ಮೂಲ್ಕಿ: ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮುಕುಟಕ್ಕೆ ಮತ್ತೊಂದು ಗರಿ ಲಭಿಸಿದೆ. ಮೂಲ್ಕಿ ಅರಮನೆ ವೆಲ್ಫೇರ್ ಪೌಂಡೇಶನ್ & ಚಾರಿಟೇಬಲ್ ಟ್ರಸ್ಟ್ ಹಾಗೂ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಿಂದ ನೀಡಲ್ಪಡುವ ಪ್ರತಿಷ್ಠಿತ ಅರಸು ಪ್ರಶಸ್ತಿ 2025 ಪುರಸ್ಕಾರವನ್ನು ಭಾನುವಾರ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಪ್ರಧಾನಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ಸಂಘದ ಪರವಾಗಿ ಉಪಾಧ್ಯಕ್ಷರಾದ ಜಗದೀಶ್ಚಂದ್ರ ಡಿ.ಕೆ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮೂಲ್ಕಿ ಅರಮನೆ ಅರಸರಾದ ಎಂ. ದುಗ್ಗಣ್ಣ ಸಾವಂತರು, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಡಾ.ದೇವಿಪ್ರಸಾದ್ ಶೆಟ್ಟಿ, ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಬಾಹುಬಲಿ ಪ್ರಸಾದ್, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅದ್ಯಕ್ಷರಾದ ವಸಂತ ಬೆರ್ನಾಡ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್, ಡಾ. ಅಮರಶ್ರೀ ಅಮರನಾಥ ಶೆಟ್ಟಿ, ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ನಮ್ಮ ಕುಡ್ಲ ಚಾನೆಲ್ ನ ಲೀಲಾಕ್ಷ ಕರ್ಕೇರ, ಡಾ.ಗಣೇಶ್ ಅಮೀನ್ ಸಂಕಮಾರ್, ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಹಳೆಯಂಗಡಿ ಶಾಖೆಯ ಶಾಖಾ ವ್ಯವಸ್ಥಾಪಕರಾದ ಶಿವರಾಜ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

