Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ರತ್ನ ಟಿ.ಜಿ.ರಾಜಾರಾಮ್ ಭಟ್ ಅವರಿಗೆ ಅದ್ದೂರಿಯ ಸನ್ಮಾನ
    News

    ಸಹಕಾರ ರತ್ನ ಟಿ.ಜಿ.ರಾಜಾರಾಮ್ ಭಟ್ ಅವರಿಗೆ ಅದ್ದೂರಿಯ ಸನ್ಮಾನ

    adminBy adminDecember 13, 2025

    ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದ ಚಟುವಟಿಕೆಗಳು ರಾಜಕೀಯರಹಿತವಾಗಿ ನಡೆಯುತ್ತದೆ. ಸಹಕಾರಿ ಕ್ಷೇತ್ರದಲ್ಲಿ ಮಾತ್ರ ರಾಜಕೀಯರಹಿತವಾಗಿ ಜನರ ಸೇವೆ ಮಾಡಲು ಸಾಧ್ಯವಿದ್ದು ಎಲ್ಲರೂ ಇಲ್ಲಿ ಜೊತೆಯಾಗಿ ಕೆಲಸ ಮಾಡೋಣ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t

    ಅವರು ಶನಿವಾರ ಬಿ.ಸಿ. ರೋಡಿನಲ್ಲಿ ಸಹಕಾರ ರತ್ನ ಟಿ.ಜಿ. ರಾಜಾರಾಮ್ ಭಟ್ ಅಭಿನಂದನಾ ಸಮಿತಿ ವತಿಯಿಂದ ನಡೆದ ಟಿ.ಜಿ ರಾಜಾರಾಮ್ ಭಟ್ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಕ್ಷಾತೀತವಾಗಿ ಸಹಕಾರಿ ರತ್ನ ಪ್ರಶಸ್ತಿ ನೀಡಿದರೆ ಅದಕ್ಕೆ ಬೆಲೆ ಬರುತ್ತದೆ. ಈ ಬಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಮಂದಿಗೆ ಸಹಕಾರ ರತ್ನ ಪ್ರಶಸ್ತಿ ಬಂದಿದೆ. ಇವರಿಗೆ ಎಲ್ಲಾ ಸಹಕಾರಿಗಳು ಗೌರವಿಸಿದಾಗ ಪ್ರಶಸ್ತಿಯ ಗೌರವವೂ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು.
    ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ ದ.ಕ. ಜಿಲ್ಲೆಯಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಜನರಿಗೆ ರಕ್ತಗತವಾಗಿದೆ. ದೇಶಕ್ಕೆ ನಾಲ್ಕು ರಾಷ್ಟ್ರೀಕೃತ ಬ್ಯಾಂಕುಗಳನ್ನು ನೀಡಿದ ಹೆಗ್ಗಳಿಕೆ ದ.ಕ.ಜಿಲ್ಲೆಗಿದೆ ಎಂದರು.
    ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಸಹಕಾರಿ ಕ್ಷೇತ್ರದ ಮೂಲಕವೇ ತನ್ನ ರಾಜಕೀಯ ಜೀವನ ಆರಂಭಗೊಂಡಿತ್ತು. ರಾಜಾರಾಮ್ ಭಟ್ ಅವರು ಸಹಕಾರಿ ಕ್ಷೇತ್ರಕ್ಕೆ ಸಾಕಷ್ಟು ಶಕ್ತಿ ತುಂಬಿದ್ದಾರೆ ಎಂದು ತಿಳಿಸಿದರು.


    ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಟಿ.ಜಿ. ರಾಜಾರಾಮ್ ಭಟ್ ಹಾಗೂ ಜ್ಯೋತಿ ಆರ್. ಭಟ್ ದಂಪತಿಯನ್ನು ಅಭಿನಂದಿಸಲಾಯಿತು.‌ ಬಳಿಕ ಎಸ್ಸಿಡಿಸಿಸಿ ಬ್ಯಾಂಕಿನ 10 ಶಾಖೆಗಳ ವತಿಯಿಂದ ರಾಜಾರಾಮ್ ಭಟ್ ಅವರನ್ನು ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜಾರಾಮ್ ಭಟ್, ಸಹಕಾರಿ ಚಳವಳಿಯಲ್ಲಿ ನನಗೆ ಬೆಂಬಲ ನೀಡಿದವರು ಎಂ.ಎನ್. ರಾಜೇಂದ್ರ ಕುಮಾರ್. ಅವರಿಂದ ಸ್ವೀಕರಿಸಿದ ಸನ್ಮಾನ ನನ್ನ ಜೀವನದ ಉತೃಷ್ಟವಾದ ದಿನ. ಯುವಜನರು ಸಹಕಾರಿ ಸಂಘಕ್ಕೆ ಬರಲು ಇದು ಪ್ರೇರಣೆಯಾಗಿದೆ ಎಂದು ತಿಳಿಸಿದರು.


    ಸಹಕಾರ ರತ್ನ ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಕಾಮಧೇನು ನವೋದಯ ಸಸ್ವಸಹಾಯ ಸಂಘದ ಸದಸ್ಯೆ ಸುಜಾತಾ ಅವರಿಗೆ 25 ಸಾವಿರ ರೂಪಾಯಿಗಳ ಆರ್ಥಿಕ ನೆರವಿನ‌ ಚೆಕ್ ನೀಡಲಾಯಿತು.
    ಎಸ್ ಸಿ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್, ಎಸ್ ಸಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್. ಪಿ.ಜಯರಾಂ ರೈ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಉಪಸ್ಥಿತರಿದ್ದರು.
    ಅಭಿನಂದನಾ ಸಮಿತಿ ಅಧ್ಯಕ್ಷ ಜಯಶಂಕರ್ ಬಾಸ್ರಿತ್ತಾಯ ಸ್ವಾಗತಿಸಿದರು. ಗೌರವಾಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ ಪ್ರಾಸ್ತವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ವಂದಿಸಿದರು. ಅಮ್ಟಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶಾಖಾ ವ್ಯವಸ್ಥಾಪಕ ದಿನೇಶ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.
    ಮಹಾದೇವ ವಿವಿಧೋದ್ದೇಶ ಸಹಕಾರ ಸಂಘದ ಸಿಇಒ ಪುಷ್ಪರಾಜ್ ಕುಕ್ಕಾಜೆ ಸನ್ಮಾನ ಪತ್ರ ವಾಚಿಸಿದರು. ಕೋಶಾಧಿಕಾರಿ ಅಜಯ್ ಕುಮಾರ್ ಅಜಿಲ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    B Ramanath Rai Dr. M.N Rajendrakumar T G Rajaram Bhat TG Rajaram Bhat Abhinandana Samithi
    Previous Articleನಾಳೆ ಡೊಂಗರಕೇರಿ, ಅಳಕೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯ
    Next Article ಸ್ವಚ್ಛತೆಯ ಸ್ವಯಂಜಾಗೃತಿ ರಾಷ್ಟ್ರೀಯ ಆಂದೋಲನವಾಗಲಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.