ಪುತ್ತೂರು: ಬೆಳ್ತಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೆಲ್ಯಾಡಿ ಶಾಖೆಯ ದಶಮಾನೋತ್ಸವ ಪ್ರಯುಕ್ತ ಮಂಗಳೂರಿನ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎ.ಜೆ ದಂತ ವಿಜ್ಞಾನ ಸಂಸ್ಥೆ ಇದರ ಸಹಯೋಗದೊಂದಿಗೆ ಭಾನುವಾರ ನೆಲ್ಯಾಡಿಯ ಪಿ.ಎಂ.ಶ್ರೀ ಶಾಲೆಯಲ್ಲಿ ಬೃಹತ್ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು.
https://chat.whatsapp.com/GnJ3FvCten7JlVtjNJYA58
ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಬಾಣಜಾಲು ಕಾರ್ಯಕ್ರಮ ಉದ್ಘಾಟಿಸಿದರು. ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಭಗೀರಥ ಜಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ನಿರ್ದೇಶಕ ಚಂದ್ರಶೇಖರ್ ನೆಲ್ಯಾಡಿ, ವರ್ತಕರ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್, ಎ.ಜೆ ಆಸ್ಪತ್ರೆಯ ಡೆಂಟಲ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಸಂದೀಪ್, ನೆಲ್ಯಾಡಿ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ವೀಣಾ ಮಸ್ಕರೇನ್ಹಸ್, ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವಿಶೇಷಾಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದೀಕ್ಷಾ ಬಿ ಪ್ರಾರ್ಥಿಸಿದರು. ಮೋನಪ್ಪ ಪೂಜಾರಿ ಕಂಡೆತ್ಯಾರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ನೆಲ್ಯಾಡಿ ಶಾಖಾ ವ್ಯವಸ್ಥಾಪಕ ಪ್ರದೀಶ್ ನಡುವಾಲ್ ವಂದಿಸಿದರು. ಪೂರ್ಣಿಮಾ ಎ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನಕರ ಕೆ.ಎಚ್, ಸಂಘದ ವಿವಿಧ ಶಾಖೆಗಳ ವ್ಯವಸ್ಥಾಪಕರು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 150ಕ್ಕೂ ಅಧಿಕ ಜನ ಶಿಬಿರದಲ್ಲಿ ಭಾಗವಹಿಸಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com

