ಮಡಂತ್ಯಾರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಶಾಖೆಯಲ್ಲಿ ಜರುಗಿತು.
https://chat.whatsapp.com/FCEnlTkAKCC0MGPhXtX4i4
ಸಂಘದ ಸದಸ್ಯರಾದ ಮನ್ಮಥ ಕಜೆಕ್ಕಾರ್, ಆನಂದ್ ಎನ್, ಟಿ.ಪದ್ಮನಾಭ ಪೂಜಾರಿ, ರವಿ ಎಸ್, ಹಿತೇಶ್, ಸುರೇಂದ್ರ ಎಸ್ ಹಾಗೂ ಸುಧಾಕರ ಆಚಾರ್ಯ ಇವರು ಉದ್ಘಾಟಿಸಿದರು. ಸಂಘದ ಸದಸ್ಯ ಪ್ರವೀಣ್ ಭಂಡಾರಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ಶಾಖೆಯ ಪ್ರಾರಂಭದಿಂದಲೂ ಉತ್ತಮ ಸೇವೆ ನೀಡುತ್ತಿದ್ದು, ಗ್ರಾಹಕರ ಬೇಡಿಕೆಗಳನ್ನು ಈಡೇರಿಸುತ್ತ ಬರುತ್ತಿದೆ ಎಂದು ತಿಳಿಸಿದರು. ಸದಸ್ಯ ರವಿ ಎಸ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅತೀ ಕಡಿಮೆ ಅವಧಿಯಲ್ಲಿ 33 ಶಾಖೆಗಳನ್ನು ಹೊಂದಿ, ಉತ್ತಮ ಪ್ರಗತಿ ಸಾಧಿಸಿರುವುದು ಶ್ಲಾಘನೀಯ. ಇನ್ನೂ ಹೆಚ್ಚಿನ ಅಭಿವೃದ್ದಿ ಹೊಂದಲಿ ಎಂದು ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಸಂಘದ ಮಡಂತ್ಯಾರು ಶಾಖೆಯು ಪ್ರಾರಂಭದಿಂದಲೂ ಲಾಭದೊಂದಿಗೆ ಮುನ್ನಡೆಯುತ್ತಿದೆ. ಶಾಖೆಯು ಗ್ರಾಹಕರಿಗೆ ವ್ಯವಹರಿಸಲು ಸೂಕ್ತವಾದ ಸ್ಥಳವಾಗಿದ್ದು, ಉತ್ತಮ ಪಾರ್ಕಿಂಗ್ ವ್ಯವಸ್ಥೆ ಹೊಂದಿದೆ. ಅಗತ್ಯದ ಸಂದರ್ಭದಲ್ಲಿ ಮನೆ ಮನೆಗೆ ಭೇಟಿ ನೀಡಿ ಹಿರಿಯ ನಾಗರಿಕರಿಗೆ ಸೇವೆ ನೀಡುತ್ತಿದೆ. ಸಂಘವು ಮಾರ್ಚ್ ವರ್ಷಾಂತ್ಯಕ್ಕೆ 182 ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲ ನೀಡಿದೆ. ಈ ಆರ್ಥಿಕ ವರ್ಷದಲ್ಲಿ 285 ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲ ವಿತರಿಸಿದ್ದು, ಚಿನ್ನಾಭರಣ ಸಾಲ ನೀಡುವುದರಲ್ಲಿ ಉತ್ತಮ ಪ್ರಗತಿ ಸಾಧಿಸಿದೆ. ಚಿನ್ನಾಭರಣ ಸಾಲವನ್ನು ಜನರಿಗೆ ಆಶ್ರಯವಾಗುವಂತಹ ನಿಟ್ಟಿನಲ್ಲಿ ೦% ಸೇವಾ ಶುಲ್ಕದಲ್ಲಿ ನೀಡುತ್ತಿದ್ದೇವೆ ಹಾಗೂ ರಜಾ ದಿನಗಳಲ್ಲಿ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇ-ಸ್ಟಾಂಪ್ ಸೇವೆಯನ್ನೂ ನೀಡುತ್ತಿದ್ದೇವೆ. ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಸಂಘದ ಸದಸ್ಯರ ಆರೋಗ್ಯದ ಕಾಳಜಿಯಿಂದ ಆರೋಗ್ಯ ಶಿಬಿರವನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ. ಜನವರಿ ೧೮ರಂದು ಮಡಂತ್ಯಾರು ಶಾಖೆಯಲ್ಲಿ ಆರೋಗ್ಯ ಶಿಬಿರ ನಡೆಸಲಾಗುವುದು ಎಂದು ತಿಳಿಸಿದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು. ಮಡಂತ್ಯಾರು ಶಾಖೆಯ ಪ್ರಭಾರ ಶಾಖಾಧಿಕಾರಿ ಪ್ರಜ್ಞಾ ಸ್ವಾಗತಿಸಿ, ಶಾಖೆಯ ಸಿಬ್ಬಂದಿ ಶ್ರಾವ್ಯ ವಂದಿಸಿದರು. ಸಿಬ್ಬಂದಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

