Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ನವೀಕರಣ, ಹೊಸ ನೋಂದಣಿ ಪ್ರಾರಂಭ
    News

    ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ನವೀಕರಣ, ಹೊಸ ನೋಂದಣಿ ಪ್ರಾರಂಭ

    adminBy adminJanuary 5, 2026

    ಬಂಟ್ವಾಳ: ಸಹಕಾರ ಸಂಘಗಳಲ್ಲಿನ ಸದಸ್ಯರ ಅನುಕೂಲಕ್ಕೆ ಜಾರಿಯಲ್ಲಿರುವ ಹಾಗೂ ಫಲಾನುಭವಿಗಳ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ. ವೈದ್ಯಕೀಯ ಚಿಕಿತ್ಸಾ ವೆಚ್ಚದ ನಗದುರಹಿತ ಸೌಲಭ್ಯದೊಂದಿಗೆ ಚಾಲ್ತಿಯಲ್ಲಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು 2025-26ನೇ ಸಾಲಿಗೆ ಸಂಬಂಧಿಸಿ ಮರುಜಾರಿಗೊಳಿಸಲಾಗಿದ್ದು,ಈಗಾಗಲೇ ಈ ಯೋಜನೆಯಲ್ಲಿ ನೋಂದಾಯಿಸಿಕೊಂಡ ಸದಸ್ಯರು ನವೀಕರಣ ಮಾಡಬಹುದಾಗಿದೆ. ನೋಂದಣಿ ಮಾಡಿಕೊಳ್ಳದ ಸದಸ್ಯರಿಗೆ ಹೊಸದಾಗಿ ನೋಂದಾಯಿಸಿಕೊಳ್ಳಲೂ ಅವಕಾಶ ಕಲ್ಪಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಈ ಯೋಜನೆ 2025-26ನೇ ಸಾಲಿಗೆ ಸಂಬಂಧಿಸಿ ಚಿಕಿತ್ಸಾ ಅವಧಿಯನ್ನು 01-04-2026ರಿಂದ 31-03-2027ರವರೆಗೆ ನಿಗದಿಗೊಳಿಸಿದ್ದು, 2026ರ ಜನವರಿ 3ರಿಂದ ನೋಂದಣಿಯನ್ನು ಪ್ರಾರಂಭಿಸಿದ್ದು, 2026ರ ಮಾರ್ಚ್ ಅಂತ್ಯದ ತನಕ ನೋಂದಣಿ ದಿನಾಂಕ ನಿಗದಿಗೊಳಿಸಲಾಗಿದೆ. ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಚಿಸುವ ಸಹಕಾರ ಸಂಘಗಳಲ್ಲಿನ ಸದಸ್ಯರು ಆಧಾರ್ ಕಾರ್ಡ್, ಪಡಿತರ ಚೀಟಿಯ ಜೆರಾಕ್ಸ್ ಪ್ರತಿ ಮತ್ತು ಭಾವಚಿತ್ರದೊಂದಿಗೆ ತಾವು ಸದಸ್ಯರು ಆಗಿರುವ ಸಂಘದಲ್ಲಿ ಅರ್ಜಿ ಸಲ್ಲಿಸಬಹುದು. ಸಂಬಂಧಿತ ರೈತ ಸದಸ್ಯರು ಯಾವುದಾದರೂ ಒಂದು ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿ ಒಂದು ತಿಂಗಳು ಪೂರ್ಣಗೊಂಡಿದ್ದರೆ ಈ ಯೋಜನೆಗೆ ಅರ್ಹರಾಗುತ್ತಾರೆ. ಗ್ರಾಮೀಣ ಸಹಕಾರ ಸಂಘಗಳ ವ್ಯಾಪ್ತಿಗೆ ಸಂಬಂಧಿಸಿ ಕುಟುಂಬದಲ್ಲಿ ನಾಲ್ಕು ಮಂದಿ ಸದಸ್ಯರು ಇರುವ ತನಕ ರೂ. 500 ಪಾವತಿಸತಕ್ಕದ್ದು. ಪಡಿತರ ಚೀಟಿಯಲ್ಲಿ 4 ಸದಸ್ಯರ ನಂತರದ ಹೆಚ್ಚಿನ ಪ್ರತಿ ಸದಸ್ಯರಿಗೆ ತಲಾ ರೂ 100 ಪಾವತಿಸತಕ್ಕದ್ದು.
    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರು ಜಾತಿ ಪ್ರಮಾಣಪತ್ರದ ಪ್ರತಿ ಹಾಜರು ಪಡಿಸಿದ್ದಲ್ಲಿ ಉಚಿತವಾಗಿ ನೋಂದಣಿ ಮತ್ತು ನವೀಕರಣ ಮಾಡಿಕೊಡಲಾಗುವುದು. ಆಸಕ್ತ ರೈತ ಸದಸ್ಯರು ಹಾಗೂ ಕುಟುಂಬದವರು ತಮ್ಮ ಕಾರ್ಯವ್ಯಾಪ್ತಿಯ ಸಮೀಪದ ಪ್ರಾಥಮಿಕ ಸಹಕಾರ ಸಂಘಗಳನ್ನು ಸಂಪರ್ಕಿಸಿ ಅಗತ್ಯ ದಾಖಲಾತಿಯೊಂದಿಗೆ ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆಯಬೇಕಾಗಿ ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Prabhakara Prabhu Siddakatte Prathimika Krishi Pattina Sahakara Sangha Yashaswini health Card
    Previous Articleಕಸ ಹಾಕುವ ಮನಸ್ಥಿತಿ ತೊರೆಯಲು ಕಸ ಹೆಕ್ಕುವ ಆಂದೋಲನ
    Next Article ನವಜಾತ ಶಿಶುವಿಗೂ ಯಶಸ್ವಿನಿ ರಕ್ಷಾಕವಚ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.