ಶತಮಾನೋತ್ಸವ ಸಮಾರಂಭ, ಉದ್ದೇಶಿತ ಶತ ಸಂಭ್ರಮ ಕಟ್ಟಡದ ಶಂಕುಸ್ಥಾಪನೆ
ಮಡಿಕೇರಿ: ಇಲ್ಲಿನ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಶತ ಸಂಭ್ರಮ ಸಮಾರಂಭ ಜ.11ರಂದು ನಡೆಯಲಿದ್ದು, ಆ ಪ್ರಯುಕ್ತ ಬೆಳಗ್ಗೆ 9.30ಕ್ಕೆ ಶತ ಸಂಭ್ರಮ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ಮಡಿಕೇರಿಯ ಗುರು ಸದನಲ್ಲಿ ನಡೆಯಲಿದೆ.
https://chat.whatsapp.com/FCEnlTkAKCC0MGPhXtX4i4
ಬೆಳಗ್ಗೆ 10.30ರಿಂದ ಮಡಿಕೇರಿಯ ಗೌಡ ಸಮಾಜ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಶತ ಸಂಭ್ರಮದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆಯ ಶಾಸಕ ಎ.ಎಸ್ ಪೊನ್ನಣ್ಣ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ದೇಶಿತ ಶತ ಸಂಭ್ರಮ ಕಟ್ಟಡದ ನೀಲಿನಕ್ಷೆ ಅನಾವರಣ ಮಾಡಲಿದ್ದಾರೆ. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಸ್ಮರಣ ಸಂಚಿಕೆ, ಕ್ಯಾಲೆಂಡರ್ ಮತ್ತು ಉಡುಗೊರೆ ಅನಾವರಣ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನ ಗೌಡ ಧ್ವಜಾರೋಹಣ ಮಾಡಲಿದ್ದಾರೆ. ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹೆಚ್.ಎಸ್ ಚೇತನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ ಸುಜಾ ಕುಶಾಲಪ್ಪ, ಎಸ್.ಎಲ್ ಭೋಜೇಗೌಡ, ಧನಂಜಯ ಸರ್ಜಿ, ಕೊಡಗು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ, ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಲಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ನಾಗೇಶ್ ಕೆ, ಕೊಡಗು ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಹೆಚ್.ಡಿ ರವಿಕುಮಾರ್, ನಿವೃತ್ತ ಪ್ರಾಂಶುಪಾಲರಾದ ಪ್ರೊ.ಪಟ್ಟದ ಎ.ಪೂವಣ್ಣ, ಕೆಐಒಸಿಎಲ್ ಮಂಗಳೂರು ಇದರ ಡೆಪ್ಯುಟಿ ಜನರಲ್ ಮ್ಯಾನೇಜರ್ ತೇಲಪಂಡ ಎಂ.ಕಾರ್ಯಪ್ಪ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಮಡಿಕೇರಿ ನಗರಸಭೆಯ ಅಧ್ಯಕ್ಷರಾದ ಕಲಾವತಿ, ಕೊಡಗು ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಟಿ.ಆರ್ ಶರವಣಕುಮಾರ್, ಖ್ಯಾತ ಉದ್ಯಮಿ ನಾಪಂಡ ಮುತ್ತಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕೊಡಗು ಜಿಲ್ಲಾ ಉಪನಿರ್ದೇಶಕ ಬಸವರಾಜು, ಡಯಟ್ ಕೂಡಿಗೆ ಇದರ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹೇಶ್ ಆರ್.ಪಿ, ಕೃಷ್ಣಪ್ಪ ಎಂ., ಆನಂದ ಟಿ.ಜಿ., ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷ ಪ್ರಸನ್ನಕುಮಾರ್ ಕೆ.ಎಸ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷರಾದ ಕುಮಾರ್ ಹೆಚ್.ಜಿ., ಹಿರಿಯ ಸಹಕಾರಿ ಬಸವರಾಜ್ ಸಂಗಪ್ಪನವರ್, ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುತ್ತಮ್ಮ ಪಿ.ಎಸ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


