Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಾಸ್‌ನಿಂದ ಅಡಕೆಗೆ ಉತ್ತಮ ಧಾರಣೆ
    News

    ಮಾಸ್‌ನಿಂದ ಅಡಕೆಗೆ ಉತ್ತಮ ಧಾರಣೆ

    adminBy adminDecember 17, 2025

    ಮಾಸ್ ಲಿಮಿಟೆಡ್ ಅಧ್ಯಕ್ಷ ಸಹಕಾರ ರತ್ನ ಕೆ.ಸೀತಾರಾಮ ರೈ ಸವಣೂರು ಹೇಳಿಕೆ

    ಸುಳ್ಯ: ಗ್ರಾಮೀಣ ಭಾಗದ ಕೃಷಿಕರು ಬೆಳೆಯುವ ಅಡಕೆಗೆ ಉತ್ತಮ ದರ ನೀಡಲು ಮಾಸ್ ಸಂಸ್ಥೆ ಬದ್ಧವಾಗಿದೆ. ಆದ್ದರಿಂದ ಮಾಸ್ ಅಡಕೆ ಖರೀದಿ ಕೇಂದ್ರದ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕು ಎಂದು ಮಂಗಳೂರು ಮಾಸ್ ಲಿಮಿಟೆಡ್ ಅಧ್ಯಕ್ಷ ಸಹಕಾರ ರತ್ನ ಕೆ.ಸೀತಾರಾಮ ರೈ ಸವಣೂರು ಹೇಳಿದರು.

    https://chat.whatsapp.com/GnJ3FvCten7JlVtjNJYA58
    ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ‘ಮಾಸ್ ಲಿಮಿಟೆಡ್’ನಿಂದ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದಲ್ಲಿ ತೆರೆಯಲಾದ ಅಡಕೆ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
    ಅಡಕೆ ಕೃಷಿಕರ ಹಿತ ಕಾಪಾಡುವ ಹಿತದೃಷ್ಟಿಯಿಂದ 2001ರಲ್ಲಿ ಮಾಸ್ ಸಂಸ್ಥೆ ಆರಂಭಗೊಂಡಿತು. 24 ವರ್ಷಗಳಲ್ಲಿ ಅತ್ಯುತ್ತಮ ಸೇವೆ ನೀಡಿದ್ದು, ಮಾಸ್‌ನ 12ನೇ ಅಡಕೆ ಖರೀದಿ ಕೇಂದ್ರ ಇಲ್ಲಿ ಉದ್ಘಾಟನೆಯಾಗಿದೆ. ಸುಳ್ಯದಲ್ಲಿ ಸುಸಜ್ಜಿತ ಅಡಕೆ ಸಂಸ್ಕರಣಾ ಘಟಕ ಕಾರ್ಯಾಚರಿಸುತ್ತಿದೆ ಎಂದು ಹೇಳಿದರು.
    ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸರ್ಕಾರದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಪಿ.ಸಿ.ಜಯರಾಮ ಅವರನ್ನು ಸನ್ಮಾನಿಸಲಾಯಿತು. ಮಾಸ್ ಸಂಸ್ಥೆ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ನಿರ್ದೇಶಕ ನಿತ್ಯಾನಂದ ಮುಂಡೋಡಿ ಅವರನ್ನು ಸನ್ಮಾನಿಸಲಾಯಿತು. ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪೂರ್ಣಿಮಾ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸ್ಥಾಪಕಾಧ್ಯಕ್ಷ ಪಿ.ಸಿ.ಜಯರಾಮ, ಮಾಸ್ ಸಂಸ್ಥೆ ನಿರ್ದೇಶಕ ನಿತ್ಯಾನಂದ ಮುಂಡೋಡಿ, ಉಬರಡ್ಕ ನರಸಿಂಹ ದೇವಸ್ಥಾನದ ಮೊಕ್ತೇಸರರಾದ ಜತ್ತಪ್ಪ ಗೌಡ, ಉಬರಡ್ಕ- ಮಿತ್ತೂರು ಜೋಡು ದೈವಗಳ ದೈವಸ್ಥಾನ ಅಧ್ಯಕ್ಷ ವೆಂಕಟ್ರಮಣ ಕೆದಂಬಾಡಿ, ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ರವೀಂದ್ರ, ಡಿಸಿಸಿ ಬ್ಯಾಂಕ್ ವಲಯ ಮೇಲ್ವಿಚಾರಕ ರತನ್, ಸಿಇಒ ಜಯಪ್ರಕಾಶ್ ಯು., ಮಾಸ್‌ನ ಮುಖ್ಯ ಮಾರುಕಟ್ಟೆ ಅಧಿಕಾರಿ ಕೆ.ಎಂ.ಲೋಕೇಶ್ ಮತ್ತಿತರರು ಹಾಜರಿದ್ದರು.
    ಮಾಸ್ ಸಿಇಒ ಟಿ.ಮಹಾಬಲೇಶ್ವರ ಭಟ್ ಸ್ವಾಗತಿಸಿದರು. ದೀಕ್ಷಿತಾ ಪ್ರಾರ್ಥಿಸಿದರು. ವಿಜಯಕುಮಾರ್ ಉಬರಡ್ಕ ಕಾರ್ಯಕ್ರಮ ನಿರೂಪಿಸಿದರು. ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ರಾಜೇಶ್ ಭಟ್ ನೆಕ್ಕಿಲ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Areca nut Mass Limited Savanuru Seetharam Rai Ubaradka
    Previous Articleದೇಶದಲ್ಲಿ 48,537 ಸಹಕಾರ ಸಂಘಗಳು ದಿವಾಳಿ ಹಂತದಲ್ಲಿ: 6.56 ಲಕ್ಷಕ್ಕೂ ಅಧಿಕ ಸಂಘಗಳು ಸಕ್ರಿಯ
    Next Article ಸಪ್ತಶ್ರೀ ಸೌಹಾರ್ದ ಸೊಸೈಟಿಗೆ ಅಧ್ಯಯನ ಶಿಬಿರಾರ್ಥಿಗಳ ಭೇಟಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.