Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಿಸಿಎಂ ಕೋರ್ಸ್‌ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    News

    ಡಿಸಿಎಂ ಕೋರ್ಸ್‌ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    adminBy adminJanuary 7, 2026

    ಮೂಡುಬಿದಿರೆ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧೀನ ಸಂಸ್ಥೆಯಾದ ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ (ಕೆಐಸಿಎಂ) ಮೂಡುಬಿದಿರೆ (ದಕ್ಷಿಣ ಕನ್ನಡ ಜಿಲ್ಲೆ) ಇಲ್ಲಿನ ಸಹಕಾರ ತರಬೇತಿ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್‌ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ (ಡಿಸಿಎಂ) ತರಬೇತಿಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ಜನವರಿ 15ರ ತನಕ ವಿಸ್ತರಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಸಹಕಾರ ಇಲಾಖೆ ಮತ್ತು ಸಹಕಾರ ಕ್ಷೇತ್ರದ ಸಹಕಾರ ಬ್ಯಾಂಕ್‌, ಡಿಸಿಸಿ ಬ್ಯಾಂಕ್‌, ಅಪೆಕ್ಸ್‌ ಬ್ಯಾಂಕ್‌, ಪ್ರಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಕೆಎಂಎಫ್‌ ಹಾಲು ಒಕ್ಕೂಟ ಮತ್ತು ಇತರ ಎಲ್ಲಾ ವರ್ಗ ಸಹಕಾರ ಸಂಘಗಳ ಉದ್ಯೋಗಗಳ ನೇಮಕಾತಿಯಲ್ಲಿ ಈ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಸುಸಜ್ಜಿತ ಕೊಠಡಿಯಲ್ಲಿ ಸ್ಮಾರ್ಟ್‌ ಕ್ಲಾಸ್‌ ಸಹಿತ ಆರು ತಿಂಗಳ ಕಂಪ್ಯೂಠರ್‌ ತರಬೇತಿ ನೀಡಲಾಗುವುದು. ಸಹಕಾರ ಸಂಘ/ ಸಂಸ್ಥೆಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳ ಪದೋನ್ನತಿಗೆ ಸಹಕಾರ ಸಂಘಗಳ ಕಾಯಿದೆ -1959 ಮತ್ತು ನಿಯಮ 1960ರ 17(!!) (ಎ) ಮತ್ತು (ಬಿ) ಅನುಸಾರ ಈ ಕೋರ್ಸ್‌ ಕಡ್ಡಾಯವಾಗಿದೆ. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಉಚಿತ ವಸತಿ ನಿಲಯದ ವ್ಯವಸ್ಥೆ ಇರುತ್ತದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.600 ಹಾಗೂ ಇತರೆ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500 ರಂತೆ ಶಿಷ್ಯವೇತನ ನೀಡಲಾಗುವುದು. ಸಹಕಾರ ಸಂಘ/ ಸಂಸ್ಥೆಗಳ ಅಧಿಕಾರಿ/ ಸಿಬ್ಬಂದಿಗಳು ದೂರ ಶಿಕ್ಷಣದ ಮೂಲಕ ಡಿಸಿಎಂ ಕೋರ್ಸ್‌ ತರಬೇತಿ ಪಡೆದಯಲು ಅವಕಾಶವಿದೆ. ಸಹಕಾರ ಕ್ಷೇತ್ರ ಮತ್ತು ಇತರೆ ಉದ್ಯೋಗಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈ ಕೋರ್ಸ್‌ ಅನುಕೂಲಕರವಾಗಿದೆ. ಆಸಕ್ತ ಅಭ್ಯರ್ಥಿಗಳು, ಸಹಕಾರ ಸಂಘಗಳ, ಸಂಸ್ಥೆಗಳ, ಸಹಕಾರ ಇಲಾಖೆ ಮತ್ತು ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಕೂಡ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಅರ್ಜಿ ಸಲ್ಲಿಸಲು ಅವಕಾಶವಿದೆ. ಪ್ರವೇಶಾತಿ ಲಿಂಕ್‌: www.kscfdcm.co.in

    ಅರ್ಜಿ ದೊರೆಯುವ ಸ್ಥಳ: ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ಮೂಡುಬಿದಿರೆ, ಲಾಡಿ ಮೂಡುಬಿದಿರೆ ತಾಲೂಕು ದ.ಕ. 574227.
    ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 08258 -236561, 7022429440, 8971361396, 7259729104, 8904585324.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Co Operative ministry Cooperative Cooperative Department DCM Course Laadi Mudubidire
    Previous Articleಪಂಜಿಮೊಗರಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
    Next Article ಜನವರಿ 22ರಂದು ಮೂಡುಬಿದಿರೆ ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.