ಮೈಸೂರು: ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ವತಿಯಿಂದ ಮೈಸೂರು ಕುವೆಂಪುನಗರದಲ್ಲಿರುವ ಪ್ರಮತಿ ಹಿಲ್ ವ್ಯೂ ಅಕಾಡೆಮಿ ಪಿ. ಯು ಕಾಲೇಜಿನಲ್ಲಿ ಭಾನುವಾರ ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ಸದಸ್ಯರಿಗೆ ಹಾಗೂ ಸಿಬ್ಬಂದಿಗಳಿಗಾಗಿ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
https://chat.whatsapp.com/FCEnlTkAKCC0MGPhXtX4i4
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ಮಾಜಿ ಅಧ್ಯಕ್ಷರೂ, ಶಿಕ್ಷಣ ಸಲಹಾ ಸಮಿತಿಯ ಸದಸ್ಯರೂ ಆಗಿರುವ ಹೆಚ್.ವಿ. ರಾಜೀವ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೃತ್ತಿಪರ ನಿರ್ದೇಶಕರಾದ ಬಿ.ಮಹದೇವಸ್ವಾಮಿ ಭಾಗವಹಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಎಸ್. ಆರ್. ನಾರಾಯಣ ರಾವ್ ವಹಿಸಿದ್ದರು. ಸಂಯುಕ್ತ ಸಹಕಾರಿಯ ಜಿಲ್ಲಾ ಸಂಯೋಜಕ ಆರ್. ಎಸ್. ಸುರೇಶ್ ಹಾಗೂ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಸಿ. ಭಗೀರಥ ಉಪಸ್ಥಿತರಿದ್ದರು. ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಸುಮಾರು ಹತ್ತು ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

