ಪ್ರೋಸೆಸ್ಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ), ಮಂಗಳೂರು – ಇದರ ನೂತನ ಅಧ್ಯಕ್ಷರಾಗಿ ಎಸ್. ಆರ್ ಸತೀಶ್ಚಂದ್ರ, ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    2025-2030ರ ಅವಧಿಯ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ, ಎಸ್. ಆರ್. ಸತೀಶ್ಚ0ದ್ರ ಅವರನ್ನು ನೂತನ ಅಧ್ಯಕ್ಷರನ್ನಾಗಿ ಹಾಗೂ ಶ್ರೀ ಪದ್ಮರಾಜ್ ಪಟ್ಟಾಜೆ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
    ಬಂಟ್ವಾಳ ತಾಲೂಕಿನ ಪುಣಚ ಗ್ರಾಮದವರಾದ ಎಸ್. ಆರ್. ಸತೀಶ್‌ಚಂದ್ರ ಅವರು ಸಹಕಾರಿ ಕ್ಷೇತ್ರದಲ್ಲಿ ಹಿರಿಯರಾಗಿದ್ದು ಎರಡೂವರೆ ದಶಕಗಳಿಗೂ ಹೆಚ್ಚಿನ ಸುದೀರ್ಘ ಅನುಭವ ಹೊಂದಿದ್ದಾರೆ. ಇವರು 2015-2020ರ ಅವಧಿಯಲ್ಲೂ ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ನಿರ್ಗಮಿತ ಆಡಳಿತ ಮಂಡಳಿಯಲ್ಲಿ ನಿರ್ದೇಶಕರಾಗಿದ್ದರು. ಕೃಷಿ ಹಾಗೂ ಸಹಕಾರಿ ವಲಯದಲ್ಲಿ ಇವರ ನಾಯಕತ್ವಕ್ಕೆ ಅಪಾರ ಮನ್ನಣೆಯಿದೆ.
    ಕಾಸರಗೋಡಿನ ಪಟ್ಟಾಜೆ-ಬದಿಯಡ್ಕ ಮೂಲದ ಪ್ರಗತಿಪರ ಕೃಷಿಕರಾದ ಪದ್ಮರಾಜ್ ಪಟ್ಟಾಜೆ ಅವರು ದೀರ್ಘಕಾಲದಿಂದ ಸಹಕಾರಿ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರು ಸತತ ಎರಡು ಅವಧಿಗೆ ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಸಾಲಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ಇತರ ವಿವಿಧ ಪ್ರಮುಖ ಸಹಕಾರಿ ಸಂಸ್ಥೆಗಳಲ್ಲಿಯೂ ಮಹತ್ತರ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ.
    ಈ ಮೇಲಿನ ಚುನಾವಣಾ ಫಲಿತಾಂಶಗಳು ನವದೆಹಲಿಯ ಭಾರತ ಸರ್ಕಾರದ ಸಹಕಾರ ಸಚಿವಾಲಯದ ಅಡಿಯಲ್ಲಿ ಬರುವ ‘ಸಹಕಾರಿ ಚುನಾವಣಾ ಪ್ರಾಧಿಕಾರ’ದ (Cooperative Election Authority) ಅಧಿಕೃತ ಅನುಮೋದನೆಯನ್ನು ಪಡೆದ ಬಳಿಕವಷ್ಟೇ ಅಧಿಕೃತವಾಗಿ ಘೋಷಣೆಯಾಗಲಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Campco Padmaraj Pattaje S R Sathishchandra
    Previous Articleರೋಯಲ್‌ ಸೌಹಾರ್ದ ಸಹಕಾರಿ ಸಂಘದ ಕೆಯ್ಯೂರು ಶಾಖೆ ಡಿ.6ರಂದು ಉದ್ಘಾಟನೆ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಮಾಜಿಕ ಸೇವೆ ನಿರಂತರ ಮುಂದುವರಿಯಲಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.