Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಕ್ಷೇತ್ರದ ಬಲವರ್ಧನೆಗಾಗಿ ನಿರಂತರ ಕಾರ್ಯೋನ್ಮುಖ
    News

    ಸಹಕಾರ ಕ್ಷೇತ್ರದ ಬಲವರ್ಧನೆಗಾಗಿ ನಿರಂತರ ಕಾರ್ಯೋನ್ಮುಖ

    adminBy adminDecember 16, 2025

    ಕಾರ್ಕಳ ತಾಲೂಕು ಸಹಕಾರ ಭಾರತಿ ಅಭ್ಯಾಸ ವರ್ಗದಲ್ಲಿ ಬೋಳ ಸದಾಶಿವ ಶೆಟ್ಟಿ ಅಭಿಪ್ರಾಯ

    ಕಾರ್ಕಳ: ಕಳೆದ 46 ವರ್ಷಗಳಿಂದ ದೇಶಾದ್ಯಂತ ಎಲ್ಲಾ ರಾಜ್ಯಗಳ ಸುಮಾರು 700 ಜಿಲ್ಲೆಗಳಲ್ಲಿ ಸಂಘಟನಾ ಜಾಲವನ್ನು ವಿಸ್ತರಿಸಿರುವ ಸಹಕಾರ ಭಾರತಿ, ಸಹಕಾರ ಕ್ಷೇತ್ರದ ಬಲವರ್ಧನೆಗಾಗಿ ನಿರಂತರ ಕಾರ್ಯೋನ್ಮುಖವಾಗಿದೆ ಎಂದು ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕರಾದ ಬೋಳ ಸದಾಶಿವ ಶೆಟ್ಟಿ ಹೇಳಿದರು.

    https://chat.whatsapp.com/Ge11n7QCiMj5QyPvCc0H19
    ಕಾರ್ಕಳ ಜೋಡುರಸ್ತೆಯ ರಾಜಾಪುರ ಸಾರಸ್ವತ ಸೊಸೈಟಿಯ ಸಭಾಭವನದಲ್ಲಿ ಶನಿವಾರ ನಡೆದ ತಾಲೂಕು ಸಹಕಾರ ಭಾರತಿ ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿದರು.
    ಕಾರ್ಕಳ ತಾಲೂಕು ಅಧ್ಯಕ್ಷರಾದ ನೀರೆ ರವೀಂದ್ರ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಹಕಾರ ರತ್ನ ಕಡಾರಿ ರವೀಂದ್ರ ಪ್ರಭು, ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹ ಕಾಮತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀಶ್ ನಾಯಕ್ ಉಪಸ್ಥಿತರಿದ್ದರು. ಸಹಕಾರ ಭಾರತಿ ಪರಿಚಯ, ಸಹಕಾರಿ ಕಾಯ್ದೆಗಳು ಮತ್ತು ನಿರ್ದೇಶಕರ ಜವಾಬ್ದಾರಿ” ಈ ವಿಷಯದ ಬಗ್ಗೆ ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ರವರು ಸವಿವರವಾದ ಮಾಹಿತಿ ಮಾರ್ಗದರ್ಶನ ನೀಡಿದರು. ಕಾರ್ಯಕರ್ತ – ಕಾರ್ಯಪದ್ಧತಿ, ಪಂಚಪರಿವರ್ತನೆ – ಸಂಘ ಶತಾಬ್ದಿ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉಡುಪಿ ಜಿಲ್ಲಾ ಪ್ರಚಾರಕರಾದ ಅವನೀಶ್ ಉಪನ್ಯಾಸ ಮಾಡಿದರು.
    ನೀರೆ ರವೀಂದ್ರ ನಾಯಕ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಜಿಲ್ಲಾಧ್ಯಕ್ಷರಾದ ದಿನೇಶ್ ಹೆಗ್ಡೆ ಆತ್ರಾಡಿ ಸಮಾರೋಪ ಮಾತನಾಡಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿಜೇತ್ ಕುಮಾರ್ ಬೆಳ್ಳರ್ಪಾಡಿ, ಜಿಲ್ಲಾ ಉಪಾಧ್ಯಕ್ಷರಾದ ಹರೀಶ್ ಕಲ್ಯಾ ಉಪಸ್ಥಿತರಿದ್ದರು. ತಾಲೂಕು ಕಾರ್ಯದರ್ಶಿ ಸುದೀಪ್ ನಿಟ್ಟೆ ವಂದಿಸಿದರು. ಜಿಲ್ಲಾ ಉಪಾಧ್ಯಕ್ಷ ಮುಂಡ್ಕೂರು ರಘುವೀರ್ ಶೆಣೈ ಕಾರ್ಯಕ್ರಮ ನಿರೂಪಿಸಿದರು. ಅಭ್ಯಾಸ ವರ್ಗದಲ್ಲಿ ಕಾರ್ಕಳ ತಾಲೂಕಿನ 16 ವಿವಿಧ ಸಹಕಾರಿ ಸಂಸ್ಥೆಗಳಿಂದ 40 ಮಂದಿ ನಿರ್ದೇಶಕರುಗಳು ಮತ್ತು ಸಿಬ್ಬಂದಿಗಳು ಹಾಗೂ ಸಹಕಾರಿಗಳು ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Co Operative ministry Cooperative Department Kadari Ravindra Prabhu Rajapura Saraswatha Credit Cooperative Society Sahakara Bharathi
    Previous Articleರಾಜ್ಯದ 14,798 ಸಹಕಾರ ಸಂಘಗಳು ನಷ್ಟದಲ್ಲಿ!!
    Next Article ಬೆಳ್ತಂಗಡಿಯಲ್ಲಿ ಪ್ರವರ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಲೋಕಾರ್ಪಣೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.