ಹಳೆಯಂಗಡಿ: 72ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಣೆಯ ಸಂಧರ್ಭದಲ್ಲಿ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಹಮ್ಮಿಕೊಂಡ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದ ಚಿತ್ರವನ್ನು ಸೋಮವಾರ ಡಾ.ರಾಜೇಂದ್ರ ಕುಮಾರ್ ಅವರಿಗೆ ಹಸ್ತಾಂತರ ಮಾಡಲಾಯಿತು.
https://chat.whatsapp.com/FCEnlTkAKCC0MGPhXtX4i4
ದ.ಕ ಮತ್ತು ಉಡುಪಿ ಜಿಲ್ಲಾಮಟ್ಟದಲ್ಲಿ ಹೈಸ್ಕೂಲ್ ಮಕ್ಕಳಿಗೆ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರ ಭಾವಚಿತ್ರ ರಚಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದ ಚಿತ್ರಕಲೆಯನ್ನು ಅವರಿಗೆ ನೀಡಲಾಯಿತು. ಚಿತ್ರಕಲೆಯನ್ನು ಸ್ವೀಕರಿಸಿ ಮಾತನಾಡಿದ ಡಾ. ರಾಜೇಂದ್ರ ಕುಮಾರ್, ಪ್ರಿಯದರ್ಶಿನಿ ಸೊಸೈಟಿಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಸ್ಥೆಯ ಅಭಿವೃದ್ಧಿಗೆ ಎಸ್ಸಿಡಿಸಿಸಿ ಬ್ಯಾಂಕಿನ ಸಂಪೂರ್ಣ ಸಹಕಾರ ದೊರೆಯಲಿದೆ ಎಂದು ಹೇಳಿದರು.
ಪ್ರಿಯದರ್ಶಿನಿ ಸೊಸೈಟಿ ಅಧ್ಯಕ್ಷರಾದ ಹೆಚ್ ವಸಂತ್ ಬೆರ್ನಾರ್ಡ್, ಸಿಇಒ ಸುದರ್ಶನ್ ಹಾಗೂ ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

