Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರರಿಗೆ ಅಭಿನಂದನೆ
    News

    ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರರಿಗೆ ಅಭಿನಂದನೆ

    adminBy adminDecember 12, 2025

    ಪುತ್ತೂರು: ಕ್ಯಾಂಪ್ಕೊ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಎಸ್.ಆರ್. ಸತೀಶ್ಚಂದ್ರರವರಿಗೆ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಅಭಿನಂದನಾ ಸಮಾರಂಭವನ್ನು ಬ್ಯಾಂಕಿನ ಸಭಾಂಗಣದಲ್ಲಿ ಶುಕ್ರವಾರ ನಡೆಸಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t

    ಬ್ಯಾಂಕಿನ ಅಧ್ಯಕ್ಷರಾದ ಎನ್. ಕಿಶೋರ್ ಕೊಳತ್ತಾಯ ಅವರು ಅಧ್ಯಕ್ಷತೆ ವಹಿಸಿ, ವಿಶೇಷ ಅಭಿನಂದನಾ ಭಾಷಣದ ಮೂಲಕ ಪುತ್ತೂರು ಟೌನ್ ಬ್ಯಾಂಕ್ ಮತ್ತು ಸತೀಶ್ಚಂದ್ರರವರ ನಡುವಿನ ಅವಿನಾಭಾವ ಬಾಂಧವ್ಯವನ್ನು ಸ್ಮರಿಸಿದರು. ಬ್ಯಾಂಕಿನ ಅಭಿವೃದ್ಧಿ ಹಾಗೂ ಪ್ರಗತಿಪರ ಚಟುವಟಿಕೆಗಳಲ್ಲಿ ಅವರು ನೀಡಿರುವ ಮಾರ್ಗದರ್ಶನವನ್ನು ಉಲ್ಲೇಖಿಸಿ, ಬ್ಯಾಂಕಿನ ಪರವಾಗಿ ಅಭಿನಂದನೆಗಳನ್ನು ಅರ್ಪಿಸಿದರು. ನೂತನ ಕ್ಯಾಲೆಂಡರ್ ವರ್ಷದಲ್ಲಿ ಬ್ಯಾಂಕ್ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತರುವ ಉದ್ದೇಶ ಹೊಂದಿದ್ದು, ಬ್ಯಾಂಕಿನ ಡಿಜಿಟಲೀಕರಣಕ್ಕೆ ವಿಶೇಷ ಪ್ರಾಧಾನ್ಯತೆ ನೀಡಲಾಗುತ್ತಿದೆ. ಈ ವರ್ಷಾಂತ್ಯದೊಳಗೆ ಬ್ಯಾಂಕಿನ ಸಂಪೂರ್ಣ ಡಿಜಿಟಲೀಕರಣ ಕಾರ್ಯ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು.

    ಅಭಿನಂದನೆ ಸ್ವೀಕರಿಸಿ ಮಾತನಾಡಿದ ಎಸ್.ಆರ್. ಸತೀಶ್ಚಂದ್ರ, ತಮ್ಮ ಬಾಲ್ಯದಿಂದಲೂ ಪುತ್ತೂರು ಟೌನ್ ಬ್ಯಾಂಕಿನೊಂದಿಗೆ ಹೊಂದಿರುವ ಭಾವನಾತ್ಮಕ ಹಾಗೂ ನಿಕಟವಾದ ಸಂಬಂಧವನ್ನು ನೆನೆದು ಸಂತಸ ವ್ಯಕ್ತಪಡಿಸಿದರು. ಸಹಕಾರಿ ಕ್ಷೇತ್ರದಲ್ಲಿ ಸತ್ಯ, ಧರ್ಮ ಮತ್ತು ಪರಿಶ್ರಮವೇ ಯಶಸ್ಸಿನ ಮೂಲ. ಸಹಕಾರ ಸಂಸ್ಥೆಗಳ ಪ್ರತಿಯೊಬ್ಬ ಸಿಬ್ಬಂದಿಗಳು ನಿಷ್ಠೆಯಿಂದ ಕಾರ್ಯನಿರ್ವಹಿಸಿದರೆ ಅದ್ಭುತ ಸಾಧನೆ ಸಾಧ್ಯ. ಪುತ್ತೂರು ನಗರದ ಅತಿ ಹಿರಿಯ ಹಾಗೂ ವಿಶ್ವಾಸಾರ್ಹ ಸಹಕಾರಿ ಬ್ಯಾಂಕ್ ಆಗಿ ಗುರುತಿಸಿಕೊಂಡಿರುವ ಟೌನ್ ಬ್ಯಾಂಕ್ ತಮ್ಮನ್ನು ಸತ್ಕರಿಸಿದ ಬಗ್ಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.

    ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಶೇಖರ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ನಿರ್ದೇಶಕ ಚಂದ್ರಶೇಖರ ರಾವ್ ಬಪ್ಪಳಿಗೆ ಅವರು ಸನ್ಮಾನಿತರನ್ನು ಪರಿಚಯಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬ್ಯಾಂಕಿನ ಉಪಾಧ್ಯಕ್ಷ ಶ್ರೀಧರ ಗೌಡ ಧನ್ಯವಾದಗಳನ್ನು ಸಲ್ಲಿಸಿದರು.

    ಸಮಾರಂಭದಲ್ಲಿ ಕ್ಯಾಂಪ್ಕೊ ನಿರ್ದೇಶಕರಾದ ಮುರಳಿಕೃಷ್ಣ ಕೆ.ಎನ್., ಸರಸ್ವತಿ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತಕುಮಾರ್, ಶಿವರಂಜನ್, ಬ್ಯಾಂಕಿನ ನಿರ್ದೇಶಕರಾದ ಚಂದ್ರಶೇಖರ ರಾವ್ ಬಪ್ಪಳಿಗೆ, ಕಿರಣ್ ಕುಮಾರ್ ರೈ, ರಾಜು ಶೆಟ್ಟಿ, ರಾಮಚಂದ್ರ ಕಾಮತ್, ಮಲ್ಲೇಶ್ ಕುಮಾರ್, ಶ್ರೀಧರ ಪಟ್ಲ, ಸೀಮಾ ಎ.ಎ., ಟೌನ್ ಬ್ಯಾಂಕಿನ ಪುತ್ತೂರು ಶಾಖಾಧಿಕಾರಿ ಚಿದಂಬರ, ಸಿಬ್ಬಂದಿ ವರ್ಗ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com 

    abhinandana Samarambha B.Shekhar Shetty Campco President Kishor N Kolattaya Putturu Co Operative Town Bank S R Sathishchandra
    Previous Articleಡಿಪ್ಲೊಮಾ ಇನ್‌ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ (ಡಿಸಿಎಂ) ತರಬೇತಿಗೆ ಅರ್ಜಿ ಆಹ್ವಾನ
    Next Article ನಾಳೆ ಡೊಂಗರಕೇರಿ, ಅಳಕೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.